ಮಹಾರಾಷ್ಟ್ರ: ನಾಗ್ಪುರದ ಸ್ಫೋಟಕ ಕಾರ್ಖಾನೆಯಲ್ಲಿ ಸ್ಫೋಟ; 15 ಮಂದಿ ಸಾವು; Video

ಕಂಪೆನಿಯ ಪ್ರತಿನಿಧಿಗಳು ಪಿಟಿಐಗೆ ನೀಡಿದ ಮಾಹಿತಿಯ ಪ್ರಕಾರ, ಬೆಳಗ್ಗೆ 7 ರಿಂದ 7.15ರ ನಡುವೆ ಕಂಪನಿಯ ಡಿಟೋನೇಟರ್ ಪ್ಯಾಕಿಂಗ್ ಘಟಕದಲ್ಲಿ ಈ ದುರ್ಘಟನೆ ನಡೆದಿದೆ.
After the explosion
ಸ್ಫೋಟದ ನಂತರ ದೃಶ್ಯ
Updated on

ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಇಂದು ಭಾನುವಾರ ಬೆಳಗ್ಗೆ ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 15 ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಟೋಲ್ ತಹಶೀಲಿನ ರೌಲ್‌ಗಾಂವ್‌ನಲ್ಲಿ ಇರುವ ಗಣಿಗಾರಿಕೆ ಮತ್ತು ಕೈಗಾರಿಕಾ ಸ್ಫೋಟಕಗಳನ್ನು ತಯಾರಿಸುವ SBL Energy Limited ಕಾರ್ಖಾನೆಯಲ್ಲಿ ಈ ಸ್ಫೋಟ ಸಂಭವಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಕಂಪೆನಿಯ ಪ್ರತಿನಿಧಿಗಳು ಪಿಟಿಐಗೆ ನೀಡಿದ ಮಾಹಿತಿಯ ಪ್ರಕಾರ, ಬೆಳಗ್ಗೆ 7 ರಿಂದ 7.15ರ ನಡುವೆ ಕಂಪನಿಯ ಡಿಟೋನೇಟರ್ ಪ್ಯಾಕಿಂಗ್ ಘಟಕದಲ್ಲಿ ಈ ದುರ್ಘಟನೆ ನಡೆದಿದೆ.

ಗಾಯಗೊಂಡವರನ್ನು ಸ್ಫೋಟದ ತಕ್ಷಣವೇ ನಾಗ್ಪುರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

After the explosion
ಆಂಧ್ರ ಪ್ರದೇಶ: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಕನಿಷ್ಠ 20 ಮಂದಿ ಸಜೀವ ದಹನ

ರಕ್ಷಣಾ ಕಾರ್ಯಗಳು ಮುಂದುವರಿಯುತ್ತಿವೆ. ಶೀಘ್ರದಲ್ಲೇ ಅಧಿಕೃತ ಹೇಳಿಕೆ ಬಿಡುಗಡೆ ಮಾಡಲಾಗುತ್ತದೆ ಎಂದು ಕಂಪನಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸ್ಫೋಟದ ತಕ್ಷಣ ಗಾಯಗೊಂಡವರನ್ನು ನಾಗ್ಪುರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡವರ ನಿಖರ ಸಂಖ್ಯೆ ತಕ್ಷಣ ಸಿಕ್ಕಿಲ್ಲ.

ರಕ್ಷಣಾ ಕಾರ್ಯಗಳು ಮುಂದುವರಿಯುತ್ತಿವೆ. ಶೀಘ್ರದಲ್ಲೇ ವಿವರವಾದ ಅಧಿಕೃತ ಹೇಳಿಕೆ ಬಿಡುಗಡೆ ಮಾಡಲಾಗುತ್ತದೆ ಎಂದು ಕಂಪನಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com