ಖಮೇನಿ ಹತ್ಯೆ ಖಂಡಿಸಿ ಕಾಶ್ಮೀರದಲ್ಲಿ ಪ್ರತಿಭಟನೆ; ಲಘು ಲಾಠಿ ಚಾರ್ಜ್

ಶ್ರೀನಗರದ ಬೆಮಿನಾ, ಗುಂಡ್ ಹಸಿಭಟ್ ಮತ್ತು ಜಹಾಂಗೀರ್ ಚೌಕ್ ಪ್ರದೇಶದಲ್ಲಿ ಮತ್ತು ದಕ್ಷಿಣ ಕಾಶ್ಮೀರದ ಪುಲ್ವಾಮಾ ಪಟ್ಟಣದಲ್ಲಿ ಖಮೇನಿ ಹತ್ಯೆ ಖಂಡಿಸಿ ಪ್ರತಿಭಟನೆಗಳು ಭುಗಿಲೆದ್ದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Protests in Kashmir against Khamenei's killing
ಖಮೇನಿ ಹತ್ಯೆ ಖಂಡಿಸಿ ಕಾಶ್ಮೀರದಲ್ಲಿ ಪ್ರತಿಭಟನೆ
Updated on

ಶ್ರೀನಗರ: ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯನ್ನು ಖಂಡಿಸಿ ಜಮ್ಮು ಮತ್ತು ಕಾಶ್ಮೀರದ ಹಲವಾರು ಭಾಗಗಳಲ್ಲಿ ಎರಡನೇ ದಿನವಾದ ಸೋಮವಾರವೂ ಪ್ರತಿಭಟನೆ ನಡೆಸಲಾಯಿತು. ಕೆಲವು ಪ್ರತಿಭಟನಾ ಸ್ಥಳಗಳಲ್ಲಿ ಭದ್ರತಾ ಪಡೆಗಳು ಪ್ರತಿಭಟನಾಕಾರರನ್ನು ಚದುರಿಸಲು ಲಘು ಲಾಠಿ ಚಾರ್ಜ್ ಸಹ ನಡೆಸಿದವು.

ಶ್ರೀನಗರದ ಬೆಮಿನಾ, ಗುಂಡ್ ಹಸಿಭಟ್ ಮತ್ತು ಜಹಾಂಗೀರ್ ಚೌಕ್ ಪ್ರದೇಶದಲ್ಲಿ ಮತ್ತು ದಕ್ಷಿಣ ಕಾಶ್ಮೀರದ ಪುಲ್ವಾಮಾ ಪಟ್ಟಣದಲ್ಲಿ ಖಮೇನಿ ಹತ್ಯೆ ಖಂಡಿಸಿ ಪ್ರತಿಭಟನೆಗಳು ಭುಗಿಲೆದ್ದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶಿಯಾ ಜನಸಂಖ್ಯೆ ಹೆಚ್ಚಿರುವ ಈ ಪ್ರದೇಶಗಳಲ್ಲಿ ಹಲವಾರು ಪ್ರತಿಭಟನಾಕಾರರು ಜಮಾಯಿಸಿದರು. ಅವರು ಬೀದಿಗಳಲ್ಲಿ ಮೆರವಣಿಗೆ ನಡೆಸಿದರು ಮತ್ತು ಅಮೆರಿಕ ಹಾಗೂ ಇಸ್ರೇಲ್ ವಿರುದ್ಧ ಘೋಷಣೆಗಳನ್ನು ಕೂಗಿದರು.

Protests in Kashmir against Khamenei's killing
ಒಂದೇ ದಾಳಿಯಲ್ಲಿ ಖಮೇನಿ ಸೇರಿ 48 ಇರಾನಿನ ನಾಯಕರ ಹತ್ಯೆ: ಟ್ರಂಪ್ ಘೋಷಣೆ

ಕೆಲವು ಪ್ರದೇಶಗಳಲ್ಲಿ, ಪ್ರತಿಭಟನಾಕಾರರನ್ನು ಚದುರಿಸಲು ಭದ್ರತಾ ಪಡೆಗಳು ಲಘು ಲಾಠಿ ಚಾರ್ಜ್ ಸಹ ಮಾಡಿದವು.

ಕಳೆದ ಶನಿವಾರ ಬೆಳಗ್ಗೆ ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಖಮೇನಿ ಸಾವನ್ನಪ್ಪಿದ್ದು, ಇರಾನ್ ಸರ್ಕಾರಿ ಮಾಧ್ಯಮ ಭಾನುವಾರ ಅವರ ಸಾವನ್ನು ಖಚಿತಪಡಿಸಿದೆ.

ಪ್ರತೀಕಾರವಾಗಿ ಇರಾನ್, ಇಸ್ರೇಲ್ ಮತ್ತು ಅರಬ್ ರಾಷ್ಟ್ರಗಳ ಮೇಲೆ ಕ್ಷಿಪಣಿ ದಾಳಿ ನಡೆಸುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com