ಪಂಚರಾಜ್ಯ ಚುನಾವಣೆ ಫಲಿತಾಂಶ: ಎಂಕೆ ಸ್ಟಾಲಿನ್, ಮಮತಾ, ಗೌರವ್ ಗೋಗೋಯ್ ಸೇರಿದಂತೆ ಹೀನಾಯ ಸೋಲು ಕಂಡ ಘಟಾನುಘಟಿಗಳು!

ತೀವ್ರ ಕುತೂಹಲ ಕೆರಳಿಸಿದ್ದ ಪಂಚರಾಜ್ಯ ಚುನಾವಣೆ ಫಲಿತಾಂಶ ಇಂದು ಹೊರಬಿದ್ದಿದೆ. ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಬಿಜೆಪಿ ಅಭೂತಪೂರ್ವ ಬಹುಮತ ಸಾಧಿಸಿದ್ದರೆ ಪುದುಚೇರಿಯಲ್ಲಿ ಬಿಜೆಪಿ ನೇತೃತ್ವದ NDA ಮೈತ್ರಿಕೂಟ ಗೆಲುವು ಸಾಧಿಸಿದೆ.
MK Stalin-Mamata Banerjee-Gaurav
ಎಂಕೆ ಸ್ಟಾಲಿನ್-ಮಮತಾ ಬ್ಯಾನರ್ಜಿ-ಗೌರವ್ ಗೊಗೊಯ್
Updated on

ತೀವ್ರ ಕುತೂಹಲ ಕೆರಳಿಸಿದ್ದ ಪಂಚರಾಜ್ಯ ಚುನಾವಣೆ ಫಲಿತಾಂಶ ಇಂದು ಹೊರಬಿದ್ದಿದೆ. ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಬಿಜೆಪಿ ಅಭೂತಪೂರ್ವ ಬಹುಮತ ಸಾಧಿಸಿದ್ದರೆ ಪುದುಚೇರಿಯಲ್ಲಿ ಬಿಜೆಪಿ ನೇತೃತ್ವದ NDA ಮೈತ್ರಿಕೂಟ ಗೆಲುವು ಸಾಧಿಸಿದೆ. ಉಳಿದಂತೆ ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ 108 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಅದ್ವೀತಿಯ ಸಾಧನೆ ಮಾಡಿದೆ. ಇನ್ನು ಕೇರಳಂನಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆಲುವು ಸಾಧಿಸಿದೆ.

ಪಂಚರಾಜ್ಯ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಈ ಬಾರಿ ಘಟಾನುಘಟಿ ನಾಯಕರೇ ಸೋಲಿನ ರುಚಿ ಕಂಡಿದ್ದಾರೆ. ಈ ಬಾರಿಯೂ ತಮಿಳುನಾಡಿನಲ್ಲಿ ಡಿಎಂಕೆ ಅಧಿಕಾರಕ್ಕೆ ಬರುತ್ತದೆ ಎಂದು ಹಲವು ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿದ್ದವು. ಆದರೆ ಈ ಭವಿಷ್ಯ ಸುಳ್ಳಾಗಿದೆ. ಡಿಕೆಎಂ 74 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ ಎಐಎಡಿಎಂಕೆ 53 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು ಟಿಎಂಕೆ ಪಕ್ಷ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

MK Stalin-Mamata Banerjee-Gaurav
TMCಗೆ ತೀವ್ರ ಮುಖಭಂಗ: 15 ಸಾವಿರಕ್ಕೂ ಹೆಚ್ಚು ಮತಗಳಿಂದ ಸಿಎಂ ಮಮತಾ ಬ್ಯಾನರ್ಜಿಗೆ ಹೀನಾಯ ಸೋಲು!

ಇನ್ನು ಆಘಾತಕಾರಿ ಸಂಗತಿ ಎಂದರೇ... ಡಿಎಂಕೆ ಪಕ್ಷದ ಮುಖ್ಯಸ್ಥ, ತಮಿಳುನಾಡಿನ ಸಿಎಂ ಎಂಕೆ ಸ್ಟಾಲಿನ್ ಸೋಲು ಅನುಭವಿಸಿದ್ದಾರೆ. ಎಂಕೆ ಸ್ಟ್ಯಾಲಿನ್ ತಮ್ಮ ಭದ್ರಕೋಟೆ ಕೊಳತ್ತೂರಿನಲ್ಲಿ ಟಿವಿಕೆ ವಿಎಸ್ ಬಾಬು ವಿರುದ್ಧ 8 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಸೋತಿದ್ದಾರೆ. ಇನ್ನು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೊಯ್, ಜೋರ್ಹತ್ ವಿಧಾನಸಭಾ ಕ್ಷೇತ್ರದಲ್ಲಿ ಪ್ರತಿಸ್ಪರ್ಧಿ ಬಿಜೆಪಿಯ ಹಿತೇಂದ್ರನಾಥ್ ಗೋಸ್ವಾಮಿ ವಿರುದ್ಧ 23,182 ಮತಗಳಿಂದ ಸೋತಿದ್ದಾರೆ. ಮತ್ತೊಂದೆಡೆ, ಪಶ್ಚಿಮ ಬಂಗಾಳದ ಭವಾನಿಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಮತಾ ಬ್ಯಾನರ್ಜಿ ಅವರು ಬಿಜೆಪಿಯ ಅಭ್ಯರ್ಥಿ ಸುವೇಂಧು ಅಧಿಕಾರಿ ವಿರುದ್ಧ ಸುಮಾರು 15 ಸಾವಿರಕ್ಕೂ ಹೆಚ್ಚು ಮತಗಳಿಂದ ಸೋಲು ಕಂಡಿದ್ದಾರೆ.

ಇನ್ನುಳಿದಂತೆ, ತಮಿಳುನಾಡಿನಲ್ಲಿ ಬಿಜೆಪಿಯ ನೈನರ್ ನಾಗೇಂದ್ರನ್, ತಮಿಳಿಸೈ ಸೌಂದರರಾಜನ್, NTKಯ ಸೀಮನ್ ಸೋಲು ಕಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com