UNI ನ್ಯೂಸ್ ಏಜೆನ್ಸಿ ಕಚೇರಿಯ ಸಿಬ್ಬಂದಿ ಹೊರಹಾಕಿ, ಬೀಗ ಜಡಿದ ಪೊಲೀಸರು! Video

ಭೂ ಮಂಜೂರಾತಿಯನ್ನು ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸುದ್ದಿ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದ ನಂತರ ಜಪ್ತಿ ಪ್ರಕ್ರಿಯೆ ಕೈಗೊಳ್ಳಲಾಗಿದೆ.
sealed news agency UNI's office
UNI ಕಚೇರಿಯ ಸಿಬ್ಬಂದಿ ಹೊರಹಾಕಿದ ಪೊಲೀಸರು
Updated on

ನವದೆಹಲಿ: ರಾಷ್ಟ್ರ ರಾಜಧಾನಿಯ ಪೊಲೀಸರು ಶುಕ್ರವಾರ ನ್ಯೂಸ್ ಏಜೆನ್ಸಿ ಯುಎನ್‌ಐ ಕಚೇರಿಗೆ ಬೀಗ ಜಡಿದಿದ್ದಾರೆ. ಪೊಲೀಸರ ಕ್ರಮವನ್ನು ಪತಿಕ್ರಾ ಸ್ವಾತಂತ್ರ್ಯದ ಮೇಲಿನ ದಾಳಿ ಎಂದು ಸುದ್ದಿಸಂಸ್ಥೆ ಖಂಡಿಸಿದರೂ ಹೈಕೋರ್ಟ್ ಆದೇಶವನ್ನು ಉಲ್ಲೇಖಿಸಿ, ಸೀಲ್ ಮಾಡಿದೆ.

ತಮ್ಮ ಮಹಿಳಾ ಸಿಬ್ಬಂದಿಯನ್ನು ಪೊಲೀಸರು ಅಮಾನುಷವಾಗಿ ನಡೆಸಿಕೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ಆರೋಪಿಸಿದೆ. ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗಿದೆ. ಎಲ್ಲವನ್ನೂ ವೀಡಿಯೊಗ್ರಫಿ ಮಾಡಿದ್ದು, ಯಾವುದೇ ತಪ್ಪುಗಳು ನಡೆದಿಲ್ಲ ಎಂದು ಪೊಲೀಸ್ ಉಪ ಆಯುಕ್ತ ಸಚಿನ್ ಶರ್ಮಾ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಭೂ ಮಂಜೂರಾತಿಯನ್ನು ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸುದ್ದಿ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದ ನಂತರ ಜಪ್ತಿ ಪ್ರಕ್ರಿಯೆ ಕೈಗೊಳ್ಳಲಾಗಿದೆ.

ಕಚೇರಿ ತೆರವುಗೊಳಿಸುವಂತೆ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದಡಿ ಬರುವ ಭೂ ಮತ್ತು ಅಭಿವೃದ್ಧಿ ಕಚೇರಿ (ಎಲ್ & ಡಿಒ) ಹೊರಡಿಸಿದ ಆದೇಶಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ. UNI ಸುದ್ದಿಸಂಸ್ಥೆಗೆ ಮಂಜರಾದ ಭೂಮಿ ರದ್ದತಿಗೆ ಸಂಬಂಧಿಸಿದ ವಿಚಾರ ಇದಾಗಿದೆ. ರದ್ದತಿಯನ್ನು ಹೈಕೋರ್ಟ್ ಎತ್ತಿಹಿಡಿದಿದ್ದು, ನ್ಯೂಸ್ ಎಜೆನ್ಸಿಯ ಅರ್ಜಿಯನ್ನು ವಜಾಗೊಳಿಸಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ UNI ದೇಶದ ಅತ್ಯಂತ ಹಳೆಯ ಮತ್ತು ಅತ್ಯಂತ ಗೌರವಾನ್ವಿತ ಸುದ್ದಿ ಸಂಸ್ಥೆಗಳಲ್ಲಿ ಒಂದಾದ ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ (ಯುಎನ್‌ಐ) ಕಚೇರಿಗೆ ಬೀಗ ಜಡಿದಿರುವುದು ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿದೆ.

ಮಹಿಳಾ ಪೊಲೀಸ್ ಸಿಬ್ಬಂದಿಯೊಬ್ಬರು ವಾಗ್ವಾದದ ಸಂದರ್ಭದಲ್ಲಿ ಮಹಿಳಾ ಪತ್ರಕರ್ತೆಯ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಆರೋಪಿಸಿದೆ.

sealed news agency UNI's office
16 ಸಿಮ್‌, 8 ಫೋನ್‌, 1 ಡೆಡ್ಲಿ ಪ್ಲಾಟ್: ಪಾಕ್ ಬೆಂಬಲಿತ ಉಗ್ರರ ಸಂಚನ್ನು ದೆಹಲಿ ಪೊಲೀಸರು ಬೇಧಿಸಿದ್ದು ಹೇಗೆ?

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com