ರಾಹುಲ್ ಗಾಂಧಿಗೆ ಅಲಹಾಬಾದ್ ಹೈಕೋರ್ಟ್ ನಿಂದ ಬಿಗ್ ರಿಲೀಫ್!

ಈ ಆದೇಶ ಪ್ರಶ್ನಿಸಿ ಸಿಮ್ರಾನ್ ಗುಪ್ತಾ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನಂತರ ನ್ಯಾಯಮೂರ್ತಿ ವಿಕ್ರಮ್ ಡಿ ಚೌಹಾಣ್ ಈ ಆದೇಶ ನೀಡಿದ್ದಾರೆ.
Rahul Gandhi
ರಾಹುಲ್ ಗಾಂಧಿ
Updated on

ಅಲಹಾಬಾದ್: 2025 ರಲ್ಲಿ ನೀಡಿದ್ದ ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸಂಭಾಲ್ ನ್ಯಾಯಾಲಯ ತಿರಸ್ಕರಿಸಿತ್ತು.

ಈ ಆದೇಶ ಪ್ರಶ್ನಿಸಿ ಸಿಮ್ರಾನ್ ಗುಪ್ತಾ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನಂತರ ನ್ಯಾಯಮೂರ್ತಿ ವಿಕ್ರಮ್ ಡಿ ಚೌಹಾಣ್ ಈ ಆದೇಶ ನೀಡಿದ್ದಾರೆ.

Rahul Gandhi
ರಾಹುಲ್ ಗಾಂಧಿಗೆ ಬಿಗ್ ರಿಲೀಫ್: ದ್ವಿಪೌರತ್ವಕ್ಕೆ ಸಂಬಂಧಿಸಿದ FIRಗೆ ಅಲಹಾಬಾದ್ ಹೈಕೋರ್ಟ್ ತಡೆ

2025 ರಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಕಚೇರಿಯ ಉದ್ಘಾಟನೆಯ ಸಂದರ್ಭದಲ್ಲಿ 'ನಾವು ಈಗ ಬಿಜೆಪಿ, ಆರ್‌ಎಸ್‌ಎಸ್ ಮತ್ತು ಭಾರತ ರಾಷ್ಟ್ರದ ವಿರುದ್ಧವೇ ಹೋರಾಡುತ್ತಿದ್ದೇವೆ' ಎಂದು ರಾಹುಲ್ ಗಾಂಧಿ ಹೇಳಿದ್ದರು ಎಂದು ಅರ್ಜಿದಾರರು ಆರೋಪಿಸಿದ್ದರು.

ಈ ಹೇಳಿಕೆಯು ಸಾರ್ವಜನಿಕ ಭಾವನೆಗಳಿಗೆ ನೋವುಂಟು ಮಾಡಿದೆ. ದೇಶವನ್ನು ಅಸ್ಥಿರಗೊಳಿಸುವ ಉದ್ದೇಶದಿಂದ ಮಾಡಲಾದ ದೇಶದ್ರೋಹ ಮತ್ತು ರಾಷ್ಟ್ರವಿರೋಧಿ ಹೇಳಿಕೆಯಾಗಿದೆ ಎಂದು ಅರ್ಜಿದಾರರು ದೂರಿನಲ್ಲಿ ಉಲ್ಲೇಖಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com