Iran war: ನಾಳೆ ಎಲ್ಲಾ ರಾಜ್ಯಗಳ ಸಿಎಂ ಜೊತೆಗೆ ಪ್ರಧಾನಿ ಸಭೆ; ಸಿದ್ದರಾಮಯ್ಯ ಭಾಗವಹಿಸುತ್ತಾರಾ?

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಹೊರತಾಗಿಯೂ ದೇಶಾದ್ಯಂತ ಇಂಧನ ಪೂರೈಕೆ ಸ್ಥಿರವಾಗಿದೆ ಮತ್ತು ಚಿಲ್ಲರೆ ಇಂಧನ ಮಳಿಗೆಗಳು ಸಾಮಾನ್ಯವಾಗಿ ಕಾರ್ಯನಿರ್ವಹಿಸುತ್ತಿವೆ. ವದಂತಿಗಳಿಗೆ ಕಿವಿಗೂಡಬೇಡಿ ಎಂದು ಕೇಂದ್ರ ಸರ್ಕಾರ ಇಂದು ಹೇಳಿತ್ತು.
PM Modi and CM Siddaramaiah Casual Images
ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಸಾಂದರ್ಭಿಕ ಚಿತ್ರ
Updated on

ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷದ ಕುರಿತು ಪ್ರಧಾನಿ ನರೇಂದ್ರ ಮೋದಿ ನಾಳೆ ಸಂಜೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ. ಸಭೆಯಲ್ಲಿ ರಾಜ್ಯಗಳ ಸಿದ್ಧತೆ ಮತ್ತು ಯೋಜನೆಗಳನ್ನು ಪರಿಶೀಲಿಸಲಾಗುತ್ತದೆ.

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಹೊರತಾಗಿಯೂ ದೇಶಾದ್ಯಂತ ಇಂಧನ ಪೂರೈಕೆ ಸ್ಥಿರವಾಗಿದೆ ಮತ್ತು ಚಿಲ್ಲರೆ ಇಂಧನ ಮಳಿಗೆಗಳು ಸಾಮಾನ್ಯವಾಗಿ ಕಾರ್ಯನಿರ್ವಹಿಸುತ್ತಿವೆ. ವದಂತಿಗಳಿಗೆ ಕಿವಿಗೂಡಬೇಡಿ ಎಂದು ಕೇಂದ್ರ ಸರ್ಕಾರ ಇಂದು ಹೇಳಿತ್ತು.

ದೇಶದಲ್ಲಿ ಸಾಕಷ್ಟು ಇಂಧನ ಪೂರೈಕೆ ಇದೆ. ದೇಶದ ಎಲ್ಲಾ ಪೆಟ್ರೋಲ್ ಬಂಕ್ ಗಳಲ್ಲಿ ಸಾಕಷ್ಟು ಪೆಟ್ರೋಲ್ ಮತ್ತು ಡೀಸೆಲ್ ದಾಸ್ತಾನು ಲಭ್ಯವಿದೆ. ನಾಗರಿಕರು ಯಾವುದೇ ವದಂತಿಗಳಿಗೆ ಕಿವಿಗೂಡಬೇಡಿ ಎಂದು ಪೆಟ್ರೋಲಿಯಿಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಹೇಳಿದೆ.

PM Modi and CM Siddaramaiah Casual Images
ಪಶ್ಚಿಮ ಏಷ್ಯಾ ಸಂಘರ್ಷ: ಭಾರತ ಸೇರಿ 5 ದೇಶಗಳಿಗೆ Hormuz ಮೂಲಕ ಸುರಕ್ಷಿತ ಸಂಚಾರಕ್ಕೆ Iran ಅನುಮತಿ!

ಆದಾಗ್ಯೂ, ಎಲ್ಲಾ ಸಿಎಂಗಳ ಜೊತೆಗೆ ಪ್ರಧಾನ ಮಂತ್ರಿ ಸಭೆ ನಡೆಸುತ್ತಿದ್ದಾರೆ. ಈ ಸಭೆಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸುತ್ತಿದ್ದಾರಾ ಎಂಬುದು ತೀವ್ರ ಕುತೂಹಲ ಕೆರಳಿಸಿದೆ. ಈ ಕುರಿತು ಮುಖ್ಯಮಂತ್ರಿಗಳ ಕಾರ್ಯಾಲಯದಿಂದ ಇಲ್ಲಿಯವರೆಗೂ ಯಾವುದೇ ಅಧಿಕೃತ ಪ್ರಕಟಣೆ ಹೊರಬಂದಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com