ಕೇರಳ ಚುನಾವಣೆ: ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಡಿಕೆಶಿಗೆ ಸ್ಥಾನ; ಸಿಎಂ ಸಿದ್ದರಾಮಯ್ಯಗೆ ಇಲ್ಲ!

ಕಾಂಗ್ರೆಸ್ ನ ಸ್ಟಾರ್ ಪ್ರಚಾರಕರಲ್ಲಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಕರ್ನಾಟಕ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು ಸಚಿನ್ ಪೈಲಟ್ ಇದ್ದಾರೆ.
DK Shivakumar
ಡಿಕೆ ಶಿವಕುಮಾರ್ ಸಾಂದರ್ಭಿಕ ಚಿತ್ರ
Updated on

ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ, ಕಾಂಗ್ರೆಸ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳು ತಮ್ಮ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಚುನಾವಣಾ ಆಯೋಗಕ್ಕೆ ನೀಡಿದ್ದು, ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಸೋನಿಯಾ ಗಾಂಧಿ, ಅವರ ಪುತ್ರ ರಾಹುಲ್ ಮತ್ತು ಪುತ್ರಿ ಪ್ರಿಯಾಂಕಾ ಮತ್ತು ಶಶಿ ತರೂರ್ ಇದ್ದಾರೆ.

ಬಿಜೆಪಿಯ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಪಕ್ಷದ ಅಧ್ಯಕ್ಷ ನಿತಿನ್ ನಬಿನ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಕೂಡ ಇದ್ದಾರೆ. ಈ ಪೈಕಿ ಮೋದಿ ಈಗಾಗಲೇ ಎರಡು ಬಾರಿ ಕೇರಳಕ್ಕೆ ಭೇಟಿ ನೀಡಿದ್ದು, ಭಾನುವಾರ ಮತ್ತೆ ರಾಜ್ಯಕ್ಕೆ ಆಗಮಿಸುವ ನಿರೀಕ್ಷೆ ಇದೆ.

ಕಾಂಗ್ರೆಸ್ ನ ಸ್ಟಾರ್ ಪ್ರಚಾರಕರಲ್ಲಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಕರ್ನಾಟಕ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು ಸಚಿನ್ ಪೈಲಟ್ ಇದ್ದಾರೆ. ಆದರೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರಕರ ಪಟ್ಟಿಯಲ್ಲಿ ಇಲ್ಲ.

ಚುನಾವಣಾ ದಿನಾಂಕ ಘೋಷಣೆಗೂ ಮುನ್ನ ರಾಹುಲ್ ಮತ್ತು ಪ್ರಿಯಾಂಕಾ ಕೇರಳಕ್ಕೆ ಭೇಟಿ ನೀಡಿದ್ದರು. ತದನಂತರ ಖರ್ಗೆ, ತರೂರ್ ಮತ್ತು ಪೈಲಟ್ ಚುನಾವಣಾ ಸಂಬಂಧಿತ ಚಟುವಟಿಕೆಗಳಲ್ಲಿ ಭಾಗವಹಿಸಿದ್ದರು.

ಇವರಲ್ಲದೆ, ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಮತ್ತು ದೆಹಲಿಯ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಕೂಡ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಚುನಾವಣಾ ಆಯೋಗಕ್ಕೆ ನೀಡಲಾಗಿದೆ.

DK Shivakumar
ಕಾಂಗ್ರೆಸ್-ರಾಹುಲ್ ಗಾಂಧಿ 'BJPಯ ಬಿ-ಟೀಮ್': ಕೇರಳ ಸಿಎಂ ಪಿಣರಾಯಿ ವಿಜಯನ್

ಲೋಕ ಜನಶಕ್ತಿ ಪಕ್ಷ (ರಾಮ್‌ವಿಲಾಸ್), ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಮತ್ತು ಬಹುಜನ ಸಮಾಜ ಪಕ್ಷಗಳು ತಮ್ಮ ಪಕ್ಷದ ಮುಖ್ಯಸ್ಥರನ್ನು ಒಳಗೊಂಡಂತೆ ತಮ್ಮ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ನೀಡಿವೆ, ಅವರು ಚುನಾವಣೆಗೆ ನಡೆಯುವ ರಾಜ್ಯದಲ್ಲಿ ರಾಜಕೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಬಹುದು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com