ಭಾರತ-ಅಮೆರಿಕ ಬಾಂಧವ್ಯ ಮತ್ತಷ್ಟು ಗಟ್ಟಿ; ಶೀಘ್ರದಲ್ಲೇ ಮಹತ್ವದ ವ್ಯಾಪಾರ ಒಪ್ಪಂದಕ್ಕೆ ಸಹಿ, 2027ರಲ್ಲಿ ಟ್ರಂಪ್ ಭಾರತಕ್ಕೆ..!

ಟ್ರಂಪ್ ಮತ್ತು ಪ್ರಧಾನಿ ಮೋದಿ ನಡುವಿನ ವೈಯಕ್ತಿಕ ಬಾಂಧವ್ಯವೇ ಉಭಯ ದೇಶಗಳ ಸಂಬಂಧವನ್ನು ಮತ್ತಷ್ಟು ಬಲಪಡಿಸುತ್ತಿದೆ. ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಕೂಡ ದ್ವಿಪಕ್ಷೀಯ ಸಂಬಂಧವನ್ನು ಮತ್ತಷ್ಟು ವಿಸ್ತರಿಸುವಲ್ಲಿ ಸಕ್ರಿಯ ಪಾತ್ರವಹಿಸುತ್ತಿದ್ದಾರೆ.
Donald Trump-Narendra Modi
ಡೊನಾಲ್ಡ್ ಟ್ರಂಪ್-ನರೇಂದ್ರ ಮೋದಿ
Updated on

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು 2027ರ ಆರಂಭದಲ್ಲಿ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ಭಾರತದಲ್ಲಿನ ಅಮೆರಿಕದ ರಾಯಭಾರಿ ಸೆರ್ಗಿಯೋ ಗೋರ್ ತಿಳಿಸಿದ್ದಾರೆ.

ಈ ಭೇಟಿಗೆ ಈಗಾಗಲೇ ಸಿದ್ಧತೆಗಳು ಆರಂಭವಾಗಿದ್ದು, ಭಾರತ ಮತ್ತು ಅಮೆರಿಕ ನಡುವಿನ ಬಹುನಿರೀಕ್ಷಿತ ದ್ವಿಪಕ್ಷೀಯ ವ್ಯಾಪಾರ ಒಪ್ಪಂದವೂ ಮುಂದಿನ ಕೆಲ ವಾರಗಳು ಅಥವಾ ತಿಂಗಳಲ್ಲಿ ಅಂತಿಮಗೊಳ್ಳುವ ಸಾಧ್ಯತೆಯಿದೆ ಎಂದು ಅವರು ಹೇಳಿದ್ದಾರೆ.

ಅಮೆರಿಕವು ಭಾರತೀಯ ಉತ್ಪನ್ನಗಳ ಮೇಲೆ ಶೇ.50ಕ್ಕೂ ಅಧಿಕ ಸುಂಕ ವಿಧಿಸಿದ ಬಳಿಕ ಉಭಯ ದೇಶಗಳ ಸಂಬಂಧದಲ್ಲಿ ಉಂಟಾಗಿದ್ದ ಬಿಕ್ಕಟ್ಟಿನ ನಂತರ ಟ್ರಂಪ್ ಅವರ ಮೊದಲ ಭಾರತ ಭೇಟಿ ಇದಾಗಲಿದೆ.

ಸುದ್ದಿಸಂಸ್ಥೆ IANSಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಸೆರ್ಗಿಯೋ ಗೋರ್, ಅಧ್ಯಕ್ಷ ಟ್ರಂಪ್ ಅವರ ಭಾರತ ಭೇಟಿಯ ಸಿದ್ಧತೆಗಳನ್ನು ಅಂತಿಮಗೊಳಿಸಲು ತಾವು ಭಾರತಕ್ಕೆ ಭೇಟಿ ನೀಡುತ್ತಿರುವುದಾಗಿ ಹೇಳಿದರು. ಭಾರತ-ಅಮೆರಿಕ ಸಂಬಂಧಕ್ಕೆ ವಾಷಿಂಗ್ಟನ್ ಅತ್ಯಂತ ಮಹತ್ವ ನೀಡುತ್ತಿದೆ ಎಂದು ತಿಳಿಸಿದರು.

ಟ್ರಂಪ್ ಮತ್ತು ಪ್ರಧಾನಿ ಮೋದಿ ನಡುವಿನ ವೈಯಕ್ತಿಕ ಬಾಂಧವ್ಯವೇ ಉಭಯ ದೇಶಗಳ ಸಂಬಂಧವನ್ನು ಮತ್ತಷ್ಟು ಬಲಪಡಿಸುತ್ತಿದೆ.

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಕೂಡ ದ್ವಿಪಕ್ಷೀಯ ಸಂಬಂಧವನ್ನು ಮತ್ತಷ್ಟು ವಿಸ್ತರಿಸುವಲ್ಲಿ ಸಕ್ರಿಯ ಪಾತ್ರವಹಿಸುತ್ತಿದ್ದಾರೆ ಎಂದು ಗೋರ್ ಹೇಳಿದರು.

