ಹೈದರಾಬಾದ್: ಉಸಿರುಗಟ್ಟಿಸಿ ನಿವೃತ್ತ ಐಪಿಎಸ್ ಅಧಿಕಾರಿ ಪತ್ನಿ ಹತ್ಯೆ ಮನೆಯಲ್ಲಿ ದರೋಡೆ!

ತನುಜಾ (55) ಹತ್ಯೆಯಾಗಿರುವ ಮಹಿಳೆಯಾಗಿದ್ದು, ಮನೆಯ ಕೆಲಸದ ಮಹಿಳೆ ಆಕೆಯನ್ನು ಉಸಿರುಗಟ್ಟಿಸಿ ಮನೆಯಲ್ಲಿದ್ದ ಚಿನ್ನಾಭರಣಗಳನ್ನು ದರೋಡೆ ಮಾಡಿ ಪರಾರಿಯಾಗಿದ್ದಾಳೆ ಎಂದು ಶಂಕಿಸಲಾಗಿದೆ.
crime, file photo
ಅಪರಾಧonline desk
Updated on

ಹೈದರಾಬಾದ್: ನಿವೃತ್ತ ಐಪಿಎಸ್ ಅಧಿಕಾರಿ ವಿನಯ್ ರಂಜನ್ ರಾಯ್ ಅವರ ಪತ್ನಿಯನ್ನು ಅವರ ಮನೆಯಲ್ಲೇ ಹತ್ಯೆ ಮಾಡಲಾಗಿದೆ.

ಪ್ರತಿಷ್ಠಿತ ಜ್ಯೂಬ್ಲಿ ಹಿಲ್ಸ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಇತ್ತೀಚೆಗೆ ನಿವೃತ್ತ ಪೊಲೀಸ್ ಅಧಿಕಾರಿಯ ಕುಟುಂಬದವರು ನೇಮಕ ಮಾಡಿಕೊಂಡಿದ್ದ ಮನೆಕೆಲಸದಾಕೆಯೇ ತನ್ನ ಸ್ನೇಹಿತರ ಸಹಾಯ ಪಡೆದು ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.

ತನುಜಾ (55) ಹತ್ಯೆಯಾಗಿರುವ ಮಹಿಳೆಯಾಗಿದ್ದು, ಮನೆಯ ಕೆಲಸದ ಮಹಿಳೆ ಆಕೆಯನ್ನು ಉಸಿರುಗಟ್ಟಿಸಿ ಮನೆಯಲ್ಲಿದ್ದ ಚಿನ್ನಾಭರಣಗಳನ್ನು ದರೋಡೆ ಮಾಡಿ ಪರಾರಿಯಾಗಿದ್ದಾಳೆ ಎಂದು ಶಂಕಿಸಲಾಗಿದೆ.

crime, file photo
ಮಹಿಳೆಯರಿಗೆ ಕಿರುಕುಳ ನೀಡಿದ ಆರೋಪ: GRP ಕಾನ್‌ಸ್ಟೆಬಲ್ ಕಟ್ಟಿಹಾಕಿ ಬರ್ಬರ ಹತ್ಯೆ

ಪ್ರಶಾಸನ್ ನಗರ್ ಪ್ರದೇಶದಲ್ಲಿರುವ ಮೂರು ಅಂತಸ್ತಿನ ಮನೆಯ ಮೊದಲ ಮಹಡಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ನಿವೃತ್ತ ಪೊಲೀಸ್ ಅಧಿಕಾರಿ ವಿನಯ್ ರಂಜನ್ ರಾಯ್ ಈ ಘಟನೆ ನಡೆದಾಗ ನಗರದ ಹೊರಗೆ ಇದ್ದರು ಎಂದು ತಿಳಿದುಬಂದಿದೆ. ಹೈದರಾಬಾದ್ ನ ಪೊಲೀಸ್ ಆಯುಕ್ತ ವಿಸಿ ಸಜ್ಜನರ್ ಸೇರಿದಂತೆ ಹಲವು ಹಿರಿಯ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ವಿಧಿವಿಜ್ಞಾನ ತಂಡದವರು ಸ್ಥಳಕ್ಕೆ ಆಗಮಿಸಿ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಜ್ಯೂಬಿಲಿ ಹಿಲ್ಸ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com