ಜಂತರ್ ಮಂತರ್‌ನಲ್ಲಿ 'ಕಾಕ್ರೋಜ್ ಜನತಾ ಪಾರ್ಟಿ' ಪ್ರತಿಭಟನೆ: ಆರು ಮಂದಿ ಬಂಧನ

ಯಾವುದೇ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಇಲ್ಲದಂತೆ ಪ್ರತಿಭಟನೆ ಶಾಂತಿಯುತವಾಗಿ ಮುಕ್ತಾಯಗೊಳ್ಳಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
 Cockroach Party stir
ಕಾಕ್ರೋಜ್ ಜನತಾ ಪಾರ್ಟಿ' ಪ್ರತಿಭಟನೆ
Updated on

ನವದೆಹಲಿ: ಜಂತರ್ ಮಂತರ್‌ನಲ್ಲಿ ಕಾಕ್ರೋಜ್ ಜನತಾ ಪಾರ್ಟಿ (CJP) ಪ್ರತಿಭಟನೆಯ ಸಂದರ್ಭದಲ್ಲಿ ಎರಡು ಗುಂಪುಗಳ ನಡುವಿನ ಸಂಭವನೀಯ ಘರ್ಷಣೆ ತಡೆಗಟ್ಟಲು ದೆಹಲಿ ಪೊಲೀಸರು ಶನಿವಾರ ಆರು ಜನರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆನ್‌ಲೈನ್ ಅಭಿಯಾನದ ಬೆಂಬಲಿಗರು ಮತ್ತು ವಿರೋಧಿಗಳ ನಡುವೆ ಸಂಘರ್ಷ ಭುಗಿಲೇಳುವ ಸಾಧ್ಯತೆಯ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದ ನಂತರ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಮುನ್ನೆಚ್ಚರಿಕೆ ಕ್ರಮವಾಗಿ ಆರು ಮಂದಿಯನ್ನು ಬಂಧಿಸಲಾಗಿದೆ.

ಯಾವುದೇ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಇಲ್ಲದಂತೆ ಪ್ರತಿಭಟನೆ ಶಾಂತಿಯುತವಾಗಿ ಮುಕ್ತಾಯಗೊಳ್ಳಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

CJP ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಜನರು ಭಾಗವಹಿಸಿದ್ದರು. ಜಂತರ್ ಮಂತರ್‌ನಲ್ಲಿ ಜಮಾಯಿಸಿದ್ದ ಪ್ರತಿಭಟನಾಕಾರರು ಪರೀಕ್ಷೆಯಲ್ಲಿ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿದರು.

ಪ್ರತಿಭಟನಾ ಸ್ಥಳದ ಬಳಿ ಗಲಾಟೆ ಸೃಷ್ಟಿಸಲು ಪ್ರಯತ್ನಿಸುತ್ತಿರುವಾಗ ಆರು ಜನರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅದೃಷ್ಟವಶಾತ್, ಪರಿಸ್ಥಿತಿ ನಿಯಂತ್ರಣದಲ್ಲಿದೆ ಮತ್ತು ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ.

 Cockroach Party stir
Watch | 'ಕಾಕ್ರೋಚ್ ಜನತಾ ಪಾರ್ಟಿ' ವಿರುದ್ಧ ಜಿರಳೆ ಹೊಡೆದು ಪ್ರತಿಭಟನೆ!

ರಾಷ್ಟ್ರ ರಾಜಧಾನಿಯ ಜಂತರ್ ಮಂತರ್ ಮತ್ತು ಇತರ ಪ್ರಮುಖ ಸ್ಥಳಗಳಲ್ಲಿ ಭಾರೀ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ನವದೆಹಲಿ ಮತ್ತಿತರ ಸೂಕ್ಷ್ಮ ಪ್ರದೇಶಗಳಲ್ಲಿ 1,000 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಗಡಿ ಪ್ರವೇಶ ಸ್ಥಳಗಳಲ್ಲಿ ಹೆಚ್ಚುವರಿ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com