

ನವದೆಹಲಿ: ಅಮೆರಿಕ ಹಾಗೂ ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ಭೀಕರ ವೈಮಾನಿಕ ದಾಳಿಯ ಬಗ್ಗೆ ಕೊನೆಗೂ ಮೌನ ಮುರಿದಿರುವ ಪ್ರಧಾನಿ ನರೇಂದ್ರ ಅವರು, ಪವಿತ್ರ ರಂಜಾನ್ ಹಬ್ಬದಂದೇ ಇರಾನ್ ಮೇಲಿನ ದಾಳಿಯನ್ನು ಖಂಡಿಸಿದ್ದಾರೆ.
ಈ ಕುರಿತು ಶನಿವಾರ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಇರಾನ್ ಅಧ್ಯಕ್ಷ ಡಾ. ಮಸೂದ್ ಪೆಜೆಶ್ಕಿಯಾನ್ ಅವರೊಂದಿಗೆ ಮಾತನಾಡಿ ಈದ್ ಮತ್ತು ನೌರುಜ್ ಶುಭಾಶಯ ತಿಳಿಸಿದ್ದೇವೆ. ಈ ಹಬ್ಬವು ಪಶ್ಚಿಮ ಏಷ್ಯಾಕ್ಕೆ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯನ್ನು ತರುತ್ತದೆ ಎಂದು ನಾವು ಆಶಿಸುತ್ತೇವೆ ಎಂದಿದ್ದಾರೆ.
ಪ್ರಾದೇಶಿಕ ಸ್ಥಿರತೆಗೆ ಬೆದರಿಕೆ ಹಾಕುವ ಮತ್ತು ಜಾಗತಿಕ ಪೂರೈಕೆ ಸರಪಳಿಗೆ ಅಡ್ಡಿಪಡಿಸುವ ಈ ಪ್ರದೇಶದಲ್ಲಿನ ನಿರ್ಣಾಯಕ ಮೂಲಸೌಕರ್ಯಗಳ ಮೇಲಿನ ದಾಳಿಯನ್ನು ಖಂಡಿಸುತ್ತೇವೆ ಎಂದು ಮೋದಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಸಂಚರಣೆ ಸ್ವಾತಂತ್ರ್ಯವನ್ನು ಕಾಪಾಡುವ ಮತ್ತು ಹಡಗು ಮಾರ್ಗಗಳು ಮುಕ್ತ ಮತ್ತು ಸುರಕ್ಷಿತವಾಗಿರುವುದನ್ನು ಖಚಿತಪಡಿಸಿಕೊಳ್ಳುವ ಮಹತ್ವವನ್ನು ಪುನರುಚ್ಚರಿಸಲಾಗಿದೆ.
ಇರಾನ್‌ನಲ್ಲಿರುವ ಭಾರತೀಯ ಪ್ರಜೆಗಳ ಸುರಕ್ಷತೆ ಮತ್ತು ಭದ್ರತೆಗೆ ಇರಾನ್‌ನ ನಿರಂತರ ಬೆಂಬಲವನ್ನು ಶ್ಲಾಘಿಸಲಾಗಿದೆ ಎಂದು ಪ್ರಧಾನಿ ತಿಳಿಸಿದ್ದಾರೆ.
ಈ ಹಿಂದೆ ಇರಾನ್ ವಿರುದ್ಧದ ಯುದ್ಧಕ್ಕೆ ಕೇಂದ್ರ ಸರ್ಕಾರದ ಪ್ರತಿಕ್ರಿಯೆಯು ಭಾರತದ ಮೌಲ್ಯಗಳು, ತತ್ವಗಳು ಮತ್ತು ಹಿತಾಸಕ್ತಿಗಳಿಗೆ ಬಗೆದ ದ್ರೋಹವಾಗಿದೆ ಎಂದು ಕಾಂಗ್ರೆಸ್, ಮೋದಿ ವಿರುದ್ಧ ವಾಗ್ದಾಳಿ ನಡೆಸಿತ್ತು.
Advertisement