ಗೆಲುವಿನ ಅಂತರದ ಬಗ್ಗೆ ಹೊಸದಾಗಿ ಅರ್ಜಿ ಸಲ್ಲಿಸಿ: ಮಮತಾಗೆ ಸುಪ್ರೀಂ ಕೋರ್ಟ್ ಸೂಚನೆ

ಹಿರಿಯ ವಕೀಲ ಮತ್ತು ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು 31 ಸ್ಥಾನಗಳಲ್ಲಿ, ಗೆಲುವಿನ ಅಂತರವು ಡಿಲೀಟ್ ಮಾಡಲಾದ ಮತಗಳ ಸಂಖ್ಯೆಗಿಂತ ಕಡಿಮೆಯಾಗಿದೆ ಎಂದು ಆರೋಪಿಸಿದ್ದಾರೆ.
Supreme Court
ಮಮತಾ ಬ್ಯಾನರ್ಜಿ ಮತ್ತು ಸುಪ್ರೀಂ ಕೋರ್ಟ್
Updated on

ನವದೆಹಲಿ: ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ ಸಮಯದಲ್ಲಿ ಗೆಲುವಿನ ಅಂತರವು ಡಿಲೀಟ್ ಮಾಡಿದ ಮತಗಳಿಗಿಂತ ಕಡಿಮೆಯಾಗಿದೆ ಎಂದು ಆರೋಪಿಸಿದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಇತರರಿಗೆ ಹೊಸದಾಗಿ ಅರ್ಜಿಗಳನ್ನು ಸಲ್ಲಿಸಬಹುದು ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.

ಹಿರಿಯ ವಕೀಲ ಮತ್ತು ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು 31 ಸ್ಥಾನಗಳಲ್ಲಿ, ಗೆಲುವಿನ ಅಂತರವು ಡಿಲೀಟ್ ಮಾಡಲಾದ ಮತಗಳ ಸಂಖ್ಯೆಗಿಂತ ಕಡಿಮೆಯಾಗಿದೆ ಎಂದು ಆರೋಪಿಸಿ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠ ವಿಚಾರಣೆ ನಡೆಸಿತು.

ಚುನಾವಣಾ ಆಯೋಗವು, ಈ ಅರ್ಜಿಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದು ಚನಾವಣೆಗೆ ಸಂಬಂಧಿಸಿದ ಅರ್ಜಿಯಾಗಿದೆ. ಎಸ್‌ಐಆರ್‌ಗೆ ಸಂಬಂಧಿಸಿದ ವಿಷಯಗಳು ಮತ್ತು ಮತಗಳ ಸೇರ್ಪಡೆ ಅಥವಾ ಅಳಿಸುವಿಕೆಗೆ ಸಂಬಂಧಿಸಿದಂತೆ ಆಯೋಗಕ್ಕೆ ಮೇಲ್ಮನವಿ ಸಲ್ಲಿಸಬಹುದು ಎಂದು ಹೇಳಿದೆ.

Supreme Court
ಸುವೇಂದು ಪ್ರಮಾಣವಚನ ಬೆನ್ನಲ್ಲೇ CM ಸ್ಥಾನಕ್ಕೆ ರಾಜೀನಾಮೆ ನೀಡದಿದ್ದರೂ X, FB ಬಯೋ ಅಪ್‌ಡೇಟ್ ಮಾಡಿದ ಮಮತಾ!

ರಾಜ್ಯದಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯಲ್ಲಿ, ಬಿಜೆಪಿ 294 ಸದಸ್ಯ ಬಲದ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ 207 ಸ್ಥಾನಗಳನ್ನು ಪಡೆದುಕೊಂಡಿದ್ದು, ಟಿಎಂಸಿ ಕೇವಲ 80 ಸ್ಥಾನಗಳನ್ನು ಗೆದ್ದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com