ತಮಿಳುನಾಡಿನ ನೂತನ ಕಾಂಗ್ರೆಸ್‌ ಅಧ್ಯಕ್ಷರಾಗಿ ಮಾಣಿಕ್ಕಂ ಟ್ಯಾಗೋರ್ ನೇಮಕ!

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಿ. ಮಾಣಿಕ್ಕಂ ಟ್ಯಾಗೋರ್ ಅವರನ್ನು ತಮಿಳುನಾಡು ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದು, ಇದು ತಕ್ಷಣದಿಂದಲೇ ಜಾರಿಗೆ ಬರಲಿದೆ
Manickam Tagore
ಮಾಣಿಕ್ಕಂ ಟ್ಯಾಗೋರ್
Updated on

ನವದೆಹಲಿ: ತಮಿಳುನಾಡಿನ ನೂತನ ಕಾಂಗ್ರೆಸ್‌ ಅಧ್ಯಕ್ಷರಾಗಿ ಮಾಣಿಕ್ಕಂ ಟ್ಯಾಗೋರ್ ನೇಮಕಗೊಂಡಿದ್ದಾರೆ. ಕೆ. ಸೆಲ್ವಪೆರುಂಥಗೈ ಅವರನ್ನು ಬದಲಿಸಿ ಮಾಣಿಕ್ಕಂ ಟ್ಯಾಗೋರ್ ಅವರನ್ನು ತಮಿಳುನಾಡಿನ ಹೊಸ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಕಾಂಗ್ರೆಸ್ ಶನಿವಾರ ನೇಮಕ ಮಾಡಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಿ. ಮಾಣಿಕ್ಕಂ ಟ್ಯಾಗೋರ್ ಅವರನ್ನು ತಮಿಳುನಾಡು ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದು, ಇದು ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಿರ್ಗಮಿತ ಪಿಸಿಸಿ ಅಧ್ಯಕ್ಷ ಕೆ. ಸೆಲ್ವಪೆರುಂಥಗೈ ಅವರ ಕೊಡುಗೆಗಳನ್ನು ಪಕ್ಷ ಪ್ರಶಂಸಿಸುತ್ತದೆ ಎಂದು ಅವರು ಹೇಳಿದ್ದಾರೆ.

Manickam Tagore
'ಕೈ' ಪಡೆಗೆ ಹೊಸ ನಾಯಕತ್ವ; KPCC ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅಧಿಕಾರ ಸ್ವೀಕಾರ..!

ಟ್ಯಾಗೋರ್ ವಿರುಧುನಗರದ ಲೋಕಸಭಾ ಸಂಸದರಾಗಿದ್ದಾರೆ ಮತ್ತು ಆಂಧ್ರಪ್ರದೇಶ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಎಐಸಿಸಿ ಉಸ್ತುವಾರಿ ವಹಿಸಿದ್ದಾರೆ. ಲೋಕಸಭೆಯಲ್ಲಿ ಕಾಂಗ್ರೆಸ್‌ನ ವಿಪ್ ಕೂಡ ಆಗಿದ್ದಾರೆ. ತಮಿಳುನಾಡಿನಲ್ಲಿ ಕಾಂಗ್ರೆಸ್ ನಟ-ರಾಜಕಾರಣಿ ವಿಜಯ್ ಜೋಸೆಫ್ ನೇತೃತ್ವದ ಆಡಳಿತ ಪಕ್ಷವಾದ ಟಿವಿಕೆಯ ಮೈತ್ರಿಕೂಟದ ಪಾಲುದಾರ ಪಕ್ಷವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com