ಜೀವಕ್ಕೆ ಜೀವ ಅಂತ ಪ್ರೀತಿಸಿದ್ದ ಪತ್ನಿ ಮತ್ತು ನಾಲ್ವರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಗಂಡ!

ದೆಹಲಿಯ ಪಕ್ಕದಲ್ಲಿರುವ ಗುರುಗ್ರಾಮದಿಂದ ದಾರುಣ ಸುದ್ದಿ ವರದಿಯಾಗಿದೆ. ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ನಾಲ್ವರು ಅಪ್ರಾಪ್ತ ಮಕ್ಕಳಿಗೆ ವಿಷ ನೀಡಿ ಕೊಂದು ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
representation purpose only
ಸಂಗ್ರಹ ಚಿತ್ರ
Updated on

ದೆಹಲಿಯ ಪಕ್ಕದಲ್ಲಿರುವ ಗುರುಗ್ರಾಮದಿಂದ ದಾರುಣ ಸುದ್ದಿ ವರದಿಯಾಗಿದೆ. ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ನಾಲ್ವರು ಅಪ್ರಾಪ್ತ ಮಕ್ಕಳಿಗೆ ವಿಷ ನೀಡಿ ಕೊಂದು ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಉತ್ತರ ಪ್ರದೇಶ ಮೂಲದ ಕಟ್ಟಿಂಗ್ ಶಾಪ್ ನಡೆಸುತ್ತಿರುವ ನಜೀಮ್ ನ ಮಣಿಕಟ್ಟು ಸೀಳಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಆತನ ಪತ್ನಿ ನಜ್ಮಾ (35) ಮತ್ತು ಅವರ ಮಕ್ಕಳಾದ ಇಕ್ರಾ (14), ಶಿಫಾ (11), ಆರಾಮ್ (9) ಮತ್ತು ಖತೀಜಾ (6) ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು.

ಶನಿವಾರ ರಾತ್ರಿ 9.30ರ ಸುಮಾರಿಗೆ ನಜೀಮ್ ಸಹೋದರ ಮನೆಗೆ ಬಂದು ನೋಡಿದಾಗ ಕುಟುಂಬವು ಮೊದಲ ಮಹಡಿಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಕಂಡಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಐವರು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದರು.

representation purpose only
ಪೂರ್ವ ದೆಹಲಿ: ಅಪಾರ್ಟ್ ಮೆಂಟ್ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಜೀವ ದಹನ -Video

ಮಡದಿ ಮಕ್ಕಳನ್ನು ಕೊಂದು ನಂತರ ನಜೀಮ್ ಆತ್ಮಹತ್ಯೆಗೆ ಯತ್ನಿಸಿದ್ದು ಪ್ರಾಣಪಾಯದಿಂದ ಪಾರಾಗಿದ್ದಾನೆ. ಘಟನಾ ಸ್ಥಳದಿಂದ ಮುರಿದ ಮೊಬೈಲ್ ಫೋನ್ ಕೂಡ ಪತ್ತೆಯಾಗಿದೆ. ಮೂಲಗಳ ಪ್ರಕಾರ, ನಜ್ಮಾಳನ್ನು ನಜೀಮ್ ಏಳು ವರ್ಷಗಳ ಹಿಂದೆ ಪ್ರೇಮ ವಿವಾಹವಾಗಿದ್ದನು. ಸಾವಿಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.

ಕುಟುಂಬವು 'ಬದುಕಲು ಬಯಸುವುದಿಲ್ಲ' ಎಂದು ನಜೀಮ್ ತಿಳಿಸಿದ್ದಾನೆ ಎಂದು ಸಹಾಯಕ ಪೊಲೀಸ್ ಆಯುಕ್ತ ನವೀನ್ ಶರ್ಮಾ ಹೇಳಿದ್ದಾರೆ. ಎಲ್ಲಾ ಕೋನಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಹೇಳಿದರು. ಹೆಚ್ಚಿನ ಪರೀಕ್ಷೆಗಾಗಿ ಶವಾಗಾರಕ್ಕೆ ಶವಾಗಾರಕ್ಕೆ ಕಳುಹಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com