INDIA Bloc Meeting Underway: ಬಂಗಾಳದಲ್ಲಿ ಬಿಜೆಪಿ ಗೆಲುವಿಗೆ ಚುನಾವಣಾ ಆಯೋಗ ನೆರವು- ಮಮತಾ ಬ್ಯಾನರ್ಜಿ ಆರೋಪ!

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.
sonia, Mamata and others
ಸೋನಿಯಾ ಗಾಂಧಿ, ಮಮತಾ ಬ್ಯಾನರ್ಜಿ ಮತ್ತಿತರರು ಸಭೆಯಲ್ಲಿ ಭಾಗಿ
Updated on

ನವದೆಹಲಿ: ರಾಷ್ಟ್ರ ರಾಜಧಾನಿಯ ಕಾನ್ಸ್ಟಿಟ್ಯೂಷನ್ ಕ್ಲಬ್‌ನಲ್ಲಿ ವಿಪಕ್ಷಗಳ ಒಕ್ಕೂಟವಾದ ‘ಇಂಡಿಯಾ’ ಬಣದ ಮಹತ್ವದ ‘ಜನಬಂಧನ್’ ಸಭೆಯು ನಡೆಯುತ್ತಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದಾರೆ.

ಈ ವೇಳೆ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ನಡೆದ ಚುನಾವಣಾ ಅಕ್ರಮಗಳ ವಿಷಯವನ್ನು ಎತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

sonia, Mamata and others
ಮೋದಿ ಸರ್ಕಾರದ ವಿರುದ್ಧ ಮಹಾಸಮರಕ್ಕೆ INDIA ಮೈತ್ರಿಕೂಟ ಸಜ್ಜು: ಭಿನ್ನಾಭಿಪ್ರಾಯಗಳ ನಡುವೆಯೂ ಬಲ ತುಂಬುವ ಯತ್ನ, ‘ಒಗ್ಗಟ್ಟೇ ನಮ್ಮ ಶಕ್ತಿ’ ಎಂದ ಮಲ್ಲಿಕಾರ್ಜುನ ಖರ್ಗೆ..!

ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಿಂದ ಬಿಜೆಪಿ ಲಾಭ ಪಡೆದಿದೆ. ಚುನಾವಣಾ ಆಯೋಗದ ಕ್ರಮಗಳು ರಾಜ್ಯದಲ್ಲಿ ಟಿಎಂಸಿಗೆ ಅನಾನುಕೂಲವನ್ನುಂಟು ಮಾಡಿತು ಎಂದು ಹೇಳಿರುವುದಾಗಿ ಸಭೆಯಲ್ಲಿ ಹಾಜರಿದ್ದವರು ತಿಳಿಸಿರುವುದಾಗಿ ಮೂಲಗಳು ಹೇಳಿವೆ.

ಮಮತಾ ಬ್ಯಾನರ್ಜಿ ತೃಣಮೂಲ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರೊಂದಿಗೆ ಸಭೆಯಲ್ಲಿ ಪಾಲ್ಗೊಂಡರು. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್, ಬಿಹಾರ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ , ಸಿಪಿಐ(ಎಂ) ರಾಜ್ಯಸಭಾ ಸಂಸದ ಜಾನ್ ಬ್ರಿಟ್ಟಾಸ್, ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ. ರಾಜಾ, ಸಿಪಿಐ(ಎಂಎಲ್) ಲಿಬರೇಶನ್ ನಾಯಕ ದೀಪಂಕರ್ ಭಟ್ಟಾಚಾರ್ಯ ಮತ್ತು ಇತರ ಎಡಪಂಥೀಯ ನಾಯಕರು ಕೂಡ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com