ಸುವೇಂದು ಅಧಿಕಾರಿ ಆಪ್ತನ ಹತ್ಯೆ ಬೆನ್ನಲ್ಲೇ ಆರ್ ಜಿ ಕರ್ ಸಂತ್ರಸ್ತೆ ತಾಯಿ ಮನೆ ಬಳಿ ಬಾಂಬ್ ದಾಳಿ; 5 ಬಿಜೆಪಿ ಕಾರ್ಯಕರ್ತರಿಗೆ ಗಾಯ

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನು ಮೋಟಾರ್ ಸೈಕಲ್‌ನಲ್ಲಿ ಬಂದ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದ ಕೆಲವೇ ಗಂಟೆಗಳ ನಂತರ, ಟಿಎಂಸಿ ಪ್ರತೀಕಾರದ ಹಿಂಸಾಚಾರ ನಡೆಸುತ್ತಿದೆ ಎಂದು ಕೇಸರಿ ಬಣ ಆರೋಪಿಸಿದೆ.
5 BJP workers injured in bomb attack near RG Kar mom's home
ರತ್ನಾ ದೇಬ್ನಾಥ್
Updated on

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ರಾಜ್ಯದಲ್ಲಿ ಚುನಾವಣೋತ್ತರ ಹಿಂಸಾಚಾರ ತೀವ್ರಗೊಂಡಿದ್ದು, ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿಯಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಐವರು ಬಿಜೆಪಿ ಕಾರ್ಯಕರ್ತರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಬುಧವಾರ ತಡರಾತ್ರಿ ಈ ಘಟನೆ ನಡೆದಿದ್ದು, ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನು ಮೋಟಾರ್ ಸೈಕಲ್‌ನಲ್ಲಿ ಬಂದ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದ ಕೆಲವೇ ಗಂಟೆಗಳ ನಂತರ, ಟಿಎಂಸಿ ಪ್ರತೀಕಾರದ ಹಿಂಸಾಚಾರ ನಡೆಸುತ್ತಿದೆ ಎಂದು ಕೇಸರಿ ಬಣ ಆರೋಪಿಸಿದೆ.

ಪಾಣಿಹಟಿಯ ಸೇಂಟ್ ಕ್ಸೇವಿಯರ್ ಸಂಸ್ಥೆಯ ಬಳಿ ಬಾಂಬ್ ಸ್ಫೋಟ ಸಂಭವಿಸಿದ್ದು, ದುಷ್ಕರ್ಮಿಗಳು ಬಿಜೆಪಿ ಕಾರ್ಯಕರ್ತರ ಗುಂಪಿನ ಮೇಲೆ ಕಚ್ಚಾ ಬಾಂಬ್‌ಗಳನ್ನು ಎಸೆದಿದ್ದಾರೆ. ಘಟನೆಯಲ್ಲಿ ಕನಿಷ್ಠ ಐದು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಾಳುಗಳನ್ನು ಕೋಲ್ಕತ್ತಾದ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ.

5 BJP workers injured in bomb attack near RG Kar mom's home
ಗುಂಡಿಟ್ಟು ಸುವೇಂದು ಅಧಿಕಾರಿ ಆಪ್ತನ ಹತ್ಯೆ: CCTV ಪರಿಶೀಲನೆ; ಆರೋಪಿಗಳಿಗಾಗಿ ಪೊಲೀಸರ ತೀವ್ರ ಶೋಧ, ಉತ್ತರ 24 ಪರಗಣದಲ್ಲಿ ಪರಿಸ್ಥಿತಿ ಉದ್ವಿಗ್ನತೆ

ಸ್ಥಳೀಯ ಮೂಲಗಳ ಪ್ರಕಾರ, ಪಾಣಿಹಟಿಯ ವಾರ್ಡ್ ಸಂಖ್ಯೆ 2 ರ ದತ್ತಾ ರಸ್ತೆಯಲ್ಲಿ ಬಿಜೆಪಿ ಕಾರ್ಯಕರ್ತರು ನಿವಾಸಿಗಳೊಂದಿಗೆ ಸಂವಹನ ನಡೆಸುತ್ತಿದ್ದಾಗ ಮೋಟಾರ್ ಸೈಕಲ್‌ನಲ್ಲಿ ಬಂದ ದುಷ್ಕರ್ಮಿಗಳು ಗುಂಪೊಂದು ಕಚ್ಚಾ ಬಾಂಬ್ ಎಸೆದು ಪರಾರಿಯಾಗಿದೆ ಎಂದು ಹೇಳಲಾಗಿದೆ.

ದಾಳಿಕೋರರಿಗೆ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಬೆಂಬಲವಿದೆ ಎಂದು ಬಿಜೆಪಿ ಆರೋಪಿಸಿದೆ. ಆದರೆ ಮಮತಾ ಬ್ಯಾನರ್ಜಿ ನೇತೃತ್ವದ ಪಕ್ಷವು ಈ ಆರೋಪವನ್ನು ನಿರಾಕರಿಸಿದೆ.

"ನಾವು ತನಿಖೆ ಆರಂಭಿಸಿದ್ದೇವೆ ಮತ್ತು ಘಟನೆಯಲ್ಲಿ ಭಾಗಿಯಾಗಿರುವವರನ್ನು ಗುರುತಿಸಲು ಸುತ್ತಮುತ್ತಲಿನ ಪ್ರದೇಶಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದೇವೆ. ಆರೋಪಿಗಳನ್ನು ಬಂಧಿಸಲು ದಾಳಿ ನಡೆಸಲಾಗುತ್ತಿದೆ" ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರದೇಶದಲ್ಲಿ ಭಾರೀ ಪೊಲೀಸ್ ನಿಯೋಜನೆ

"ನಾವು ಕಟ್ಟುನಿಟ್ಟಿನ ಕಟ್ಟೆಚ್ಚರ ವಹಿಸುತ್ತಿದ್ದೇವೆ ಮತ್ತು ವದಂತಿಗಳನ್ನು ಹರಡದಂತೆ ಜನರಿಗೆ ಮನವಿ ಮಾಡುತ್ತಿದ್ದೇವೆ. ಶಾಂತಿ ಕಾಪಾಡಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ" ಎಂದು ಅಧಿಕಾರಿ ಹೇಳಿದ್ದಾರೆ.

ಆರ್‌ಜಿ ಕಾರ್ ಆಸ್ಪತ್ರೆಯ ಅತ್ಯಾಚಾರ ಸಂತ್ರಸ್ತೆಯ ತಾಯಿ, ಹೊಸದಾಗಿ ಆಯ್ಕೆಯಾದ ಬಿಜೆಪಿ ಶಾಸಕಿ ರತ್ನಾ ದೇಬ್ನಾಥ್ ಅವರ ನಿವಾಸದ ಬಳಿ ಈ ಸ್ಫೋಟ ಸಂಭವಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com