ಮತ್ತೆ ಮಮತಾ ವಿರುದ್ಧ ಸುವೇಂದು ಅಧಿಕಾರಿ ಕಣಕ್ಕೆ: ದೀದಿಯನ್ನು ಒಂದೇ ಕ್ಷೇತ್ರಕ್ಕೆ ಕಟ್ಟಿಹಾಕಲು ಬಿಜೆಪಿ ರಣತಂತ್ರ!

ಮೊದಲ ಪಟ್ಟಿಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಕ್ಷೇತ್ರವಾದ ಕೋಲ್ಕತ್ತಾದ ಭಬಾನಿಪುರದಿಂದ ಪ್ರತಿಪಕ್ಷ ನಾಯಕ ಸುವೇಂದು ಅಧಿಕಾರಿ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ.
Is BJP move to field Suvendu from Bhabanipur a bid to tie down Mamata to one constituency?
ಮಮತಾ ಬ್ಯಾನರ್ಜಿ-ಸುವೇಂದು ಅಧಿಕಾರಿ
Updated on

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಸೇರಿದಂತೆ ಐದು ರಾಜ್ಯಗಳಿಗೆ ಚುನಾವಣಾ ದಿನಾಂಕ ಪ್ರಕಟವಾದ ಮರುದಿನವೇ ಭಾರತೀಯ ಜನತಾ ಪಕ್ಷ ಸೋಮವಾರ 144 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಮೊದಲ ಪಟ್ಟಿಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಕ್ಷೇತ್ರವಾದ ಕೋಲ್ಕತ್ತಾದ ಭಬಾನಿಪುರದಿಂದ ಪ್ರತಿಪಕ್ಷ ನಾಯಕ ಸುವೇಂದು ಅಧಿಕಾರಿ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ.

ಸುವೇಂದು ಅಧಿಕಾರಿ ಅವರು ಕೋಲ್ಕತ್ತಾದ ಭವಾನಿಪುರದಿಂದ ಮಮತಾ ವಿರುದ್ಧ ಸ್ಪರ್ಧಿಸಲು ಉತ್ಸುಕರಾಗಿದ್ದರು ಮತ್ತು ಈ ಸಂಬಂಧ ದೆಹಲಿಯಲ್ಲಿ ಪಕ್ಷದ ಕೇಂದ್ರ ನಾಕರೊಂದಿಗೆ ನಡೆದ ಹಲವಾರು ಸಭೆಗಳಲ್ಲಿ ಅವರು ತಮ್ಮ ಇಚ್ಛೆಯನ್ನು ವ್ಯಕ್ತಪಡಿಸಿದ್ದರು.

Is BJP move to field Suvendu from Bhabanipur a bid to tie down Mamata to one constituency?
ಬಂಗಾಳ ಚುನಾವಣೆ: 144 ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ; ಮತ್ತೆ ಮಮತಾ ವಿರುದ್ಧ ಸುವೇಂದು ಕಣಕ್ಕೆ

ಸುವೇಂದು ಅಧಿಕಾರಿ ಅವರು ಭವಾನಿಪುರದ ಜೊತೆಗೆ ಪ್ರಸ್ತುತ ತಾವು ಪ್ರತಿನಿಧಿಸುತ್ತಿರುವ ನಂದಿಗ್ರಾಮದಿಂದಲೂ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ.

2021ರಲ್ಲಿ ಪುರ್ಬಾ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ್ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಅವರನ್ನು 1,956 ಮತಗಳಿಂದ ಸೋಲಿಸಿದ್ದ ಸುವೇಂದು ಅಧಿಕಾರಿ ಅವರನ್ನು ಈಗ ಮತ್ತೆ ದೀದಿ ವಿರುದ್ಧ ಕಣಕ್ಕಿಳಿಸಲಾಗಿದೆ.

ಸುವೇಂದು ಅವರನ್ನು ಭವಾನಿಪುರದಲ್ಲಿ ಕಣಕ್ಕಿಳಿಸುವ ಕೇಸರಿ ಪಕ್ಷದ ಕ್ರಮವು ಮಮತಾ ಅವರು ಈ ಕ್ಷೇತ್ರದಲ್ಲಿ ಹೆಚ್ಚಿನ ಸಮಯ ಕಳೆಯಬೇಕಾಗುತ್ತದೆ ಮತ್ತು ಇತರ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರಕ್ಕಾಗಿ ಹೊರಗೆ ಹೋಗುವುದನ್ನು ತಡೆಯಬಹುದು. ಈ ಮೂಲಕ ದೀದಿಯನ್ನು ಒಂದೇ ಕ್ಷೇತ್ರದಲ್ಲಿ ಕಟ್ಟಿಹಾಕಲು ಬಿಜೆಪಿ ರಣತಂತ್ರ ರೂಪಿಸುತ್ತಿದೆ.

