ಕರೂರ್ ಕಾಲ್ತುಳಿತ: ಮತ್ತೊಂದು ಸುತ್ತಿನ ವಿಚಾರಣೆಗೆ ಹಾಜರಾಗುವಂತೆ ನಟ ವಿಜಯ್‌ಗೆ ಸಿಬಿಐ ಸಮನ್ಸ್

ಕರೂರ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಸುತ್ತಿನ ವಿಚಾರಣೆಗಾಗಿ ಕೇಂದ್ರ ತನಿಖಾ ಸಂಸ್ಥೆ ನಟ ಮತ್ತು ತಮಿಳಗ ವೆಟ್ರಿ ಕಳಗಂ ಮುಖ್ಯಸ್ಥ ವಿಜಯ್ ಅವರಿಗೆ ಸಮನ್ಸ್ ಜಾರಿ ಮಾಡಿದೆ.
Vijay
ದಳಪತಿ ವಿಜಯ್
Updated on

ನವದೆಹಲಿ: 2025ರ ಕರೂರ್ ಕಾಲ್ತುಳಿತದ ದುರಂತದ ಬಗ್ಗೆ ಸುಪ್ರೀಂ ಕೋರ್ಟ್ ನಿಷ್ಪಕ್ಷಪಾತ ತನಿಖೆಗೆ ಆದೇಶಿಸಿದ ನಂತರ, ಸಿಬಿಐ ಪ್ರಕರಣದ ತನಿಖೆ ನಡೆಸುತ್ತಿದ್ದು, ನಟ, ರಾಜಕಾರಣಿ ವಿಜಯ್ ಅವರನ್ನು ಮತ್ತೊಂದು ಸುತ್ತಿನ ವಿಚಾರಣೆಗೆ ಒಳಪಡಿಸಲು ಸಮನ್ಸ್ ಜಾರಿ ಮಾಡಿದೆ.

ಕರೂರ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಸುತ್ತಿನ ವಿಚಾರಣೆಗಾಗಿ ಕೇಂದ್ರ ತನಿಖಾ ಸಂಸ್ಥೆ ನಟ ಮತ್ತು ತಮಿಳಗ ವೆಟ್ರಿ ಕಳಗಂ ಮುಖ್ಯಸ್ಥ ವಿಜಯ್ ಅವರಿಗೆ ಸಮನ್ಸ್ ಜಾರಿ ಮಾಡಿದ್ದು, ಮಂಗಳವಾರ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜನವರಿ 12 ಮತ್ತು 19 ರಂದು ಸಿಬಿಐ, ನಟ ವಿಜಯ್ ಅವರನ್ನು ತನ್ನ ಪ್ರಧಾನ ಕಚೇರಿಯಲ್ಲಿ ವಿಚಾರಣೆಗೆ ಒಳಪಡಿಸಿತ್ತು.

Vijay
ಕರೂರು ಕಾಲ್ತುಳಿತ ಪ್ರಕರಣ: CBI ಎರಡನೇ ಸುತ್ತಿನ ವಿಚಾರಣೆಗೆ ವಿಜಯ್ ಹಾಜರು

ತನಿಖೆಯ ಸಮಯದಲ್ಲಿ, ಸಿಬಿಐ ನಟನಿಂದ ಹೆಚ್ಚಿನ ವಿಚಾರಣೆ ಮತ್ತು ಸ್ಪಷ್ಟೀಕರಣದ ಅಗತ್ಯವಿರುವ ವಸ್ತುಗಳನ್ನು ಸಂಗ್ರಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರಿಗೆ ಈಗ ಹೊಸ ನೋಟಿಸ್ ನೀಡಲಾಗಿದೆ.

ಕರೂರ್ ಕಾಲ್ತುಳಿತ ಪ್ರಕರಣದ ಹಿನ್ನೆಲೆ

ಸೆಪ್ಟೆಂಬರ್ 27, 2025 ರಂದು ತಮಿಳುನಾಡಿನ ಕರೂರಿನಲ್ಲಿ ವಿಜಯ್ ಅವರು ಬೃಹತ್ ರ್ಯಾಲಿ ನಡೆಸುತ್ತಿದ್ದ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿ 41 ಜನ ಮೃತಪಟ್ಟಿದ್ದರು ಮತ್ತು 60 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು.

ಕಳೆದ ವರ್ಷ ಅಕ್ಟೋಬರ್‌ನಲ್ಲಿ, ಪ್ರಕರಣದ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಸಿಬಿಐ ನಿರ್ದೇಶಕರಿಗೆ ಸೂಚಿಸಿದ್ದು, ಸಿಬಿಐ ತನಿಖೆಯ ಮೇಲ್ವಿಚಾರಣೆ ಮಾಡಲು ಮಾಜಿ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಅಜಯ್ ರಸ್ತೋಗಿ ನೇತೃತ್ವದಲ್ಲಿ ಮೇಲ್ವಿಚಾರಣಾ ಸಮಿತಿಯನ್ನು ಸಹ ರಚಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com