ಆಂಧ್ರ: ಗೋದಾವರಿ ನದಿಯಲ್ಲಿ ಮುಳುಗಿ ಐವರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

ಮೂವರು ವಿದ್ಯಾರ್ಥಿಗಳ ಮೃತದೇಹಗಳು ಪತ್ತೆಯಾಗಿದ್ದು, ಉಳಿದ ಇಬ್ಬರ ಪತ್ತೆಗೆ ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ತಿಳಿಸಿದ್ದಾರೆ.
Rescue operation images
ಶೋಧ ಕಾರ್ಯಾಚರಣೆಯ ಚಿತ್ರ
Updated on

ವಿಜಯವಾಡ: ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಗೋದಾವರಿ ನದಿಯಲ್ಲಿ ಶುಕ್ರವಾರ ಐವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮುಳುಗಿ ಸಾವನ್ನಪ್ಪಿದ್ದಾರೆ. ಇಬ್ಬರು ಬದುಕುಳಿದಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೂವರು ವಿದ್ಯಾರ್ಥಿಗಳ ಮೃತದೇಹಗಳು ಪತ್ತೆಯಾಗಿದ್ದು, ಉಳಿದ ಇಬ್ಬರ ಪತ್ತೆಗೆ ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ತಿಳಿಸಿದ್ದಾರೆ.

ಈ ಮಧ್ಯೆ ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸುವಂತೆ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಗುಂಟೂರು ಜಿಲ್ಲೆಯ ಅಮರಾವತಿಯಲ್ಲಿರುವ ಖಾಸಗಿ ವಿಶ್ವವಿದ್ಯಾನಿಲಯದ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸ್ನಾನಕ್ಕಾಗಿ ನದಿಗೆ ಇಳಿದಾಗ ಈ ದುರಂತ ಸಂಭವಿಸಿದೆ.

ಸ್ನಾನಕ್ಕೆಂದು ನದಿಗೆ ಇಳಿದ ಐವರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸುವಂತೆ ಮುಖ್ಯಮಂತ್ರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಪೋಲವರಂ ಉಪ ಪೊಲೀಸ್ ವರಿಷ್ಠಾಧಿಕಾರಿ ಎಂ ವೆಂಕಟೇಶ್ವರ ತಿಳಿಸಿದ್ದಾರೆ.

ಇಬ್ಬರು ವಿದ್ಯಾರ್ಥಿಗಳಿಗೆ ಈಜು ಬರುತ್ತಿದ್ದರಿಂದ ಪ್ರಾಣಪಾಯದಿಂದ ಪಾರಾಗಿದ್ದಾರೆ. ಇತರರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೂರು ಶವಗಳನ್ನು ಹೊರತೆಗೆದು, ಮರಣೋತ್ತರ ಪರೀಕ್ಷೆ ನಡೆಸಿ, ಅವರ ಪೋಷಕರಿಗೆ ಹಸ್ತಾಂತರಿಸಲಾಗಿದೆ ಎಂದು ಡಿಎಸ್ಪಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com