ಸೋಲು ಬಳಿಕವೂ ಹಠಕ್ಕೆ ಬಿದ್ದ ಮಮತಾ ಬ್ಯಾನರ್ಜಿ: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ನಕಾರ, ಒದ್ದು ಹೊರಹಾಕಿ ಎಂದು ಜೇಠ್ಮಲಾನಿ ಕಿಡಿ

ಈ ಬೆಳವಣಿಗೆಗೆ ಪ್ರತಿಕ್ರಿಯಿಸಿದ ಹಿರಿಯ ವಕೀಲ ಮತ್ತು ರಾಜಕೀಯ ವಿಶ್ಲೇಷಕ ಮಹೇಶ್ ಜೇಠ್ಮಲಾನಿ ಅವರು, ಒದ್ದು ಹೊರಹಾಕಿ ಹೊರಹಾಕಿ ಎಂದು ತೀವ್ರವಾಗಿ ಕಿಡಿಕಾರಿದ್ದಾರೆ.
mahesh jethmalani
ಮಹೇಶ್ ಜೇಠ್ಮಲಾನಿ
Updated on

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಫಲಿತಾಂಶಗಳ ನಂತರ ರಾಜಕೀಯ ಪರಿಸ್ಥಿತಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಮಮತಾ ಬ್ಯಾನರ್ಜಿ ಅವರು ತಮ್ಮ ಪಕ್ಷ ಸೋಲು ಕಂಡಿದ್ದರೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಘೋಷಿಸಿರುವುದು ದೊಡ್ಡ ವಿವಾದಕ್ಕೆ ಕಾರಣವಾಗಿದೆ.

ಜನಾದೇಶವನ್ನು ತಳ್ಳಿಹಾಕಿದಂತೆ ಮಮತಾ ಬ್ಯಾರ್ಜಿಯವರು ಹೇಳಿಕೆ ನೀಡುತ್ತಿದ್ದು, ರಾಜಕೀಯ ಪಕ್ಷಗಳ ಆಕ್ರೋಶ ಕಾರಣವಾಗಿದೆ.

ಈ ಬೆಳವಣಿಗೆಗೆ ಪ್ರತಿಕ್ರಿಯಿಸಿದ ಹಿರಿಯ ವಕೀಲ ಮತ್ತು ರಾಜಕೀಯ ವಿಶ್ಲೇಷಕ ಮಹೇಶ್ ಜೇಠ್ಮಲಾನಿ ಅವರು, ಒದ್ದು ಹೊರಹಾಕಿ ಹೊರಹಾಕಿ ಎಂದು ತೀವ್ರವಾಗಿ ಕಿಡಿಕಾರಿದ್ದಾರೆ.

ಈ ವಿಚಾರದಲ್ಲಿ ಗವರ್ನರ್ ಹಸ್ತಕ್ಷೇಪ ಅಗತ್ಯವಿದೆ. ಜನರು ನೀಡಿದ ತೀರ್ಪನ್ನು ಒಪ್ಪಿಕೊಳ್ಳದೇ ಅಧಿಕಾರದಲ್ಲೇ ಮುಂದುವರಿಯಲು ಪ್ರಯತ್ನಿಸುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ಪಕ್ಷವು ಈ ಬಾರಿ ನಿರೀಕ್ಷಿತ ಫಲಿತಾಂಶವನ್ನು ಪಡೆಯಲು ವಿಫಲವಾಗಿದ್ದು, ಭಾರತೀಯ ಜನತಾ ಪಕ್ಷದ ಭಾರೀ ಮುನ್ನಡೆ ಸಾಧಿಸಿ ಸರ್ಕಾರ ರಚನೆಗೆ ಸಜ್ಜಾಗಿದೆ. ಆದರೆ, ಮಮತಾ ಬ್ಯಾನರ್ಜಿ ಅವರು ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ “ನಾನು ರಾಜೀನಾಮೆ ನೀಡುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

mahesh jethmalani
ಚುನಾವಣೆಯಲ್ಲಿ ನಾನು ಸೋತಿಲ್ಲ, ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ; ಮಮತಾ ಬ್ಯಾನರ್ಜಿ; Video

ತಮ್ಮ ನಿಲುವನ್ನು “ನೈತಿಕ ಜಯ” ಎಂದು ಸಮರ್ಥಿಸಿಕೊಂಡಿದ್ದಾರೆ. ಆದರೆ, ವಿರೋಧ ಪಕ್ಷಗಳು ಇದನ್ನು ಜನರ ತೀರ್ಪಿಗೆ ಮಾಡಿರುವ ಅವಮಾನ ಎಂದು ಹೇಳುತ್ತಿವೆ.

ಭಾರತದ ಸಂವಿಧಾನ ಪ್ರಕಾರ, ಮುಖ್ಯಮಂತ್ರಿಗೆ ಸ್ಪಷ್ಟ ಬಹುಮತ ಇಲ್ಲದಿದ್ದರೆ ಅವರು ಪದವಿಯಲ್ಲಿ ಮುಂದುವರಿಯಲು ಸಾಧ್ಯವಿಲ್ಲ. ಈ ಸಂದರ್ಭದಲ್ಲಿಯೇ ರಾಜ್ಯಪಾಲರು ಮಧ್ಯಪ್ರವೇಶಿಸಿ ಬಹುಮತ ಸಾಬೀತುಪಡಿಸಲು ಸೂಚಿಸಬಹುದು ಅಥವಾ ಪರಿಸ್ಥಿತಿಗೆ ಅನುಗುಣವಾಗಿ ಕ್ರಮ ಕೈಗೊಳ್ಳಬಹುದು.

ಈಗ ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಮುಂದಿನ ಹಂತ ಏನು ಎನ್ನುವುದು ರಾಜ್ಯಪಾಲರ ನಿರ್ಧಾರ ಮತ್ತು ಸಂವಿಧಾನಾತ್ಮಕ ಪ್ರಕ್ರಿಯೆಗಳ ಮೇಲೆ ಅವಲಂಬಿತವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com