ಅಭಿಮಾನಿಗಳ ಹುಚ್ಚಾಟ: ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವಿಜಯ್ ಬೆಂಬಲಿಗ; ಸಾವು-ಬದುಕಿನ ನಡುವೆ ಹೋರಾಟ!

ತಮಿಳುನಾಡು ರಾಜಕೀಯದಲ್ಲಿ ಸರ್ಕಾರ ರಚನೆಯ ಸುತ್ತಲಿನ ಸಸ್ಪೆನ್ಸ್ ಮುಂದುವರೆದಿದೆ. ಟಿವಿಕೆ ಮುಖ್ಯಸ್ಥ ವಿಜಯ್ ಅವರ ಪ್ರಮಾಣವಚನ ಸಮಾರಂಭಕ್ಕೆ ಅವಕಾಶ ಸಿಗುತ್ತಿಲ್ಲ ಎಂದು ಬೇಸರಗೊಂಡು ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಅಭಿಮಾನಿಗಳ ಹುಚ್ಚಾಟ: ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವಿಜಯ್ ಬೆಂಬಲಿಗ; ಸಾವು-ಬದುಕಿನ ನಡುವೆ ಹೋರಾಟ!
Updated on

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಸರ್ಕಾರ ರಚನೆಯ ಸುತ್ತಲಿನ ಸಸ್ಪೆನ್ಸ್ ಮುಂದುವರೆದಿದೆ. ಟಿವಿಕೆ ಮುಖ್ಯಸ್ಥ ವಿಜಯ್ ಅವರ ಪ್ರಮಾಣವಚನ ಸಮಾರಂಭಕ್ಕೆ ಅವಕಾಶ ಸಿಗುತ್ತಿಲ್ಲ ಎಂದು ಬೇಸರಗೊಂಡು ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ. 40 ವರ್ಷದ ಇಸ್ಕಕಿಯಪ್ಪ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತೀವ್ರ ಸುಟ್ಟಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಶೇಕಡ 40ರಷ್ಟು ಸುಟ್ಟ ಗಾಯಗಳಾಗಿದ್ದು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ವಿಜಯ್ ಮುಖ್ಯಮಂತ್ರಿಯಾಗುವುದರಲ್ಲಿ ವಿಳಂಬವಾದ ಬಗ್ಗೆ ಅವರು ಅಸಮಾಧಾನಗೊಂಡಿದ್ದಾರೆ ಎಂದು ವರದಿಯಾಗಿದೆ.

ಈ ಮಧ್ಯೆ ವಿಸಿಕೆಯ ಬೆಂಬಲದಿಂದ ಟಿವಿಕೆಗೆ ಅತ್ಯಂತ ಮಹತ್ವದ ಎರಡು ಸ್ಥಾನಗಳು ಸೇರ್ಪಡೆಯಾಗಿದೆ. ವಿಜಯ್ ನೇತೃತ್ವದ ಮೈತ್ರಿಗೆ ಈಗಾಗಲೇ 116 ಶಾಸಕರ ಬೆಂಬಲವಿತ್ತು. ಇದರಲ್ಲಿ ಕಾಂಗ್ರೆಸ್‌ನ ಐದು ಶಾಸಕರು ಹಾಗೂ ಎಡಪಂಥೀಯ ಪಕ್ಷಗಳ ನಾಲ್ವರು ಶಾಸಕರೂ ಸೇರಿದ್ದಾರೆ. ವಿಸಿಕೆಯ ಇಬ್ಬರು ಶಾಸಕರ ಬೆಂಬಲ ಸಿಕ್ಕಿದ್ದರಿಂದ ಮೈತ್ರಿಯ ಬಲ 118ಕ್ಕೆ ಏರಿತ್ತು. ಜೊತೆಗೆ ಐಯುಎಂಎಲ್ ನ ಇಬ್ಬರು ಶಾಸಕರು ಸಹ ಬೆಂಬಲ ಸೂಚಿಸಿದ್ದರಿಂದ ಟಿವಿಕೆ ಬಲ 120ಕ್ಕೆ ತಲುಪಿದೆ. ಇನ್ನು ಮ್ಯಾಜಿಕ್ ನಂಬರ್ ಸಿಗುತ್ತಿದ್ದಂತೆ ವಿಜಯ್ ಸಂಜೆ ಲೋಕಭವನಕ್ಕೆ ತೆರಳಿ 120 ಶಾಸಕರ ಬೆಂಬಲದ ಪತ್ರವನ್ನು ರಾಜ್ಯಪಾಲರಿಗೆ ರವಾನಿಸಿದ್ದು ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು.

ಅಭಿಮಾನಿಗಳ ಹುಚ್ಚಾಟ: ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವಿಜಯ್ ಬೆಂಬಲಿಗ; ಸಾವು-ಬದುಕಿನ ನಡುವೆ ಹೋರಾಟ!
ದುಷ್ಟ ಶಕ್ತಿಗಳಿಂದ ರಕ್ಷಣೆ ಸಿಗಲಿ, ದೇಶಕ್ಕೆ ರಾಜ್ಯಕ್ಕೆ ಒಳಿತಾಗಲಿ: ವಿಜಯ್ ಬಹುಮತದ ಬೆನ್ನಲ್ಲೇ ಡಿಕೆ ಶಿವಕುಮಾರ್ ಹೇಳಿಕೆ; DCM ಮಾತಿನ ಮರ್ಮವೇನು?

108 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಅತಿ ದೊಡ್ಡ ಪಕ್ಷವಾಗಿ ಟಿವಿಕೆ ಹೊರಹೊಮ್ಮಿದ ಬಳಿಕ ವಿಜಯ್ ನಾಲ್ಕು ದಿನದಲ್ಲಿ ನಾಲ್ಕು ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ್ದರು. ಆದರೆ ಪ್ರಯತ್ನಗಳು ವಿಫಲವಾಗಿದ್ದವು. ಆದರೆ ಇಂದು 5ನೇ ಬಾರಿಗೆ ರಾಜ್ಯಪಾಲರನ್ನು ವಿಜಯ್ ಭೇಟಿಯಾಗಿದ್ದು ಸರ್ಕಾರ ರಚನೆಗೆ ರಾಜ್ಯಪಾಲರು ಅವಕಾಶ ನೀಡಿದ್ದಾರೆ. ಇನ್ನು ನಾಳೆ ಮಧ್ಯಾಹ್ನ 3 ಗಂಟೆಗೆ ವಿಜಯ್ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com