ದೀರ್ಘಾವಧಿ ಪ್ರಧಾನಿ ಎಂಬ ಗೌರವಕ್ಕೆ ಪಾತ್ರರಾದ ಮೋದಿಗೆ ವಿಶ್ವ ನಾಯಕರಿಂದ ಅಭಿನಂದನೆಗಳ ಮಹಾಪೂರ; ಹೇಳಿದ್ದೇನು?

ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ 4,398 ದಿನಗಳ ದಾಖಲೆಯನ್ನು ಮುರಿದು 4,399 ದಿನ ಪ್ರಧಾನಿಯಾಗುವ ಮೂಲಕ ದೀರ್ಘಾವಧಿ ಪ್ರಧಾನಿ ಎಂಬ ಗೌರವಕ್ಕೆ ಪಾತ್ರರಾದರು.
PM Narendra Modi
ಪ್ರಧಾನಿ ನರೇಂದ್ರ ಮೋದಿ online desk
Updated on

ಸಿಂಗಾಪುರ/ಜೋಹಾನ್ಸ್‌ಬರ್ಗ್: ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತಿ ಹೆಚ್ಚು ಕಾಲ ಚುನಾಯಿತ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ನರೇಂದ್ರ ಮೋದಿ ಅವರಿಗೆ ಬುಧವಾರ ವಿಶ್ವ ನಾಯಕರು ಅಭಿನಂದಿಸಿದ್ದು, ಅವರ ನಾಯಕತ್ವ ಮತ್ತು ಸಾರ್ವಜನಿಕ ಸೇವೆಗೆ ಸಮರ್ಪಣೆಯನ್ನು ಶ್ಲಾಘಿಸಿದ್ದಾರೆ.

ನರೇಂದ್ರ ಮೋದಿ ಅವರು ಇಂದು(ಜೂ.10) ಅತಿ ಹೆಚ್ಚು ದಿನಗಳ ಕಾಲ ಪ್ರಧಾನಿಯಾದ ಮೈಲಿಗಲ್ಲನ್ನು ತಲುಪಿದರು. ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ 4,398 ದಿನಗಳ ದಾಖಲೆಯನ್ನು ಮುರಿದು 4,399 ದಿನ ಪ್ರಧಾನಿಯಾಗುವ ಮೂಲಕ ದೀರ್ಘಾವಧಿ ಪ್ರಧಾನಿ ಎಂಬ ಗೌರವಕ್ಕೆ ಪಾತ್ರರಾದರು.

ಈ ಸಾಧನೆಗೆ, ಆಸ್ಟ್ರೇಲಿಯಾದ ಪ್ರಧಾನಿ ಸ್ಕಾಟ್ ಮಾರಿಸನ್ ಅವರು ಪ್ರಧಾನಿ ಮೋದಿ ಅವರನ್ನು ಅಭಿನಂದಿಸಿದ್ದು, ಭಾರತದ ಆರ್ಥಿಕತೆಯನ್ನು ಸುಧಾರಿಸಿದ್ದಕ್ಕಾಗಿ ಅವರನ್ನು ಶ್ಲಾಘಿಸಿದ್ದಾರೆ.

PM Narendra Modi
ದೇಶದ ಮೊದಲ ಪ್ರಧಾನಿ ನೆಹರೂ ದಾಖಲೆ ಮುರಿದ ಮೋದಿಗೆ ಸಚಿವ ಸಂಪುಟ ಗೌರವ; ಎದ್ದು ನಿಂತು ಚಪ್ಪಾಳೆ ತಟ್ಟಿದ ಸಚಿವರು!

"ಭಾರತದ ಅತಿ ಹೆಚ್ಚು ಕಾಲ ಚುನಾಯಿತ ಪ್ರಧಾನಿಯಾದ ಪ್ರಧಾನಿ ಮೋದಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಭಾರತದ ಆರ್ಥಿಕತೆ ಮತ್ತು ಜಾಗತಿಕ ಮಟ್ಟದಲ್ಲಿ ದೇಶದ ಸ್ಥಾನಮಾನವನ್ನು ಹೆಚ್ಚಿಸಿದ ನಿಜವಾದ ರಾಜಕಾರಣಿ. ನಾವು ಒಟ್ಟಾಗಿ ನಿರ್ಮಿಸಿದ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯ ಬಗ್ಗೆ ಹೆಮ್ಮೆಪಡುತ್ತೇವೆ" ಎಂದು ಮಾರಿಸನ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.

