AIADMKಗೆ ಮತ್ತೆ ಮರ್ಮಾಘಾತ: ಮತ್ತೋರ್ವ ಪ್ರಮುಖ ಶಾಸಕ ರಾಜೀನಾಮೆ, ತಮಿಳುನಾಡು ಚುನಾವಣೆ ಬಳಿಕ 6ನೇ ವಿಕೆಟ್ ಪತನ!

ತಮಿಳುನಾಡಿನ ಕರೂರು ಕ್ಷೇತ್ರದ ಶಾಸಕ ಎಂ.ಆರ್. ವಿಜಯಭಾಸ್ಕರ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಇದು ಎಡಪ್ಪಾಡಿ ಪಳನಿಸ್ವಾಮಿ ನೇತೃತ್ವದ ಎಐಎಡಿಎಂಕೆ ಪಕ್ಷಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.
Another MLA Resigns From AIADMK
AIADMK ಶಾಸಕ ಎಂ.ಆರ್. ವಿಜಯಭಾಸ್ಕರ್ ರಾಜೀನಾಮೆ
Updated on

ಚೆನ್ನೈ: ತಮಿಳುನಾಡಿನ ಪ್ರಮುಖ ರಾಜಕೀಯ ಪಕ್ಷವಾದ ಮಾಜಿ ಸಿಎಂ ಜಯಲಲಿತಾ ಅವರ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ)ಗೆ ಮತ್ತೊಂದು ರಾಜಕೀಯ ಆಘಾತ ಎದುರಾಗಿದ್ದು ಮತ್ತೋರ್ವ ಪ್ರಮುಖ ಶಾಸಕ ಪಕ್ಷ ತೊರೆದಿದ್ದಾರೆ.

ಹೌದು.. ತಮಿಳುನಾಡಿನ ಕರೂರು ಕ್ಷೇತ್ರದ ಶಾಸಕ ಎಂ.ಆರ್. ವಿಜಯಭಾಸ್ಕರ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಇದು ಎಡಪ್ಪಾಡಿ ಪಳನಿಸ್ವಾಮಿ ನೇತೃತ್ವದ ಎಐಎಡಿಎಂಕೆ ಪಕ್ಷಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಎಂ.ಆರ್. ವಿಜಯಭಾಸ್ಕರ್ ಅವರು ಸೋಮವಾರ ತಮಿಳುನಾಡು ವಿಧಾನಸಭೆಯ ಸ್ಪೀಕರ್ ಜೆ.ಸಿ.ಡಿ. ಪ್ರಭಾಕರ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ರಾಜೀನಾಮೆಗೆ ಸಂಬಂಧಿಸಿದಂತೆ ಅವರು ಇನ್ನೂ ಯಾವುದೇ ಅಧಿಕೃತ ಕಾರಣವನ್ನು ಬಹಿರಂಗಪಡಿಸಿಲ್ಲ.

Another MLA Resigns From AIADMK
1 ಲಕ್ಷ ಲಂಚ ನೀಡುವಂತೆ ರೈತನಿಗೆ ಬೆದರಿಸಿದ ಪಕ್ಷದ ಜಂಟಿ ಕಾರ್ಯದರ್ಶಿಯನ್ನು 6 ಗಂಟೆಯಲ್ಲೇ ಪಕ್ಷದಿಂದ ವಜಾಗೊಳಿಸಿದ TVK!

ಪಕ್ಷ ತೊರೆದ 6ನೇ ಶಾಸಕ

ಇನ್ನು ವಿಜಯ ಭಾಸ್ಕರ್ ಇತ್ತೀಚಿನ ವಿಧಾನಸಭಾ ಚುನಾವಣೆಯ ಬಳಿಕ ಪಕ್ಷ ತೊರೆದ ಆರನೇ ಶಾಸಕರಾಗಿದ್ದಾರೆ. ಕಳೆದ ಎರಡು ತಿಂಗಳಲ್ಲಿ ಎಐಎಡಿಎಂಕೆಯಿಂದ ನಿರಂತರವಾಗಿ ಶಾಸಕರು ಹೊರನಡೆಯುತ್ತಿರುವುದು ಪಕ್ಷದೊಳಗಿನ ಅಸಮಾಧಾನವನ್ನು ಮತ್ತೊಮ್ಮೆ ಬಹಿರಂಗಪಡಿಸಿದೆ.

ವಿಧಾನಸಭಾ ಚುನಾವಣೆಯ ಬಳಿಕ ಎಐಎಡಿಎಂಕೆಯಿಂದ ಹಲವು ಶಾಸಕರು ರಾಜೀನಾಮೆ ನೀಡಿದ್ದು ಅಥವಾ ಪಕ್ಷ ತೊರೆದಿದ್ದಾರೆ. ಕೆಲವರು ನಟ-ರಾಜಕಾರಣಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷವನ್ನು ಸೇರಿರುವುದು ತಮಿಳುನಾಡಿನ ರಾಜಕೀಯದಲ್ಲಿ ಹೊಸ ಬೆಳವಣಿಗೆಗಳಿಗೆ ಕಾರಣವಾಗಿದೆ. ಈ ಬೆಳವಣಿಗೆಗಳು ರಾಜ್ಯದಲ್ಲಿ ರಾಜಕೀಯ ಸಮೀಕರಣಗಳು ಬದಲಾಗುತ್ತಿರುವ ಸೂಚನೆಗಳೆಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಈ ಬೆಳವಣಿಗೆ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸಾಮಿ ಅವರಿಗೆ ಮತ್ತೊಂದು ಸವಾಲಾಗಿ ಪರಿಣಮಿಸಿದೆ. ಚುನಾವಣೆಯ ಬಳಿಕ ಪಕ್ಷವನ್ನು ಸಂಘಟಿಸಲು ಅವರು ಪ್ರಯತ್ನಿಸುತ್ತಿರುವ ನಡುವೆಯೇ ಶಾಸಕರ ಸರಣಿ ನಿರ್ಗಮನ ಪಕ್ಷದ ವಿಧಾನಸಭೆಯಲ್ಲಿನ ಬಲದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.

ಉಪ ಚುನಾವಣೆ

ವಿಜಯಭಾಸ್ಕರ್ ಅವರ ರಾಜೀನಾಮೆಯನ್ನು ಸ್ಪೀಕರ್ ಅಧಿಕೃತವಾಗಿ ಅಂಗೀಕರಿಸಿದ ಬಳಿಕ ಕರೂರು ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುವ ಸಾಧ್ಯತೆ ಇದೆ. ಈ ಕುರಿತು ಚುನಾವಣಾ ಆಯೋಗ ಮುಂದಿನ ದಿನಗಳಲ್ಲಿ ವೇಳಾಪಟ್ಟಿಯನ್ನು ಪ್ರಕಟಿಸುವ ನಿರೀಕ್ಷೆಯಿದೆ.

ವಿಧಾನಸಭಾ ಚುನಾವಣೆಯ ನಂತರ ಕೇವಲ ಎರಡು ತಿಂಗಳಲ್ಲೇ ಎಐಎಡಿಎಂಕೆಯ ಆರು ಶಾಸಕರು ರಾಜೀನಾಮೆ ನೀಡಿರುವುದು ತಮಿಳುನಾಡಿನ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿ ಪರಿಗಣಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಪಕ್ಷದೊಳಗಿನ ಬೆಳವಣಿಗೆಗಳು ರಾಜ್ಯ ರಾಜಕೀಯದ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತವೆ ಎಂಬುದರತ್ತ ಎಲ್ಲರ ಗಮನ ನೆಟ್ಟಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com