ಸಿಂಧೂ ನದಿ ನೀರು ತಡೆದರೆ ಸುಮ್ಮನಿರಲ್ಲ, ಯುದ್ಧ ಖಚಿತ: ವೈಫಲ್ಯಗಳ ಮುಚ್ಚಿ ಹಾಕುವ ತಂತ್ರವಷ್ಟೇ; ಬೆದರಿಕೆ ಹಾಕಿದ ಪಾಕಿಸ್ತಾನಕ್ಕೆ ಭಾರತ ತಿರುಗೇಟು

ಕೆಲ ದಿನಗಳ ಹಿಂದೆ ಖ್ವಾಜಾ ಆಸಿಫ್, “ಪಾಕಿಸ್ತಾನದ ನೀರಿನ ಭದ್ರತೆಗೆ ಧಕ್ಕೆಯಾದರೆ ಯುದ್ಧವನ್ನೂ ಪರಿಗಣಿಸಬೇಕಾಗಬಹುದು” ಎಂದು ಎಚ್ಚರಿಕೆ ನೀಡಿದ್ದರು.
Pakistan- India
ಪಾಕಿಸ್ತಾನ-ಭಾರತonline desk
Updated on

ನವದೆಹಲಿ: ಸಿಂಧು ಜಲ ಒಪ್ಪಂದ (Indus Waters Treaty) ಅಮಾನತು ವಿಚಾರವಾಗಿ ಯುದ್ಧದ ಬೆದರಿಕೆ ಹಾಕಿದ್ದ ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಅವರ ಹೇಳಿಕೆಗೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಇಂತಹ ಹೇಳಿಕೆಗಳು ಪಾಕಿಸ್ತಾನದ ವೈಫಲ್ಯಗಳನ್ನು ಮುಚ್ಚಿಹಾಕುವ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆಯಿಂದ ಜಗತ್ತಿನ ಗಮನ ಬೇರೆಡೆ ಸೆಳೆಯುವ ಪ್ರಯತ್ನ ಎಂದು ಭಾರತ ಟೀಕಿಸಿದೆ.

ಕೆಲ ದಿನಗಳ ಹಿಂದೆ ಖ್ವಾಜಾ ಆಸಿಫ್, “ಪಾಕಿಸ್ತಾನದ ನೀರಿನ ಭದ್ರತೆಗೆ ಧಕ್ಕೆಯಾದರೆ ಯುದ್ಧವನ್ನೂ ಪರಿಗಣಿಸಬೇಕಾಗಬಹುದು” ಎಂದು ಎಚ್ಚರಿಕೆ ನೀಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, ಭಾರತದ ನಿಲುವು ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ.

ಪಾಕಿಸ್ತಾನದ ಇಂತಹ ಹೇಳಿಕೆಗಳು ತಮ್ಮದೇ ವೈಫಲ್ಯಗಳನ್ನು ಮುಚ್ಚಿಹಾಕಲು ಮತ್ತು ಮಾನವ ಹಕ್ಕುಗಳ ಉಲ್ಲಂಘನೆಗಳಿಂದ ಗಮನ ಬೇರೆಡೆ ಸೆಳೆಯಲು ನಡೆಸುತ್ತಿರುವ ಹತಾಶ ಪ್ರಯತ್ನಗಳಾಗಿವೆ. ಈ ಸುಳ್ಳು ಆರೋಪಗಳನ್ನು ನಾವು ಸಂಪೂರ್ಣವಾಗಿ ತಿರಸ್ಕರಿಸುತ್ತೇವೆ ಎಂದು ತಿಳಿಸಿದ್ದಾರೆ.

Pakistan- India
ಸಿಂಧೂ ನದಿ ನೀರು ತಡೆದರೆ ಸುಮ್ಮನಿರಲ್ಲ, ಯುದ್ಧ ಖಚಿತ: ಭಾರತದ ವಿರುದ್ಧ ಮತ್ತೆ ಪಾಕಿಸ್ತಾನ ಉದ್ಧಟತನ..!

ಭಾರತವು ಸಿಂಧು ಜಲ ಒಪ್ಪಂದವನ್ನು ಅಮಾನತಿನಲ್ಲಿ ಇಡುವ ತನ್ನ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಪುನರುಚ್ಚರಿಸಿದ್ದಾರೆ.

ಇದೇ ವೇಳೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರ (PoK) ಪರಿಸ್ಥಿತಿಯನ್ನೂ ಉಲ್ಲೇಖಿಸಿದ ಅವರು, ಅಲ್ಲಿ ಉಂಟಾಗಿರುವ ಸಮಸ್ಯೆಗಳು ಪಾಕಿಸ್ತಾನದ ದಶಕಗಳ ಆರ್ಥಿಕ ಶೋಷಣೆ, ಮೂಲಭೂತ ಹಕ್ಕುಗಳ ನಿರಾಕರಣೆ ಮತ್ತು ಆಡಳಿತಾತ್ಮಕ ದಬ್ಬಾಳಿಕೆಯ ನೇರ ಪರಿಣಾಮವಾಗಿದೆ ಎಂದು ಆರೋಪಿಸಿದರು.

ಭಾರತ ಮತ್ತು ಪಾಕಿಸ್ತಾನದ ನಡುವಿನ ಸಿಂಧು ಜಲ ಒಪ್ಪಂದದ ವಿಚಾರ ಇತ್ತೀಚಿನ ತಿಂಗಳುಗಳಲ್ಲಿ ಮತ್ತೆ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಎರಡೂ ದೇಶಗಳ ನಡುವೆ ರಾಜತಾಂತ್ರಿಕ ವಾಗ್ವಾದಕ್ಕೆ ಕಾರಣವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com