ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೇಡಿಕೆ ಕೇವಲ ಆರಂಭ ಅಷ್ಟೇ.. CJP ಪ್ರತಿಭಟನೆಯಲ್ಲಿ ಸೋನಮ್ ವಾಂಗ್‌ಚುಕ್ ಗುಡುಗು!

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೇಡಿಕೆ ಕೇವಲ ಆರಂಭ ಅಷ್ಟೇ. ಶಿಕ್ಷಣ ವ್ಯವಸ್ಥೆಯನ್ನು ಒಟ್ಟಾರೆಯಾಗಿ ಸುಧಾರಿಸುವುದು ನಮ್ಮ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದರು.
Sonam Wangchuk
ಸೋನಮ್ ವಾಂಗ್‌ಚುಕ್
Updated on

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಕಾಕ್ರೋಚ್ ಜನತಾ ಪಕ್ಷದ ಪ್ರತಿಭಟನೆಯಲ್ಲಿ ಲಡಾಖ್‌ನ ಪ್ರಸಿದ್ಧ ಎಂಜಿನಿಯರ್, ಶಿಕ್ಷಣ ಸುಧಾರಕ ಮತ್ತು ಪರಿಸರ ಹಾಗೂ ಹವಾಮಾನ ಹೋರಾಟಗಾರ ಸೋನಮ್ ವಾಂಗ್ ಚುಕ್ ಭಾಗವಹಿಸಿದ್ದಾರೆ.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ವಾಂಗ್ ಚುಕ್, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೇಡಿಕೆ "ಕೇವಲ ಆರಂಭ" ಅಷ್ಟೇ. ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವುದು ದೊಡ್ಡ ಗುರಿಯಾಗಿದೆ ಎಂದು ಹೇಳಿದರು.

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೇಡಿಕೆ ಕೇವಲ ಆರಂಭ ಅಷ್ಟೇ. ಶಿಕ್ಷಣ ವ್ಯವಸ್ಥೆಯನ್ನು ಒಟ್ಟಾರೆಯಾಗಿ ಸುಧಾರಿಸುವುದು ನಮ್ಮ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದರು.

ಪರೀಕ್ಷಾ ಅಕ್ರಮಗಳು ಮತ್ತು ಪ್ರಶ್ನೆಪತ್ರಿಕೆ ಸೋರಿಕೆಗಳು ಪ್ರಮುಖ ಸಮಸ್ಯೆಗಳಾಗಿವೆ. ಎಲ್ಲರಿಗೂ ಪಾರದರ್ಶಕತೆ, ಹೊಣೆಗಾರಿಕೆ ಮತ್ತು ಗುಣಮಟ್ಟದ ಶಿಕ್ಷಣವನ್ನು ಖಚಿತಪಡಿಸಿಕೊಳ್ಳಲು ಇಡೀ ವ್ಯವಸ್ಥೆಗೆ ಸಮಗ್ರ ಸುಧಾರಣೆಗಳ ಅಗತ್ಯವಿದೆ" ಎಂದು ಅವರು ಹೇಳಿದರು.

Sonam Wangchuk
'ನಮ್ಮ ಪೋಸ್ಟ್‌ಗಳನ್ನು ಡಿಲೀಟ್ ಮಾಡಬಹುದು, ಆದರೆ ನಮ್ಮನ್ನು ಅಳಿಸಲು ಸಾಧ್ಯವಿಲ್ಲ': Cockroach Janta Party ಸಂಸ್ಥಾಪಕ ಅಭಿಜೀತ್ ದೀಪ್ಕೆ
Sonam Wangchuk
Watch | 'ನೀವು ನಮ್ಮ ಪೋಸ್ಟ್‌ಗಳನ್ನು ಡಿಲೀಟ್ ಮಾಡಬಹುದು, ಆದರೆ ನಮ್ಮನ್ನಲ್ಲ'

ಇದಕ್ಕೂ ಮುನ್ನಾ CJP ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ ವಾಂಗ್ ಚುಕ್, ಪ್ರತಿಭಟನೆ ಸಂದರ್ಭದಲ್ಲಿ ಕಾಕ್ರೋಜ್ ಜನತಾ ಪಕ್ಷದ ಸಂಸ್ಥಾಪಕ ಅಭಿಜೀತ್ ದಿಪ್ಕೆ ಅಥವಾ ಗುಂಪಿನ ಯಾವುದೇ ಸದಸ್ಯರನ್ನು ಬಂಧಿಸಿದರೆ, 42 ದಿನಗ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಕೆ ನೀಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com