Donald Trump-Narendra Modi
ಪ್ರಧಾನಿ ಮೋದಿ ಭಾರತವನ್ನು ಜಾಗತಿಕ ಶಕ್ತಿಯನ್ನಾಗಿ ಮಾಡಿದ್ದಾರೆ, 2027ರ ವರ್ಷಾರಂಭಕ್ಕೆ Indiaಗೆ ಡೊನಾಲ್ಡ್ ಟ್ರಂಪ್: ಮಾರ್ಕೊ ರೂಬಿಯೊ

ಜಿ7 ಸಭೆಯಲ್ಲಿ ಮಹತ್ವದ ಚರ್ಚೆ

ಕೆಲವು ವಾರಗಳ ಹಿಂದೆ ಫ್ರಾನ್ಸ್‌ನಲ್ಲಿ ನಡೆದ ಜಿ7 ಶೃಂಗಸಭೆಯ ವೇಳೆ ಟ್ರಂಪ್ ಮತ್ತು ಮೋದಿ ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದರು.

ವ್ಯಾಪಾರ, ರಕ್ಷಣೆ ಹಾಗೂ ದ್ವಿಪಕ್ಷೀಯ ಸಹಕಾರ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆಯಾಗಿದ್ದು, ಮುಂದಿನ ಕೆಲ ವಾರಗಳಲ್ಲಿ ಕೆಲವು ಪ್ರಮುಖ ಘೋಷಣೆಗಳು ಹೊರಬೀಳುವ ಸಾಧ್ಯತೆ ಇದೆ ಎಂದು ಗೋರ್ ತಿಳಿಸಿದ್ದಾರೆ.

ವ್ಯಾಪಾರ ಒಪ್ಪಂದ ಅಂತಿಮ ಹಂತದಲ್ಲಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದದ ಮಾತುಕತೆ ಅಂತಿಮ ಹಂತ ತಲುಪಿದ್ದು, ಈಗ ಒಪ್ಪಂದವನ್ನು ಅಂತಿಮಗೊಳಿಸುವ ಕಾರ್ಯ ನಡೆಯುತ್ತಿದೆ.

ಇತ್ತೀಚೆಗೆ ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ತಾವು ಸಭೆ ನಡೆಸಿದ್ದು, ಮಾತುಕತೆಗಳು ಫಲಪ್ರದವಾಗಿವೆ ಎಂದು ಹೇಳಿದ್ದಾರೆ.

ಕೆಲವೇ ವಿಷಯಗಳು ಬಾಕಿ ಉಳಿದಿದ್ದು, ಮುಂದಿನ ಕೆಲ ವಾರಗಳು ಅಥವಾ ತಿಂಗಳಲ್ಲಿ ಒಪ್ಪಂದಕ್ಕೆ ಅಂತಿಮ ರೂಪ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇಂಧನ ಸಹಕಾರದ ಕುರಿತು ಮಾತನಾಡಿದ ಅವರು, ಅಮೆರಿಕ, ಭಾರತ ಮತ್ತು ವೆನೆಜುವೆಲಾ ನಡುವೆ ಹೊಸ ಸಹಕಾರದ ಸಾಧ್ಯತೆಯಿದೆ ಎಂದು ಹೇಳಿದರು.

ವೆನೆಜುವೆಲಾದ ಭಾರೀ ಕಚ್ಚಾ ತೈಲವನ್ನು ಸಂಸ್ಕರಿಸುವ ಸಾಮರ್ಥ್ಯ ಭಾರತಕ್ಕೆ ಇರುವುದರಿಂದ ಈ ಸಹಭಾಗಿತ್ವದಲ್ಲಿ ಭಾರತದ ಪಾತ್ರ ಮಹತ್ವದ್ದಾಗಿರಲಿದೆ ಎಂದು ತಿಳಿಸಿದರು.

ಹಾರ್ಮುಜ್ ಜಲಸಂಧಿಯಲ್ಲಿನ ಉದ್ವಿಗ್ನತೆ ಹಾಗೂ ಜಾಗತಿಕ ಇಂಧನ ಭದ್ರತೆ ಕುರಿತ ಆತಂಕದ ಹಿನ್ನೆಲೆಯಲ್ಲಿ ಪೂರೈಕೆ ಸರಪಳಿಯನ್ನು ವೈವಿಧ್ಯಗೊಳಿಸುವ ಅಗತ್ಯ ಹೆಚ್ಚಿದ್ದು, ಈ ನಿಟ್ಟಿನಲ್ಲಿ ಭಾರತದ ತೈಲ ಸಂಸ್ಕರಣಾ ಸಾಮರ್ಥ್ಯ ಅಮೆರಿಕಕ್ಕೆ ತಂತ್ರಾತ್ಮಕವಾಗಿ ಮಹತ್ವದ್ದಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com