ಮಲೇಷ್ಯಾದ ಪ್ರಧಾನಿ ಅನ್ವರ್ ಇಬ್ರಾಹಿಂ ಅವರು, ಭಾರತದ ಅಭಿವೃದ್ಧಿಯನ್ನು ಮುನ್ನಡೆಸುವಲ್ಲಿ ಮೋದಿ ಅವರ ಸಮರ್ಪಿತ ಸಾರ್ವಜನಿಕ ಸೇವೆ ಮತ್ತು ನಾಯಕತ್ವಕ್ಕಾಗಿ ಅಭಿನಂದನೆ ಸಲ್ಲಿಸಿದ್ದಾರೆ.

"ಈ ಸಾಧನೆಯು ಭಾರತದ ಅಭಿವೃದ್ಧಿ, ಸಮೃದ್ಧಿ ಮತ್ತು ಜಾಗತಿಕ ವೇದಿಕೆಯಲ್ಲಿ ಸ್ಥಾನವನ್ನು ಹೆಚ್ಚಿಸುವಲ್ಲಿ ಅವರ ವರ್ಷಗಳ ಸಮರ್ಪಿತ ಸಾರ್ವಜನಿಕ ಸೇವೆ ಮತ್ತು ನಾಯಕತ್ವಕ್ಕೆ ಸಾಕ್ಷಿಯಾಗಿದೆ" ಎಂದು ಇಬ್ರಾಹಿಂ ಹೇಳಿದ್ದಾರೆ.

ಶ್ರೀಲಂಕಾ ಅಧ್ಯಕ್ಷ ಅನುರ ಕುಮಾರ ದಿಸಾನಾಯಕ ಅವರು, ಈ ಮೈಲಿಗಲ್ಲು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದ ಜನರು ನಿಮ್ಮ ನಾಯಕತ್ವದ ಮೇಲೆ ಪದೇ ಪದೇ ಇಟ್ಟಿರುವ ನಂಬಿಕೆಯನ್ನು ಪ್ರತಿಬಿಂಬಿಸುತ್ತದೆ ಎಂದಿದ್ದಾರೆ. (2022 ರ ಆರ್ಥಿಕ ಬಿಕ್ಕಟ್ಟಿನ ವೇಳೆ ಭಾರತ ನೀಡಿದ ಬೆಂಬಲ ಹಾಗೂ 2025 ರಲ್ಲಿ ಪ್ರಧಾನಿ ಮೋದಿಯವರಿಗೆ ಲಂಕಾದ ಅತ್ಯುನ್ನತ ‘ಮಿತ್ರ ವಿಭೂಷಣ’ ಗೌರವ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು).

ನೈಜೀರಿಯಾ ಅಧ್ಯಕ್ಷ ಬೋಲಾ ಅಹ್ಮದ್ ಟಿನುಬು ಅವರು, ಈ ಐತಿಹಾಸಿಕ ಸಾಧನೆಯು ಭಾರತದ ಜನರು ಸತತ ಮೂರು ಅವಧಿಗಳಲ್ಲಿ ಅವರ ನಾಯಕತ್ವದ ಮೇಲೆ ಇಟ್ಟಿರುವ ಅಚಲ ವಿಶ್ವಾಸಕ್ಕೆ ಸಾಕ್ಷಿ. ಪ್ರಧಾನಿ ಮೋದಿ ಅವರು ನೈಜೀರಿಯಾದ ಆಪ್ತ ಸ್ನೇಹಿತ. ಅವರ ಬುದ್ಧಿವಂತಿಕೆ ಮತ್ತು ಧೈರ್ಯ ಪ್ರಪಂಚದಾದ್ಯಂತ ಲಕ್ಷಾಂತರ ಜನರಿಗೆ ಸ್ಫೂರ್ತಿಯಾಗಿದೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com