ವಿಶಾಖಪಟ್ಟಣ ಉಕ್ಕು ಸ್ಥಾವರದಲ್ಲಿ ಭೀಕರ ದುರಂತ: 1600°C ಕುದಿಯುವ ಉಕ್ಕು ಬಿದ್ದು 8 ಕಾರ್ಮಿಕರ ದುರ್ಮರಣ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (ವಿಶಾಖಪಟ್ಟಣಂ ಸ್ಟೀಲ್ ಪ್ಲಾಂಟ್) ನಲ್ಲಿ ಸೋಮವಾರ ದುರಂತ ಸಂಭವಿಸಿದ್ದು ಕನಿಷ್ಠ 8 ಕಾರ್ಮಿಕರು ಸಾವನ್ನಪ್ಪಿದ್ದಾರೆ.
Visakhapatnam Steel Plant
ವಿಶಾಖಪಟ್ಟಣಂ ಸ್ಟೀಲ್ ಪ್ಲಾಂಟ್
Updated on

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (ವಿಶಾಖಪಟ್ಟಣಂ ಸ್ಟೀಲ್ ಪ್ಲಾಂಟ್) ನಲ್ಲಿ ಸೋಮವಾರ ದುರಂತ ಸಂಭವಿಸಿದ್ದು ಕನಿಷ್ಠ 8 ಕಾರ್ಮಿಕರು ಸಾವನ್ನಪ್ಪಿದ್ದಾರೆ. ದುರಂದಲ್ಲಿ ಹಲವಾರು ಕಾರ್ಮಿಕರು ತೀವ್ರವಾಗಿ ಗಾಯಗೊಂಡಿದ್ದಾರೆ. ಕ್ರೇನ್ ಮೂಲಕ ಸಾಗಿಸುತ್ತಿದ್ದ ಬಕೆಟ್‌ನಿಂದ ಕುದಿಯುತ್ತಿದ್ದ ಬಿಸಿಯಾದ ಕರಗಿದ ಉಕ್ಕು ಇದ್ದಕ್ಕಿದ್ದಂತೆ ಕಾರ್ಮಿಕರ ಮೇಲೆ ಬಿದ್ದು ಈ ದುರಂತ ಸಂಭವಿಸಿದೆ.

ಅಪಘಾತದ ಸಮಯದಲ್ಲಿ ಕರಗಿದ ಉಕ್ಕು ಸುಮಾರು 1,600°C ಗರಿಷ್ಠ ತಾಪಮಾನದಲ್ಲಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಘಟನೆಯ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದು, ರಕ್ಷಣಾ ಕಾರ್ಯಾಚರಣೆಗಳನ್ನು ಸಂಘಟಿಸಲು ಮತ್ತು ತ್ವರಿತಗೊಳಿಸಲು ಎಲ್ಲಾ ಸಂಬಂಧಿತ ಇಲಾಖೆಗಳಿಗೆ ನಿರ್ದೇಶನ ನೀಡಿದ್ದಾರೆ.

Visakhapatnam Steel Plant
ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: ಕೂಡಲೇ ಇರಾನ್ ತೊರೆಯಿರಿ; ಭಾರತೀಯರಿಗೆ ಕೇಂದ್ರ ಸರ್ಕಾರ ಸೂಚನೆ!

ಅಪಘಾತವು ಸ್ಥಾವರ ಆವರಣದಲ್ಲಿ ಆತಂಕ ಮನೆ ಮಾಡಿತ್ತು. ಕಾರ್ಮಿಕರು ತಮ್ಮ ಜೀವ ಉಳಿಸಿಕೊಳ್ಳಲು ಅಲ್ಲಿಂದ ಓಡಿ ಹೋದರು. ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ, ಉಕ್ಕು ಸ್ಥಾವರ ಅಧಿಕಾರಿಗಳು ಮತ್ತು ಭದ್ರತಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಿಸಲು ಪ್ರಯತ್ನಗಳನ್ನು ಪ್ರಾರಂಭಿಸಿದರು. ವಿಶಾಖಪಟ್ಟಣಂ ಸ್ಟೀಲ್ ಪ್ಲಾಂಟ್ ಸರ್ಕಲ್ ಇನ್ಸ್‌ಪೆಕ್ಟರ್ ಕೇಶವ್ ರಾವ್ ಅವರ ಪ್ರಕಾರ, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ನಿರಂತರ ಪ್ರಯತ್ನಗಳು ನಡೆಯುತ್ತಿವೆ ಮತ್ತು ಗಾಯಾಳುಗಳನ್ನು ತಕ್ಷಣದ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಾಥಮಿಕ ಮಾಹಿತಿ ಇನ್ನೂ ಸ್ಪಷ್ಟವಾಗಿಲ್ಲ, ಆದರೆ ಈ ಘಟನೆಯು ಮತ್ತೊಮ್ಮೆ ಭಾರೀ ಕೈಗಾರಿಕೆಗಳು ಮತ್ತು ಉಕ್ಕಿನ ಉತ್ಪಾದನಾ ಘಟಕಗಳಲ್ಲಿನ ಸುರಕ್ಷತಾ ಮಾನದಂಡಗಳ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com