ರಾಜ್ಯದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(SIR) ನಂತರ ಸುಮಾರು 48,000 ಮತದಾರರನ್ನು ಡಿಲೀಟ್ ಮಾಡಲಾಗಿದ್ದು, ಇದು ಈ ಬಾರಿ ಭಬಾನಿಪುರದ ಫಲಿತಾಂಶದ ಮೇಲೆ ಪ್ರಭಾವ ಬೀರಬಹುದು. ಇವರಲ್ಲದೆ, ಕ್ಷೇತ್ರದ ಇನ್ನೂ 14,000 ಮತದಾರರು ತಮ್ಮ ಹಕ್ಕನ್ನು ಉಳಿಸಿಕೊಳ್ಳಲು ಸುಪ್ರೀಂ ಕೋರ್ಟ್ ತೀರ್ಪಿಗಾಗಿ ಕಾಯುತ್ತಿದ್ದಾರೆ.

Is BJP move to field Suvendu from Bhabanipur a bid to tie down Mamata to one constituency?
ತಮಿಳುನಾಡು ಮತ್ತು ಬಂಗಾಳ ಸೇರಿದಂತೆ 5 ರಾಜ್ಯಗಳ ಚುನಾವಣಾ ದಿನಾಂಕ ಪ್ರಕಟ; ಮೇ 4ರಂದು ಫಲಿತಾಂಶ!

ಈ 14,000 ಮತದಾರರ ಭವಿಷ್ಯ ಅನಿಶ್ಚಿತವಾಗಿರುವ ಹಿನ್ನೆಲೆಯಲ್ಲಿ ಮಮತಾ ಭಬಾನಿಪುರ ಸ್ಥಾನವನ್ನು ಉಳಿಸಿಕೊಳ್ಳುವುದು ಕಷ್ಟಕರವಾಗಬಹುದು ಎಂದು ಬಂಗಾಳದ ಬಿಜೆಪಿ ನಾಯಕತ್ವ ಭಾವಿಸಿದೆ.

ಈ ಬಾರಿ ಕೇಸರಿ ಪಾಳಯಕ್ಕೆ ಅನುಕೂಲಕರವಾಗಿ ಕಾಣುವ ಹಲವಾರು ಇತರ ಅಂಶಗಳಿವೆ. ಉದಾಹರಣೆಗೆ, 2024 ರ ಲೋಕಸಭಾ ಚುನಾವಣೆಯ ಫಲಿತಾಂಶದ ಪ್ರಕಾರ ಭಬಾನಿಪುರದ ಸುಮಾರು ಮೂರು ಪುರಸಭೆಯ ವಾರ್ಡ್‌ಗಳಲ್ಲಿ ಮತಗಳ ಸಂಖ್ಯೆಯಲ್ಲಿ ತೃಣಮೂಲ ಕಾಂಗ್ರೆಸ್ ಗಿಂತ ಬಿಜೆಪಿ ಹೆಚ್ಚು ಮತ ಪಡೆದಿದೆ.

2021 ರಲ್ಲಿ ಭಬಾನಿಪುರದಲ್ಲಿ ನಡೆದ ಉಪಚುನಾವಣೆಯಲ್ಲಿ, ಮಮತಾ ಅವರು ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ತಿಬ್ರೆವಾಲ್ ವಿರುದ್ಧ 50,000 ಕ್ಕೂ ಹೆಚ್ಚು ಮತಗಳ ಅಂತರದಿಂದ ಜಯಗಳಿಸಿದ್ದರು. ಇದು SIR ನಂತರ ಡಿಲೀಟ್ ಮಾಡಲಾದ ಮತದಾರರ ಸಂಖ್ಯೆಗೆ ಸಮನಾಗಿದೆ.

ಭಬಾನಿಪುರದಿಂದ ಮತ್ತೆ ಗೆಲ್ಲುತ್ತೇನೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇತ್ತೀಚೆಗೆ ಹೇಳಿಕೊಂಡಿದ್ದರೂ ಮತ್ತು ಅವರು ಈಗ ಕಠಿಣ ಹೋರಾಟಕ್ಕೆ ಸಜ್ಜಾಗುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com