ಚೆನ್ನೈ: 3 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಚಿಕಿತ್ಸೆ ಫಲಿಸದೆ ಮಗು ಸಾವು, ಆರೋಪಿ ಬಂಧನ

ಭಾನುವಾರ ರಾತ್ರಿ, ಬಾಲಕಿ ಗುಮ್ಮಿಡಿಪೂಂಡಿ ಬಳಿಯ ಪುದುಪೆಟ್ಟೈನಲ್ಲಿರುವ ಬೀದಿಯಲ್ಲಿ ಇತರ ಮಕ್ಕಳೊಂದಿಗೆ ಆಟವಾಡುತ್ತಿದ್ದು, ತಿಂಡಿ ಕೊಡಿಸುವ ನೆಪದಲ್ಲಿ ಬಾಲಕಿಯನ್ನು ಆರೋಪಿ ಕರೆದೊಯ್ದಿದ್ದಾನೆ.
File photo
ಸಂಗ್ರಹ ಚಿತ್ರ
Updated on

ಚೆನ್ನೈ: 19 ವರ್ಷದ ಯುವಕನಿಂದ ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದ ಮೂರು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ ಗುಮ್ಮಿಡಿಪೂಂಡಿಯಲ್ಲಿ ಸೋಮವಾರ ನಡೆದಿದೆ.

ಬಾಲಕಿಯ ಪೋಷಕರು ಸಿಪ್ಕಾಟ್ ಕೈಗಾರಿಕಾ ಎಸ್ಟೇಟ್‌ನಲ್ಲಿರುವ ಉಕ್ಕಿನ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಆರೋಪಿ ಕೂಡ ಅದೇ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ. ಅಲ್ಲದೆ, ನೆರೆಮನೆಯಲ್ಲಿ ವಾಸವಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಭಾನುವಾರ ರಾತ್ರಿ, ಬಾಲಕಿ ಗುಮ್ಮಿಡಿಪೂಂಡಿ ಬಳಿಯ ಪುದುಪೆಟ್ಟೈನಲ್ಲಿರುವ ಬೀದಿಯಲ್ಲಿ ಇತರ ಮಕ್ಕಳೊಂದಿಗೆ ಆಟವಾಡುತ್ತಿದ್ದು, ತಿಂಡಿ ಕೊಡಿಸುವ ನೆಪದಲ್ಲಿ ಬಾಲಕಿಯನ್ನು ಆರೋಪಿ ಕರೆದೊಯ್ದಿದ್ದಾನೆ.

ಬಳಿಕ ಜನ ಸಂಚಾರ ಕಡಿಮೆ ಇರುವ ಸ್ಥಳಕ್ಕೆ ಕರೆದೊಯ್ದು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ಘಟನೆ ಗಮನಿಸಿದ ದಾರಿಹೋಕರೊಬ್ಬರು ಕೂಗಿಕೊಂಡು ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ.

File photo
ಅಪ್ರಾಪ್ತ ಫುಟ್ಬಾಲ್ ಆಟಗಾರ್ತಿ ಮೇಲೆ 3 ವರ್ಷ ಅತ್ಯಾಚಾರ, ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್; ಕೋಚ್ ಬಂಧನ!

ಸ್ಥಳಕ್ಕೆ ಜಮಾಯಿಸಿದ ಸಾರ್ವಜನಿಕರು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಪರಾರಿಯಾಗಲು ಯತ್ನಿಸಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ಬಂಧಿಸಿದ್ದಾರೆ.

ಗಂಭೀರ ಸ್ಥಿತಿಯಲ್ಲಿದ್ದ ಬಾಲಕಿಯನ್ನು ಮೊದಲು ಕೊಟ್ಟಕರೈ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಚೆನ್ನೈನ ಸ್ಟ್ಯಾನ್ಲಿ ಗವರ್ನಮೆಂಟ್ ಹಾಸ್ಪಿಟಲ್'ಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಬೆಳಿಗ್ಗೆ ಮಗು ಮೃತಪಟ್ಟಿದೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದು, ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com