ರಾಜ್ಯಸಭೆ ಚುನಾವಣೆಗೆ ಇಂದು ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ?: NDAಯಲ್ಲಿ ಮಹತ್ವದ ಬೆಳವಣಿಗೆ

ನಿತೀಶ್ ಕುಮಾರ್ ಅವರು ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಅವರೊಂದಿಗೆ ಸೇರಿ ನಾಮಪತ್ರ ಸಲ್ಲಿಸಲಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಜರಿರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
Nitish Kumar
ನಿತೀಶ್ ಕುಮಾರ್
Updated on

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಇಂದು ಗುರುವಾರ ಪಟ್ನಾದಲ್ಲಿ ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ. ಇದರಿಂದ ರಾಜ್ಯಕ್ಕೆ ಹೊಸ ಮುಖ್ಯಮಂತ್ರಿ ಬರಬಹುದೆಂಬ ಸೂಚನೆ ದೊರೆತಿದೆ.

ಸಂಯುಕ್ತ ಜನತಾದಳ ಅಧ್ಯಕ್ಷರಾದ ನಿತೀಶ್ ಕುಮಾರ್ ಅವರು ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಅವರೊಂದಿಗೆ ಸೇರಿ ನಾಮಪತ್ರ ಸಲ್ಲಿಸಲಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಜರಿರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

“ಜೆಡಿ(ಯು) ಅಧ್ಯಕ್ಷ ನಿತೀಶ್ ಕುಮಾರ್ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಗುರುವಾರ ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲಿದ್ದಾರೆ. ಆ ಸಂದರ್ಭದಲ್ಲಿ ಗೃಹ ಸಚಿವ ಅಮಿತ್ ಶಾ ಉಪಸ್ಥಿತರಿರುತ್ತಾರೆ,” ಎಂದು ಎನ್‌ಡಿಎ ಮೂಲವೊಂದು Press Trust of India ಸುದ್ದಿಸಂಸ್ಥೆಗೆ ತಿಳಿಸಿದೆ.

Nitish Kumar
ಬಿಹಾರದಲ್ಲಿ ರಾಜಕೀಯ ಬಿರುಗಾಳಿ: ಮುಖ್ಯಮಂತ್ರಿ ಸ್ಥಾನಕ್ಕೆ ನಿತಿಶ್ ಕುಮಾರ್ ರಾಜೀನಾಮೆ?

ನಿತೀಶ್ ಕುಮಾರ್ ಅವರು ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆಯೇ ಎಂಬ ಪ್ರಶ್ನೆಗೆ, ಅದು ಸಮಯ ಬಂದಾಗ ನಡೆಯುತ್ತದೆ ಎಂದು ಮೂಲವು ಹೇಳಿದೆ.

ಬಿಹಾರದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ನಡೆಯುತ್ತಿರುವುದಾಗಿ ಮೂಲಗಳು ತಿಳಿಸಿದ್ದು, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ರಾಜ್ಯಸಭೆಗೆ ಕಳುಹಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಈ ನಡುವೆ Janata Dal (United) ಪಕ್ಷದ ಪ್ರಮುಖ ಸಭೆ ನಡೆಯುತ್ತಿದ್ದು, ಪ್ರಮುಖ ನಾಯಕರುಗಳಾದ ಸಂಜಯ್ ಜ್ಹಾ ಮತ್ತು ರಾಜೀವ್ ರಂಜನ್ ಸಿಂಗ್ ಸೇರಿದಂತೆ ಹಲವು ಹಿರಿಯರು ಸಭೆಯಲ್ಲಿ ಭಾಗವಹಿಸಿದ್ದಾರೆ. ಬಿಹಾರದಲ್ಲಿ ಐದು ರಾಜ್ಯಸಭೆ ಸ್ಥಾನಗಳಿಗೆ ಚುನಾವಣೆ ನಡೆಯಬೇಕಿದೆ.

Nitish Kumar
Video | 'ಆಕೆ ನರಕಕ್ಕೆ ಹೋಗಲಿ, ನಿತೀಶ್ ಕುಮಾರ್ ಮಾಡಿದ್ದು ಸರಿ': ಮುಸ್ಲಿಂ ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ ಸಮರ್ಥಿಸಿಕೊಂಡ BJP ಸಚಿವ

ನಿತೀಶ್ ಕುಮಾರ್ ರಾಜ್ಯಸಭೆಗೆ ಹೋಗುವ ಸಾಧ್ಯತೆ ಇದ್ದಲ್ಲಿ, ಅವರು ಬಿಹಾರ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿಯುವ ಸಾಧ್ಯತೆಗಳಿಲ್ಲ.

ಐದು ಸ್ಥಾನಗಳಲ್ಲಿ ಜೆಡಿಯು ಪಕ್ಷಕ್ಕೆ ಎರಡು ಸ್ಥಾನಗಳಿದ್ದು, ಬಿಜೆಪಿ ಎರಡು ಸ್ಥಾನಗಳಲ್ಲಿ ಸ್ಪರ್ಧಿಸುವ ನಿರೀಕ್ಷೆ ಇದೆ. ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಕೂಡ ಪಕ್ಷದ ಎರಡು ಸ್ಥಾನಗಳಲ್ಲಿ ಒಂದರಿಂದ ಸಂಸತ್ತಿಗೆ ಪ್ರವೇಶಿಸುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com