ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ: 7 ಮಂದಿ ಸುಟ್ಟು ಕರಕಲು!

ರಾಜಸ್ಥಾನದ ರಾಜಧಾನಿ ಜೈಪುರದ ಖೋ-ನಗೋರಿಯನ್ ಪ್ರದೇಶದ ಸಣ್ಣ ಮನೆಯಲ್ಲಿ ಮಂಗಳವಾರ ಸಂಭವಿಸಿದ ಬೆಂಕಿ ಅವಘಡದಲ್ಲಿ ಏಳು ಜನರು ಸಾವನ್ನಪ್ಪಿದ್ದು ಹಲವಾರು ಗಾಯಗೊಂಡಿದ್ದಾರೆ...
Representation purpose only
ಸಂಗ್ರಹ ಚಿತ್ರ
Updated on: 

ರಾಜಸ್ಥಾನದ ರಾಜಧಾನಿ ಜೈಪುರದ ಖೋ-ನಗೋರಿಯನ್ ಪ್ರದೇಶದ ಸಣ್ಣ ಮನೆಯಲ್ಲಿ ಮಂಗಳವಾರ ಸಂಭವಿಸಿದ ಬೆಂಕಿ ಅವಘಡದಲ್ಲಿ ಏಳು ಜನರು ಸಾವನ್ನಪ್ಪಿದ್ದು ಹಲವಾರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆ ಮನೆಯಲ್ಲಿ ಪಟಾಕಿ ಕಾರ್ಖಾನೆ ನಡೆಸಲಾಗುತ್ತಿತ್ತು. ಆದಾಗ್ಯೂ, ಪೊಲೀಸರು ಅಗ್ನಿ ಅವಘಡಕ್ಕೆ ಕಾರಣವನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದಾರೆ.

ಎಸ್‌ಎಂಎಸ್ ಆಸ್ಪತ್ರೆಯ ಸೂಪರಿಂಟೆಂಡೆಂಟ್ ಡಾ. ಮೃಣಾಲ್ ಜೋಶಿ ಅವರು ಸುಟ್ಟ ಗಾಯಗಳಿಂದ ಮೂವರು ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ. ಜೈಪುರ ಕಲೆಕ್ಟರ್ ಸಂದೇಶ್ ನಾಯಕ್ ಸ್ಥಳಕ್ಕೆ ಭೇಟಿ ನೀಡಿದರು. ಅಗ್ನಿಶಾಮಕ ದಳದವರು ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದು ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟ ಸಂಭವಿಸುತ್ತಿದ್ದಂತೆ ಸ್ಥಳೀಯರು ನೀರು ಸುರಿಯುವ ಮೂಲಕ ಮನೆಯ ಒಂದು ಭಾಗಕ್ಕೆ ಪ್ರವೇಶಿಸಿ ಅಲ್ಲಿ ಸಿಲುಕಿಕೊಂಡಿದ್ದ ಕೆಲವರನ್ನು ರಕ್ಷಿಸಿದ್ದಾರೆ. ಈ ಪೈಕಿ ಹಲವು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

Representation purpose only
ಮಣಿಪುರದಲ್ಲಿ ಒಂದು ತಿಂಗಳ ನಂತರ 14 ಕುಕಿ ಒತ್ತೆಯಾಳುಗಳ ಬಿಡುಗಡೆ!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com