ಹಿಮಾಚಲದಲ್ಲಿ ಭೀಕರ ಅಪಘಾತ: ಪ್ರಪಾತಕ್ಕೆ ಬಿದ್ದ ಬೊಲೆರೊ; ಏಳು ಮಂದಿ ದುರ್ಮರಣ

ಮಸ್ರುಂದ್-ಹಮಾಲ್ ರಸ್ತೆಯಲ್ಲಿ ಬುಧವಾರ ಮಧ್ಯ ರಾತ್ರಿ 2 ಗಂಟೆಯ ಸುಮಾರಿಗೆ ಈ ಭೀಕರ ಅಪಘಾತ ಸಂಭವಿಸಿದೆ. ವಾಹನವು ಚಾಲಕನ ನಿಯಂತ್ರಣ ಕಳೆದುಕೊಂಡು ಆಳವಾದ ಕಂದಕಕ್ಕೆ ಉರುಳಿ ಬಿದ್ದಿದ್ದು, ಅಪಘಾತದ ತೀವ್ರತೆಗೆ ವಾಹನವು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
Seven killed after vehicle plunges into gorge on Masrund–Hamal road in Himachal
ಪ್ರಪಾತಕ್ಕೆ ಬಿದ್ದ ಬೊಲೆರೊ
Updated on

ಶಿಮ್ಲಾ: ಹಿಮಾಚಲ ಪ್ರದೇಶದ ಚಂಬಾದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಬೊಲೆರೊ ವಾಹನವೊಂದು ಆಳವಾದ ಪ್ರಪಾತಕ್ಕೆ ಉರುಳಿ ಬಿದ್ದ ಪರಿಣಾಮ ಏಳು ಜನ ಮೃತಪಟ್ಟಿದ್ದಾರೆ.

ಮಸ್ರುಂದ್-ಹಮಾಲ್ ರಸ್ತೆಯಲ್ಲಿ ಬುಧವಾರ ಮಧ್ಯ ರಾತ್ರಿ 2 ಗಂಟೆಯ ಸುಮಾರಿಗೆ ಈ ಭೀಕರ ಅಪಘಾತ ಸಂಭವಿಸಿದೆ. ವಾಹನವು ಚಾಲಕನ ನಿಯಂತ್ರಣ ಕಳೆದುಕೊಂಡು ಆಳವಾದ ಕಂದಕಕ್ಕೆ ಉರುಳಿ ಬಿದ್ದಿದ್ದು, ಅಪಘಾತದ ತೀವ್ರತೆಗೆ ವಾಹನವು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ವಾಹನದಲ್ಲಿದ್ದ ಏಳು ಮಂದಿಯೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರಲ್ಲಿ ಮೂವರು ಮಹಿಳೆಯರು ಮತ್ತು ಮೂವರು ಪುರುಷರು ಸೇರಿದ್ದಾರೆ. ಅಧಿಕಾರಿಗಳು ಮೃತರ ಗುರುತು ಪತ್ತೆ ಹಚ್ಚು ಕಾರ್ಯ ನಡೆಸುತ್ತಿದ್ದಾರೆ.

Seven killed after vehicle plunges into gorge on Masrund–Hamal road in Himachal
ಹಿಮಾಚಲದಲ್ಲಿ ಭಯಾನಕ ಅಪಘಾತ: ಪ್ರಪಾತಕ್ಕೆ ಬಿದ್ದ ಟ್ಯಾಕ್ಸಿ; ಬೆಂಗಳೂರಿನ ಕುಟುಂಬ ಸೇರಿ 8 ಪ್ರವಾಸಿಗರು ಸಾವು

ಮೃತಪಟ್ಟವರೆಲ್ಲರೂ ಕುತೇಡ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಹಲ್ ಗ್ರಾಮದ ನಿವಾಸಿಗಳಾಗಿದ್ದಾರೆ. ಇವರೆಲ್ಲರೂ ಕಾಕ್ರೋಧಾ ಗ್ರಾಮದಲ್ಲಿ ನಡೆದ ಸಮಾರಂಭ ಮುಗಿಸಿಕೊಂಡು ಮನೆಗೆ ಹಿಂತಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು, ಜಿಲ್ಲಾಡಳಿತ ಅಧಿಕಾರಿಗಳು ಮತ್ತು ಸ್ಥಳೀಯ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿದರು. ಆದರೆ, ದಟ್ಟ ಕತ್ತಲೆ ಮತ್ತು ಕಡಿದಾದ ಗುಡ್ಡಗಾಡು ಪ್ರದೇಶವಾಗಿದ್ದರಿಂದ ಕಂದಕಕ್ಕೆ ಇಳಿದು ಮೃತದೇಹಗಳನ್ನು ಹೊರತೆಗೆಯಲು ರಕ್ಷಣಾ ತಂಡಗಳು ತೀವ್ರ ಸವಾಲು ಎದುರಿಸಬೇಕಾಯಿತು.

ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

Download the KannadaPrabha News app to follow the latest news updates

Subscribe and Receive exclusive content and updates on your favorite topics

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com