Sex Video ಪ್ರಕರಣ: ಸ್ವಯಂ ಘೋಷಿತ 'ದೇವಮಾನವ' ಅಶೋಕ್ ವಿರುದ್ಧ 100ಕ್ಕೂ ಹೆಚ್ಚು ಮಹಿಳೆಯರಿಂದ SITಗೆ ದೂರು

ಅಶೋಕ್ ಖರತ್ ವಿರುದ್ಧದ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ ವಿಶೇಷ ತನಿಖಾ ತಂಡ(ಎಸ್ಐಟಿ), ದೂರವಾಣಿ ಮೂಲಕ 100ಕ್ಕೂ ಹೆಚ್ಚು ಮಹಿಳೆಯರಿಂದ ದೂರುಗಳನ್ನು ಸ್ವೀಕರಿಸಿದೆ.
SIT flooded with over 100 phone calls on Maha 'godman'
ಅಶೋಕ್ ಖರತ್‌
Updated on

ನಾಸಿಕ್‌: ನಾಸಿಕ್‌ನಲ್ಲಿ ಜ್ಯೋತಿಷ್ಯದ ಹೆಸರಿನಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ವಿಡಿಯೋ ಮಾಡಿದ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಮತ್ತೆ ಎರಡು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಅಶೋಕ್ ಖರತ್ ವಿರುದ್ಧದ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ ವಿಶೇಷ ತನಿಖಾ ತಂಡ(ಎಸ್ಐಟಿ), ದೂರವಾಣಿ ಮೂಲಕ 100ಕ್ಕೂ ಹೆಚ್ಚು ಮಹಿಳೆಯರಿಂದ ದೂರುಗಳನ್ನು ಸ್ವೀಕರಿಸಿದೆ ಎಂದು ಪಲೀಸರು ಹೇಳಿದ್ದಾರೆ.

ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಎರಡು ಕೇಸ್ ದಾಖಲಿಸಲಾಗಿದ್ದು, ಇದರೊಂದಿಗೆ, ನಗರದ ಸರ್ಕಾರವಾಡಾ ಪೊಲೀಸ್ ಠಾಣೆಯಲ್ಲಿ ಖರತ್ ವಿರುದ್ಧ ಎಂಟು ಲೈಂಗಿಕ ದೌರ್ಜನ್ಯ ಮತ್ತು ಎರಡು ವಂಚನೆ ಆರೋಪ ಸೇರಿದಂತೆ ಒಟ್ಟು ಹತ್ತು ಎಫ್‌ಐಆರ್‌ಗಳು ದಾಖಲಾಗಿವೆ.

SIT flooded with over 100 phone calls on Maha 'godman'
ಮಹಾರಾಷ್ಟ್ರ ಮಹಿಳಾ ಆಯೋಗದ ಅಧ್ಯಕ್ಷೆಯ ರಾಜೀನಾಮೆ ಸಿಎಂ ಫಡ್ನವೀಸ್ ಗೆ ರವಾನೆ: ಸುನೇತ್ರಾ ಪವಾರ್

ಹಲವು ವರ್ಷಗಳಿಂದ ಮಹಾರಾಷ್ಟ್ರದ ಹಲವಾರು ಪ್ರಮುಖ ರಾಜಕಾರಣಿಗಳು ಸೇರಿದಂತೆ ನೂರಾರು ಮಹಿಳೆಯರು ಖರತ್ ಅವರನ್ನು ಭೇಟಿ ಮಾಡಿದ್ದು, ಹಲವರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಮೂರು ವರ್ಷಗಳ ಕಾಲ ತನ್ನ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿದ ನಂತರ ಮಾರ್ಚ್ 18 ರಂದು ಅಶೋಕ್ ಖರತ್ ಅವರನ್ನು ಬಂಧಿಸಲಾಗಿದೆ.

ಶುಕ್ರವಾರ, ಮಹಿಳೆಯೊಬ್ಬರು ಸಲ್ಲಿಸಿದ ದೂರಿನ ಮೇರೆಗೆ ಅಶೋಕ್ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪತಿಯೊಂದಿಗಿನ ಸಂಬಂಧ ಹದಗೆಟ್ಟಿದ್ದರಿಂದ ಮತ್ತು ಕುಟುಂಬವು ಆರ್ಥಿಕ ತೊಂದರೆಗಳನ್ನು ಎದುರಿಸುತ್ತಿದ್ದ ಕಾರಣ ಮಾರ್ಗದರ್ಶನಕ್ಕಾಗಿ ಮಹಿಳೆ ಖರತ್ ಅವರನ್ನು ಭೇಟಿಯಾಗಿದ್ದರು ಎಂದು ಪೊಲೀಸರಿಗೆ ತಿಳಿಸಿದ್ದಾರೆ.

ಸಮಸ್ಯೆಗಳಿಗೆ ಪರಿಹಾರ ಬೇಕಾದರೆ ತನಗೆ ಎಲ್ಲಾ ರೀತಿಯಿಂದಲೂ ಸಹಕರಿಸಬೇಕು ಎಂದು ಖರತ್ ಹೇಳಿದ್ದರು ಮತ್ತು ಮಾರ್ಚ್ 2022 ರಿಂದ 2024 ರ ನಡುವೆ ತನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com