ದುಬೈ ವಿಮಾನ ನಿಲ್ದಾಣ ತಾತ್ಕಾಲಿಕ ಸ್ಥಗಿತ: ಕೊಚ್ಚಿಗೆ ಮರಳಿದ Emirates

ಸುಮಾರು 350 ಪ್ರಯಾಣಿಕರನ್ನು ಹೊತ್ತಿದ್ದ ವಿಮಾನ ಬೆಳಗ್ಗೆ ಸುಮಾರು 8.30ಕ್ಕೆ ಮತ್ತೆ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಯಿತು.
Representational image
ಸಾಂದರ್ಭಿಕ ಚಿತ್ರ
Updated on

ಕೊಚ್ಚಿ: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆ ಭದ್ರತಾ ಘಟನೆ ಕಾರಣದಿಂದ ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತಾತ್ಕಾಲಿಕವಾಗಿ ಮುಚ್ಚಿದ ಹಿನ್ನೆಲೆಯಲ್ಲಿ ದುಬೈಗೆ ತೆರಳುತ್ತಿದ್ದ ಎಮಿರೇಟ್ಸ್ ವಿಮಾನವು ಇಂದು ಸೋಮವಾರ ಬೆಳಗ್ಗೆ ಮರಳಿ ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹಿಂತಿರುಗಿತು.

ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (CIAL) ಸಂಸ್ಥೆಯ ವಕ್ತಾರರ ಪ್ರಕಾರ, ಕೊಚ್ಚಿಯಿಂದ ಇಂದು ನಸುಕಿನ ಜಾವ ಸುಮಾರು 4.30ಕ್ಕೆ ಹೊರಟಿದ್ದ ಎಮಿರೇಟ್ಸ್ ವಿಮಾನ ಇಕೆ533 ದುಬೈನಲ್ಲಿ ಭದ್ರತೆ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣ ಕಾರ್ಯಾಚರಣೆಗಳನ್ನು ತಕ್ಷಣವೇ ಸ್ಥಗಿತಗೊಳಿಸಲಾಗಿದೆ ಎಂಬ ಘೋಷಣೆ ಬಂದ ಬಳಿಕ ಮಧ್ಯದಲ್ಲೇ ಹಿಂದಿರುಗಬೇಕಾಯಿತು.

ಸುಮಾರು 350 ಪ್ರಯಾಣಿಕರನ್ನು ಹೊತ್ತಿದ್ದ ವಿಮಾನ ಬೆಳಗ್ಗೆ ಸುಮಾರು 8.30ಕ್ಕೆ ಮತ್ತೆ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಯಿತು.

Representational image
West Asia conflict: ದುಬೈ ಏರ್‌ಪೋರ್ಟ್‌ ಬಳಿ ಡ್ರೋನ್‌ ದಾಳಿ; ಭಾರೀ ಬೆಂಕಿ, ವಿಮಾನ ಸಂಚಾರ ತಾತ್ಕಾಲಿಕ ಸ್ಥಗಿತ

ಮೊದಲಿಗೆ ವಿಮಾನ ನಿಲ್ದಾಣದ ಅಧಿಕಾರಿಗಳು ಪ್ರಯಾಣಿಕರನ್ನು ಇಳಿಸಿ ಸುರಕ್ಷಿತವಾಗಿ ಹಿಂತಿರುಗಲು ಅವಕಾಶ ನೀಡಲಾಗುತ್ತದೆ ಎಂದು ತಿಳಿಸಿದ್ದರು. ಆದರೆ ನಂತರ ನೀಡಿದ ಮಾಹಿತಿ ಪ್ರಕಾರ, ದುಬೈ ವಿಮಾನ ನಿಲ್ದಾಣದ ಪರಿಸ್ಥಿತಿಯನ್ನು ಪರಿಶೀಲಿಸಲಾಗುತ್ತಿರುವುದರಿಂದ ಕಾರ್ಯಾಚರಣೆಗಳು ಪುನರಾರಂಭವಾದರೆ ವಿಮಾನವನ್ನು ಮುಂದುವರಿಸುವ ಸಾಧ್ಯತೆ ಇರುವುದರಿಂದ ಪ್ರಯಾಣಿಕರು ವಿಮಾನದಲ್ಲೇ ಉಳಿಯುವಂತೆ ಸೂಚಿಸಲಾಯಿತು.

ಕೊಚ್ಚಿಯಲ್ಲೇ ಎಲ್ಲಾ ಪ್ರಯಾಣಿಕರನ್ನು ಇಳಿಸುವ ನಿರ್ಧಾರ ತೆಗೆದುಕೊಂಡಿದೆ ಎಂದು ವಿಮಾನ ನಿಲ್ದಾಣ ಅಧಿಕಾರಿಗಳು ಮಾಹಿತಿ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com