ಕೋಟಾ; ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಜೆಇಇ ಆಕಾಂಕ್ಷಿ, ಆತ್ಮಹತ್ಯೆ ಶಂಕೆ

ಬುಧವಾರ ರಾತ್ರಿ 10.45ರ ಸುಮಾರಿಗೆ ಪಿಜಿಯಲ್ಲಿ ವಾಸಿಸುತ್ತಿದ್ದ ಇತರ ವಿದ್ಯಾರ್ಥಿಗಳು ಶವವನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
Representative Image
ಪ್ರಾತಿನಿಧಿಕ ಚಿತ್ರ
Updated on

ಕೋಟಾ: ಕೋಟಾದಲ್ಲಿ ಜಂಟಿ ಪ್ರವೇಶ ಪರೀಕ್ಷೆ (ಜೆಇಇ)ಗೆ ತಯಾರಿ ನಡೆಸುತ್ತಿದ್ದ 17 ವರ್ಷದ ಬಾಲಕ ರಾಜೀವ್ ಗಾಂಧಿ ನಗರದಲ್ಲಿರುವ ತನ್ನ ಪೇಯಿಂಗ್ ಗೆಸ್ಟ್ (ಪಿಜಿ) ವಸತಿಗೃಹದಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಇದಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ ಮತ್ತು ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ ಎಂದು ಅವರು ತಿಳಿಸಿದ್ದಾರೆ.

ಮೃತನನ್ನು ಉತ್ತರ ಪ್ರದೇಶದ ಸಂತ ಕಬೀರ್ ನಗರದ ನಿವಾಸಿ ಆರ್ಯನ್ ಓಜಾ ಎಂದು ಗುರುತಿಸಲಾಗಿದೆ. ಅವರು ಈ ವರ್ಷದ ಫೆಬ್ರುವರಿಯಿಂದ ಕೋಟಾದ ಕೋಚಿಂಗ್ ಸಂಸ್ಥೆಯಲ್ಲಿ ಜೆಇಇಗೆ ತಯಾರಿ ನಡೆಸುತ್ತಿದ್ದರು ಮತ್ತು ನಗರದ ರಾಜೀವ್ ಗಾಂಧಿ ನಗರದ ಪಿಜಿಯಲ್ಲಿ ವಾಸಿಸುತ್ತಿದ್ದರು.

ಬುಧವಾರ ರಾತ್ರಿ 10.45ರ ಸುಮಾರಿಗೆ ಪಿಜಿಯಲ್ಲಿ ವಾಸಿಸುತ್ತಿದ್ದ ಇತರ ವಿದ್ಯಾರ್ಥಿಗಳು ಶವವನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

Representative Image
NEET ಪರೀಕ್ಷೆ ರದ್ದು: ಕಲಬುರಗಿಯಲ್ಲಿ ನೀಟ್ ಆಕಾಂಕ್ಷಿ ಆತ್ಮಹತ್ಯೆ

ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಆ ವೇಳೆಗಾಗಲೇ ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು ಎಂದು ಪೊಲೀಸ್ ಉಪ ವರಿಷ್ಠಾಧಿಕಾರಿ ಯೋಗೇಶ್ ಶರ್ಮಾ ಗುರುವಾರ ಸುದ್ದಿಗಾರರಿಗೆ ತಿಳಿಸಿದರು.

ಮೃತದೇಹವನ್ನು ಎಂಬಿಎಸ್ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆಗಾಗಿ ಇರಿಸಲಾಗಿದ್ದು, ಕುಟುಂಬ ಸದಸ್ಯರು ಬಂದ ನಂತರ ಮರಣೋತ್ತರ ಪರೀಕ್ಷೆ ನಡೆಸಲಾಗುವುದು ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com