ಹೈದರಾಬಾದ್‌: ಪರೀಕ್ಷೆಗೆ ಒಂದೇ ದಿನ ಬಾಕಿ ಇರುವಾಗ ನೀಟ್ ಆಕಾಂಕ್ಷಿ ಆತ್ಮಹತ್ಯೆ, ಡೆತ್ ನೋಟ್ ಪತ್ತೆ!

ದೇಶದ 551 ನಗರಗಳು ಮತ್ತು ವಿದೇಶದ 14 ನಗರಗಳಲ್ಲಿ ಮಧ್ಯಾಹ್ನ 2 ರಿಂದ 5 ಗಂಟೆ 15 ನಿಮಿಷದವರೆಗೆ ನೀಟ್ ಮರುಪರೀಕ್ಷೆ ನಡೆಯಲಿದೆ.
Representative Image
ಪ್ರಾತಿನಿಧಿಕ ಚಿತ್ರAI-generated representative image
Updated on

ಹೈದರಾಬಾದ್: ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನೀಟ್-ಯುಜಿ ಮರುಪರೀಕ್ಷೆಯು ಭಾನುವಾರ (ಜೂನ್ 21) ನಡೆಯಲಿದ್ದು, 19 ವರ್ಷದ ನೀಟ್ ಆಕಾಂಕ್ಷಿಯೊಬ್ಬರು ಹೈದರಾಬಾದ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಮಿಯಾಪುರದ ಅಪಾರ್ಟ್‌ಮೆಂಟ್‌ನಲ್ಲಿ ತನ್ನ ಸಹೋದರಿಯರೊಂದಿಗೆ ವಾಸಿಸುತ್ತಿದ್ದ ಯುವತಿ ಶನಿವಾರ ನೇಣು ಬಿಗಿದುಕೊಂಡು ಸಾವಿಗೀಡಾಗಿದ್ದಾರೆ ಎಂದು ಪ್ರಾಥಮಿಕ ತನಿಖೆಯ ಆಧಾರದ ಮೇಲೆ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೃತರು ಬರೆದಿದ್ದಾರೆಂದು ಹೇಳಲಾದ ಡೆತ್ ನೋಟ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಅದರಲ್ಲಿ 'ತನ್ನ ಸಾವಿಗೆ ಯಾರೂ ಕಾರಣರಲ್ಲ' ಎಂದು ಅವರು ಬರೆದಿದ್ದಾರೆ ಎನ್ನಲಾಗಿದೆ.

ಭಾನುವಾರ ನಡೆಯಲಿರುವ ನೀಟ್ ಮರು ಪರೀಕ್ಷೆಯ 'ಒತ್ತಡ'ವನ್ನು ಸಹಿಸಲಾಗದೆ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

Representative Image
NEET UG 2026ಗೆ ಮತ್ತೊಂದು ಬಲಿ; ಮರು ಪರೀಕ್ಷೆಗೂ ಮುನ್ನ 17 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ

ದೇಶದ 551 ನಗರಗಳು ಮತ್ತು ವಿದೇಶದ 14 ನಗರಗಳಲ್ಲಿ ಮಧ್ಯಾಹ್ನ 2 ರಿಂದ 5 ಗಂಟೆ 15 ನಿಮಿಷದವರೆಗೆ ನೀಟ್ ಮರುಪರೀಕ್ಷೆ ನಡೆಯಲಿದೆ. ವಿಕಲ ಚೇತನ ಅಭ್ಯರ್ಥಿಗಳಿಗೆ ಸಂಜೆ 6.20ರವರೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.

ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಕಾರಣದಿಂದಾಗಿ ಈ ಮೊದಲು ಮೇ 3ರಂದು ನಡೆದ ನೀಟ್-ಯುಜಿ ಪರೀಕ್ಷೆಯನ್ನು ರದ್ದುಪಡಿಸಲಾಗಿದೆ. ಹೀಗಾಗಿ, ಇದೀಗ ಮರುಪರೀಕ್ಷೆ ನಡೆಸಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com