ಜೈಪುರದಲ್ಲಿ ಲಂಚ ಪಡೆಯುತ್ತಿದ್ದಾಗ ಸಿಕ್ಕಿಬಿದ್ದ ಬೆಂಗಳೂರು ಪೊಲೀಸರು!

ಆರೋಪಿಗಳನ್ನು ಎಚ್‌ಎಎಲ್ ಪೊಲೀಸ್ ಠಾಣೆಗೆ ಸೇರಿದ ಮಹಿಳಾ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ ಅನಿತಾ ಕೆ ಮತ್ತು ಹೆಡ್ ಕಾನ್‌ಸ್ಟೆಬಲ್‌ಗಳಾದ ಉಳ್ಳವಪ್ಪ ತೇಗೂರ್ ಮತ್ತು ಯತೀಶ್ ಎಂದು ಗುರುತಿಸಲಾಗಿದೆ.
Anitha
ಪೊಲೀಸ್ ಸಬ್-ಇನ್ಸ್‌ಪೆಕ್ಟರ್ ಅನಿತಾ
Updated on

ಜೈಪುರ: ವರದಕ್ಷಿಣೆ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲು ಜೈಪುರಕ್ಕೆ ಹೋಗಿದ್ದ ಎಚ್‌ಎಎಲ್ ಪೊಲೀಸ್ ಠಾಣೆಗೆ ಸೇರಿದ ಮಹಿಳಾ ಸಬ್-ಇನ್ಸ್‌ಪೆಕ್ಟರ್ ಮತ್ತು ಇಬ್ಬರು ಕಾನ್‌ಸ್ಟೆಬಲ್‌ಗಳು ಭಾನುವಾರ ಜೈಪುರದ ಹೋಟೆಲ್‌ನಲ್ಲಿ ಲಂಚ ಸ್ವೀಕರಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ.

ಇಬ್ಬರು ಅಧಿಕಾರಿಗಳು 40,000 ರೂ. ಲಂಚ ಪಡೆದ ಆರೋಪದ ಮೇಲೆ ರಾಜಸ್ಥಾನ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ಬಲೆಗೆ ಬಿದ್ದಿರುವುದು ಬೆಂಗಳೂರು ನಗರ ಪೊಲೀಸರಿಗೆ ದೊಡ್ಡ ಮುಜುಗರವನ್ನುಂಟು ಮಾಡಿದೆ.

ಆರೋಪಿಗಳನ್ನು ಎಚ್‌ಎಎಲ್ ಪೊಲೀಸ್ ಠಾಣೆಗೆ ಸೇರಿದ ಮಹಿಳಾ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ ಅನಿತಾ ಕೆ ಮತ್ತು ಹೆಡ್ ಕಾನ್‌ಸ್ಟೆಬಲ್‌ಗಳಾದ ಉಳ್ಳವಪ್ಪ ತೇಗೂರ್ ಮತ್ತು ಯತೀಶ್ ಎಂದು ಗುರುತಿಸಲಾಗಿದೆ.

ಟಿಎನ್‌ಐಇ ಜೊತೆ ಮಾತನಾಡಿದ ಉಪ ಪೊಲೀಸ್ ಆಯುಕ್ತ (ವೈಟ್‌ಫೀಲ್ಡ್ ವಿಭಾಗ) ಸೈದುಲು ಅಡವತ್, ಪ್ರಾಥಮಿಕ ಮಾಹಿತಿಯ ಪ್ರಕಾರ, ರಾಜಸ್ಥಾನದ ಜೈಪುರದಲ್ಲಿ ಒಬ್ಬ ಕಾನ್‌ಸ್ಟೆಬಲ್ ಲಂಚ ಸ್ವೀಕರಿಸುವಾಗ ಎಸಿಬಿ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ ಎಂದು ಹೇಳಿದರು. ಎಚ್‌ಎಎಲ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ವರದಕ್ಷಿಣೆ ಕಿರುಕುಳ ಪ್ರಕರಣದ ತನಿಖೆಗಾಗಿ ಮೂವರು ಸಿಬ್ಬಂದಿ ಅಲ್ಲಿಗೆ ಹೋಗಿದ್ದರು. ಅವರನ್ನು ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ ಎಂದು ಅವರು ಹೇಳಿದರು.

ಎಸಿಬಿ ಪ್ರಕಾರ, ಬೆಂಗಳೂರಿನ ಎಚ್‌ಎಎಲ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ದೂರುದಾರರು ಮತ್ತು ಅವರ ಕುಟುಂಬ ಸದಸ್ಯರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ದೂರು ಬಂದಿದೆ. ಮಹಿಳಾ ಸಬ್ ಇನ್ಸ್‌ಪೆಕ್ಟರ್ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿ ಪ್ರಕರಣದ ತನಿಖೆಗಾಗಿ ಜೈಪುರಕ್ಕೆ ಬಂದಿದ್ದರು ಮತ್ತು ಪ್ರಕರಣವನ್ನು ದುರ್ಬಲಗೊಳಿಸಲು ಮತ್ತು ಕುಟುಂಬ ಸದಸ್ಯರನ್ನು ಆರೋಪಗಳಿಂದ ಮುಕ್ತಗೊಳಿಸಲು 2 ಲಕ್ಷ ರೂ.ಗಳಿಗೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

Anitha
ಲಂಚ ನೀಡಲಿಲ್ಲ ಎಂದು ಮತ್ತೆ ಬಾಲಕಿಯ ಕಾಲು ಮುರಿದ ವೈದ್ಯರು: ತನಿಖೆಗೆ ಆದೇಶ

ವರದಕ್ಷಿಣೆ ಕಿರುಕುಳ ಪ್ರಕರಣದ ಆರೋಪಿಗಳಿಗೆ ಹಣ ಹೊಂದಿಸಲು ಪೊಲೀಸ್ ಸಿಬ್ಬಂದಿ ಸೂಚಿಸಿದ್ದರು ಮತ್ತು ಮರುದಿನ (ಭಾನುವಾರ) ಬೆಳಿಗ್ಗೆ ಅದನ್ನು ಸಂಗ್ರಹಿಸಲು ಹೋಟೆಲ್‌ಗೆ ಬಂದರು ಎಂದು ಹೇಳಲಾಗಿದೆ. ದೂರಿನ ಮೇರೆಗೆ ಎಸಿಬಿ ಜೈಪುರದ ಹೋಟೆಲ್ ಗಂಗೌರ್‌ನಲ್ಲಿ ಬಲೆ ಬೀಸಿತು. ಕಾರ್ಯಾಚರಣೆಯ ಸಮಯದಲ್ಲಿ, ಹೆಡ್ ಕಾನ್‌ಸ್ಟೆಬಲ್ ಉಳ್ಳವಪ್ಪ ತೇಗೂರ್ ಲಂಚದ ಮೊತ್ತದಲ್ಲಿ 40,000 ರೂ.ಗಳನ್ನು ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದರು.

ಹೆಚ್ಚಿನ ತನಿಖೆಯಲ್ಲಿ ಇತರ ಇಬ್ಬರು ಪೊಲೀಸ್ ಸಿಬ್ಬಂದಿ ಭಾಗಿಯಾಗಿರುವುದು ಬಹಿರಂಗವಾಯಿತು, ಅವರನ್ನು ನಂತರ ಬಂಧಿಸಲಾಯಿತು. ಭ್ರಷ್ಟಾಚಾರ ತಡೆ ಕಾಯ್ದೆಯಡಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com