ತಮಿಳುನಾಡು ಸರ್ಕಾರ ರಚನೆ ಸರ್ಕಸ್: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ನಿವೃತ್ತ ಐಪಿಎಸ್ ಅಧಿಕಾರಿ

ರಾಜ್ಯಪಾಲರು, ವಿಜಯ್ ಅವರಿಗೆ ಸರ್ಕಾರ ರಚಿಸಲು ಅವಕಾಶ ನೀಡುತ್ತಿಲ್ಲ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಹಾಗೂ ಪೊಲೀಸ್ ಮಹಾನಿರ್ದೇಶಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಐಪಿಎಸ್ ಅಧಿಕಾರಿ ಎಂ ರಾಮಸುಬ್ರಮಣಿ ಅವರು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
Supreme court
ಸುಪ್ರೀಂ ಕೋರ್ಟ್
Updated on

ನವದೆಹಲಿ: ತಮಿಳುನಾಡು ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿ ಐದು ದಿನ ಕಳೆದರೂ ಸರ್ಕಾರ ರಚನೆಯ ಸರ್ಕಸ್ ಮುಂದುವರೆದಿದ್ದು, ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಒಂದೆಡೆ ರಾಜ್ಯಪಾಲರು ಬಹುಮತ ಸಾಬೀತುಪಡಿಸಿದ ಬಳಿಕವೇ ನಟ ಜೋಸೆಫ್ ವಿಜಯ್ ನೇತೃತ್ವದ ಟಿವಿಕೆಗೆ ಸರ್ಕಾರ ರಚಿಸಲು ಅವಕಾಶ ನೀಡುವುದಾಗಿ ಹೇಳುತ್ತಿದ್ದಾರೆ. ಆದರೆ ರಾಜ್ಯಪಾಲರ ನಡೆಯನ್ನು ಪ್ರಶ್ನಿಸಿ ಮಾಜಿ ಐಪಿಎಸ್ ಅಧಿಕಾರಿಯೊಬ್ಬರು ಶನಿವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರ ಪಕ್ಷ ಅತಿ ಹೆಚ್ಚು ಸ್ಥಾನಗಳನ್ನು ಗೆದ್ದು ಏಕೈಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಟಿವಿಕೆ ಮುಖ್ಯಸ್ಥ ಸಿ ಜೋಸೆಫ್ ವಿಜಯ್ ಅವರಿಗೆ ಸರ್ಕಾರ ರಚಿಸಲು ಅವಕಾಶ ನೀಡುತ್ತಿಲ್ಲ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಹಾಗೂ ಪೊಲೀಸ್ ಮಹಾನಿರ್ದೇಶಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಐಪಿಎಸ್ ಅಧಿಕಾರಿ ಎಂ ರಾಮಸುಬ್ರಮಣಿ ಅವರು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ರಾಜ್ಯಪಾಲರು ವಿಧಾನಸಭೆಯ ಹೊರಗೆ, ರಾಜಭವನದಲ್ಲಿ ಬಹುಮತ ಸಾಬೀತುಪಡಿಸುವಂತೆ ಹೇಳುತ್ತಿರುವುದು ಅಸಂವಿಧಾನಿಕ ಎಂದು ಅವರು ಅರ್ಜಿಯಲ್ಲಿ ವಾದಿಸಿದ್ದಾರೆ.

Supreme court
ತಮಿಳುನಾಡು ರಾಜಕೀಯದಲ್ಲಿ ಬಿಗ್ ಟ್ವಿಸ್ಟ್: ನಾಳೆ ವಿಜಯ್ ಪ್ರಮಾಣವಚನ ಡೌಟ್; ಮತ್ತೆ ಸಂಖ್ಯಾಬಲ ಇಲ್ಲ ಎಂದ ಗವರ್ನರ್!

ರಾಜ್ಯಪಾಲರು ಟಿವಿಕೆಗೆ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವ ಅವಕಾಶವನ್ನು ನಿರಾಕರಿಸಲು ಸಾಧ್ಯವಿಲ್ಲ ಎಂದು ಅವರು ವಾದಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com