ಯುಎಸ್-ಇರಾನ್ ಯುದ್ಧದ ಕುರಿತು ಬುಧವಾರ ಸರ್ವಪಕ್ಷ ಸಭೆ: ರಾಹುಲ್ ಗೈರು, ಪ್ರಧಾನಿ ವಿದೇಶಾಂಗ ನೀತಿ ವಿರುದ್ಧ ಕಿಡಿ

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಭೆಯ ಅಧ್ಯಕ್ಷತೆ ವಹಿಸಲಿದ್ದು, ವಿದೇಶಾಂಗ ಸಚಿವ ಎಸ್ ಜೈಶಂಕರ್ ಉಪಸ್ಥಿತರಿರುವ ನಿರೀಕ್ಷೆಯಿದೆ.
"Our foreign policy... a universal joke": Rahul Gandhi on reports of Pakistan facilitating talks between Iran, US
ರಾಹುಲ್ ಗಾಂಧಿ
Updated on

ನವದೆಹಲಿ: ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಕುರಿತು ಕೇಂದ್ರ ಸರ್ಕಾರ ಬುಧವಾರ ಸಂಜೆ 5 ಗಂಟೆಗೆ ಸರ್ವಪಕ್ಷ ಸಭೆಯನ್ನು ಕರೆದಿದೆ ಎಂದು ಮೂಲಗಳು ತಿಳಿಸಿವೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಭೆಯ ಅಧ್ಯಕ್ಷತೆ ವಹಿಸಲಿದ್ದು, ವಿದೇಶಾಂಗ ಸಚಿವ ಎಸ್ ಜೈಶಂಕರ್ ಉಪಸ್ಥಿತರಿರುವ ನಿರೀಕ್ಷೆಯಿದೆ.

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕೇರಳದಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲಿರುವ ಕಾರಣ ಸಭೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ಸಂಸತ್ ಭವನದ ಆವರಣದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಪಶ್ಚಿಮ ಏಷ್ಯಾ ಪರಿಸ್ಥಿತಿ ಕುರಿತು ಸಂಸತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣದ ನಂತರ ಈಗ ಸರ್ವ ಪಕ್ಷ ಸಭೆ ಕರೆಯಲಾಗಿದೆ.

ಮಂಗಳವಾರ ರಾಜ್ಯಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಇರಾನ್-ಇಸ್ರೇಲ್-ಅಮೆರಿಕ ಸಂಘರ್ಷದ ಪರಿಣಾಮವನ್ನು ನಿರ್ವಹಿಸಲು, ಇಂಧನ, ರಸಗೊಬ್ಬರ ಮತ್ತಿತರ ಕ್ಷೇತ್ರಗಳಲ್ಲಿ ಕಾರ್ಯತಂತ್ರಗಳನ್ನು ರೂಪಿಸಲು ಸರ್ಕಾರ ಏಳು ಸಶಕ್ತ ಗುಂಪುಗಳನ್ನು ರಚಿಸಿದೆ ಎಂದು ಹೇಳಿದರು.

ಲಭ್ಯವಿರುವ ಎಲ್ಲಾ ಮೂಲಗಳಿಂದ ಅನಿಲ ಮತ್ತು ಕಚ್ಚಾ ತೈಲವನ್ನು ಸಂಗ್ರಹಿಸಲು ಸರ್ಕಾರ ಕಾರ್ಯೋನ್ಮುಖವಾಗಿದೆ. ಸಾಕಷ್ಟು ರಸಗೊಬ್ಬರ ಪೂರೈಕೆ ಖಚಿತಪಡಿಸಿಕೊಳ್ಳಲು ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಹೇಳಿದರು.

"Our foreign policy... a universal joke": Rahul Gandhi on reports of Pakistan facilitating talks between Iran, US
ಪ್ರಧಾನಿ ನರೇಂದ್ರ ಮೋದಿ 100% ಟ್ರಂಪ್ ನಿಯಂತ್ರಣದಲ್ಲಿದ್ದಾರೆ: ರಾಹುಲ್ ಗಾಂಧಿ ಆರೋಪ; Video

ಪ್ರಧಾನಿ ಹೇಳಿಕೆಯನ್ನು ಕಾಂಗ್ರೆಸ್ ಟೀಕಿಸಿದ್ದು, ಬಿಕ್ಕಟ್ಟಿನ ಕುರಿತು ಅವರ ಹೇಳಿಕೆಯು ಕಳೆದ 11 ವರ್ಷಗಳ ಸಾಧನೆಗಳಿಗಾಗಿ ಸ್ವಯಂ-ಪ್ರತಿಷ್ಠೆಯನ್ನು ಕೇಂದ್ರೀಕರಿಸಿದ ಸಿದ್ಧಪಡಿಸಿದ ಪಠ್ಯವಾಗಿದೆ ಎಂದು ಲೇವಡಿ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com