ರಾಜಕೀಯ ಭಿನ್ನಾಭಿಪ್ರಾಯಗಳ ಬದಿಗೊತ್ತಿ ರಾಹುಲ್ ಗಾಂಧಿಗೆ ಜನ್ಮದಿನದ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ವರಿಗೆ ಜನ್ಮದಿನದ ಶುಭಾಶಯಗಳು. ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ದೊರಕಲಿ ಎಂದು ಪ್ರಾರ್ಥಿಸುತ್ತೇನೆ.
Narendra Modi- Rahul Gandhi
ನರೇಂದ್ರ ಮೋದಿ- ರಾಹುಲ್ ಗಾಂಧಿonline desk
Updated on

ನವದೆಹಲಿ: ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು 56ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಭಾಶಯಗಳನ್ನು ಕೋರಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ (X) ನಲ್ಲಿ ಶುಕ್ರವಾರ ಸಂದೇಶ ಹಂಚಿಕೊಂಡಿರುವ ಪ್ರಧಾನಿ ಮೋದಿ, ರಾಹುಲ್ ಗಾಂಧಿ ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ಸಿಗಲಿ ಎಂದು ಹಾರೈಸಿದ್ದಾರೆ.

“ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ವರಿಗೆ ಜನ್ಮದಿನದ ಶುಭಾಶಯಗಳು. ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ದೊರಕಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರೂ ಕೂಡ ರಾಹುಲ್ ಗಾಂಧಿಯವರಿಗೆ ಶುಭಾಶಯಗಳನ್ನು ಕೋರಿದ್ದಾರೆ. ರಾಹುಲ್ ಗಾಂಧಿಯವರ ಸಾರ್ವಜನಿಕ ಜೀವನ, ಜನಪರ ರಾಜಕಾರಣ ಮತ್ತು ಸಂವಿಧಾನ ಮೌಲ್ಯಗಳ ಮೇಲಿನ ಬದ್ಧತೆಯನ್ನು ಅವರು ಪ್ರಶಂಸಿಸಿದ್ದಾರೆ.

ಯುವಕರ ಆಶಯಗಳು, ರೈತರ ಕಳವಳಗಳು, ಮಹಿಳೆಯರ ಕನಸುಗಳು ಹಾಗೂ ಅಂಚಿನಲ್ಲಿರುವ ಸಮುದಾಯಗಳ ಧ್ವನಿಯನ್ನು ರಾಷ್ಟ್ರೀಯ ಚರ್ಚೆಯ ಕೇಂದ್ರಬಿಂದುವಿಗೆ ತರುವ ಪ್ರಯತ್ನವನ್ನು ನೀವು ನಿರಂತರವಾಗಿ ಮಾಡಿದ್ದೀರಿ. ನಿಮ್ಮ ರಾಜಕೀಯವು ಕರುಣೆ, ಒಳಗೊಳ್ಳುವಿಕೆ ಮತ್ತು ಭಾರತದ ಪರಿಕಲ್ಪನೆಯ ಮೇಲಿನ ಆಳವಾದ ಬದ್ಧತೆಯಿಂದ ರೂಪುಗೊಂಡಿದೆ.

Narendra Modi- Rahul Gandhi
ನಾನು 20 ವರ್ಷದಲ್ಲಿ ಮಾಡಲಾಗದ್ದನ್ನು ನನ್ನ ತಂಗಿ 5 ನಿಮಿಷದಲ್ಲಿ ಮಾಡಿ ತೋರಿದಳು; ನಮ್ ಇಬ್ರಿಗೂ ಹೆಂಡ್ತಿ ಸಮಸ್ಯೆ ಇಲ್ಲ: ನಗೆಗಡಲಲ್ಲಿ ತೇಲಿಸಿದ Rahul gandhi

ಅಲ್ಲದೆ, ನಮ್ಮ ನಡುವಿನ ಒಡನಾಟ ಹಾಗೂ ವರ್ಷಗಳ ಕಾಲ ನಡೆದ ಅನೇಕ ಸಂವಾದಗಳನ್ನು ನಾನು ಸದಾ ಮೌಲ್ಯಯುತವಾಗಿ ಪರಿಗಣಿಸಿದ್ದೇನೆ. ಜನಸೇವೆ ಮತ್ತು ಸಂವಿಧಾನದ ಮೌಲ್ಯಗಳನ್ನು ಎತ್ತಿಹಿಡಿಯುವ ನಮ್ಮ ಸಾಮಾನ್ಯ ಬದ್ಧತೆಯಲ್ಲಿ ನಿಮ್ಮೊಂದಿಗೆ ಹೆಜ್ಜೆ ಹಾಕಿರುವುದು ನನಗೆ ಹೆಮ್ಮೆಯ ವಿಷಯ.

ರಾಹುಲ್ ಗಾಂಧಿ ಅವರಿಗೆ ಉತ್ತಮ ಆರೋಗ್ಯ, ಸಂತೋಷ ಹಾಗೂ ರಾಷ್ಟ್ರಸೇವೆಯಲ್ಲಿ ಇನ್ನಷ್ಟು ವರ್ಷಗಳ ಕಾಲ ತೊಡಗಿಸಿಕೊಳ್ಳುವ ಶಕ್ತಿ ದೊರಕಲಿ. “ಸಾಮಾನ್ಯ ಜನರ ಧ್ವನಿಯನ್ನು ಸದಾ ಆಲಿಸಬೇಕು ಎಂಬ ನಿಮ್ಮ ದೃಢ ನಂಬಿಕೆ ಹಾಗೂ ಪ್ರಾಮಾಣಿಕತೆಯ ಮೂಲಕ ನೀವು ಲಕ್ಷಾಂತರ ಮಂದಿಗೆ ಪ್ರೇರಣೆಯಾಗುತ್ತಿರಲಿ ಎಂದು ಶುಭ ಕೋರಿದ್ದಾರೆ.

ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ಪ್ರತಿಪಕ್ಷ ನಾಯಕನಾಗಿರುವ ರಾಹುಲ್ ಗಾಂಧಿ ಇಂದು ತಮ್ಮ 56ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದು, ದೇಶದ ವಿವಿಧ ರಾಜಕೀಯ ಪಕ್ಷಗಳ ನಾಯಕರು, ಕಾರ್ಯಕರ್ತರು ಹಾಗೂ ಬೆಂಬಲಿಗರಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.

X

Advertisement

X
Kannada Prabha
www.kannadaprabha.com