

ಕೋಲ್ಕತ್ತಾ: ಇತ್ತೀಚಿಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲಿನಿಂದ ಕಂಗೆಟ್ಟಿರುವ ತೃಣಮೂಲ ಕಾಂಗ್ರೆಸ್ ಈಗ ಇಬ್ಭಾಗವಾಗುವ ಆತಂಕದಲ್ಲಿದ್ದು, ಒಬ್ಬರ ನಂತರ ಒಬ್ಬರು ನಾಯಕರು ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದಾರೆ.
ಇದೀಗ ಪಕ್ಷದ ವರಿಷ್ಠೆ ಮಮತಾ ಬ್ಯಾನರ್ಜಿ ಅವರ ಆಪ್ತ ಫಿರ್ಹಾದ್ ಹಕೀಮ್ ಅವರು ಮತ್ತೊಂದು ಶಾಕ್ ನೀಡಿದ್ದು, ಕೋಲ್ಕತ್ತಾ ಮಹಾನಗರ ಪಾಲಿಕೆಯ(ಕೆಎಂಸಿ) ಮೇಯರ್ ಹುದ್ದೆಗೆ ಶುಕ್ರವಾರ ರಾಜೀನಾಮೆ ನೀಡಿದ್ದಾರೆ. ತಾನು ಸರಿಯಾಗಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಹಕೀಮ್ ಆರೋಪಿಸಿದ್ದಾರೆ.
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಸೋಲಿನ ನಂತರ ಪಕ್ಷದೊಳಗೆ ರಾಜಕೀಯ ಗೊಂದಲ ಮುಂದುವರಿದಿರುವ ನಡುವೆ ಮಾಜಿ ರಾಜ್ಯ ಸಚಿವ ಮತ್ತು ಟಿಎಂಸಿಯ ಪ್ರಮುಖ ಮುಖಗಳಲ್ಲಿ ಒಬ್ಬರಾದ ಹಕೀಮ್ ಅವರು ಮೇಯರ್ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.
ರಾಜೀನಾಮೆಯನ್ನು ಸೂಕ್ತ ಅಧಿಕಾರಿಗಳಿಗೆ ರವಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಶಾಸಕರೂ ಆಗಿರುವ ಹಕೀಮ್, ನವೆಂಬರ್ 2018 ರಿಂದ ಕೆಎಂಸಿಯ ಮೇಯರ್ ಆಗಿ ಸೇವೆ ಸಲ್ಲಿಸುತ್ತಿದ್ದರು ಮತ್ತು ಸ್ವಾತಂತ್ರ್ಯದ ನಂತರ ನಗರದ ಮೊದಲ ಮುಸ್ಲಿಂ ಮೇಯರ್ ಆಗಿದ್ದರು.
Advertisement