ಹಾರ್ಮುಜ್ ಜಲಸಂಧಿ ಸಮೀಪ ದುರಂತ: ಹಡಗಿನಲ್ಲಿ ಭಾರೀ ಬೆಂಕಿ, ಭಾರತೀಯ ನಾವಿಕ ಸಾವು

ಬೆಂಕಿ ಕಾಣಿಸಿಕೊಂಡ ಬಳಿಕ ಹಡಗು ಪಲ್ಟಿಯಾಗಿದ್ದು, ಘಟನೆಯಲ್ಲಿ ಒಬ್ಬ ಭಾರತೀಯ ನಾವಿಕ ಸಾವನ್ನಪ್ಪಿದ್ದರೆ, ನಾಲ್ವರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
UAE reports drone, missile attack as Iran ceasefire strains
ಹಾರ್ಮುಜ್ ಜಲಸಂಧಿ (ಸಂಗ್ರಹ ಚಿತ್ರ)
Updated on

ದುಬೈ: ಹಾರ್ಮುಜ್ ಜಲಸಂಧಿ ಸಮೀಪದಲ್ಲಿ ಸಂಚರಿಸುತ್ತಿದ್ದ ಮರದ ಹಡಗಿನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಪರಿಣಾಮ ಭಾರತೀಯ ನಾವಿಕನೊಬ್ಬ ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ.

ಘಟನೆ ವೇಳೆ ಸರಕುಗಳನ್ನು ಸಾಗಿಸುತ್ತಿದ್ದ ಹಡಗಿನಲ್ಲಿ ಒಟ್ಟು 18 ಭಾರತೀಯ ಸಿಬ್ಬಂದಿ ಇದ್ದರು ಎಂದು ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ಬೆಂಕಿ ಕಾಣಿಸಿಕೊಂಡ ಬಳಿಕ ಹಡಗು ಪಲ್ಟಿಯಾಗಿದ್ದು, ಘಟನೆಯಲ್ಲಿ ಒಬ್ಬ ಭಾರತೀಯ ನಾವಿಕ ಸಾವನ್ನಪ್ಪಿದ್ದರೆ, ನಾಲ್ವರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಗಾಯಾಳುಗಳನ್ನು ದುಬೈ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿದುಬಂದಿದೆ.

UAE reports drone, missile attack as Iran ceasefire strains
ಭಾರತೀಯ ಹಡಗುಗಳ ಮೇಲೆ ಗುಂಡಿನ ದಾಳಿ: ಇರಾನ್‌ ರಾಯಭಾರಿಗೆ ಭಾರತ ಸಮನ್ಸ್‌; ಭದ್ರತೆ ಖಚಿತಪಡಿಸುವಂತೆ ಆಗ್ರಹ

ಉಳಿದ ಭಾರತೀಯರನ್ನು ಆ ಪ್ರದೇಶದಲ್ಲಿ ಸಾಗುತ್ತಿದ್ದ ಮತ್ತೊಂದು ಹಡಗಿನಲ್ಲಿ ರಕ್ಷಿಸಲಾಗಿದೆ. ಬೆಂಕಿಗೆ ನಿಖರ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಈ ಕುರಿತು ತನಿಖೆ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ.

ಈ ನಡುವೆ ದುಬೈನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಅಧಿಕಾರಿಗಳು ರಕ್ಷಿಸಲ್ಪಟ್ಟ ಭಾರತೀಯರನ್ನು ಭೇಟಿ ಮಾಡಿ ಮಾಹಿತಿ ಪಡೆದಿದ್ದಾರೆ. ಅಲ್ಲದೆ, ಹಡಗಿನ ಮಾಲೀಕರ ಸಂಪರ್ಕದಲ್ಲಿದ್ದು, ಅಗತ್ಯ ಸಹಾಯ ಒದಗಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com