

ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ್ದಾರೆ. ಅದರ ಬೆನ್ನಲೇ ಅವರ ಆಪ್ತ ಸ್ನೇಹಿತೆಯಾಗಿರುವ ನಟಿ ತ್ರಿಶಾ ಕೃಷ್ಣನ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಪ್ರೀತಿ ಕುರಿತು ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ.
The Love Is Always Louder ಎಂದು ಬರೆದುಕೊಂಡಿದ್ದಾರೆ. ನಟಿ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ವಿಜಯ್ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಧರಿಸಿದ್ದ ಸೀರೆಯಲ್ಲಿ ಫೋಟೋಗಳನ್ನು ಶೇರ್ ಮಾಡಿದ್ದಾರೆ. ಜೊತೆಗೆ The Love Is Always Louder ಎಂದು ಬರೆದುಕೊಂಡಿದ್ದಾರೆ.
ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಮಿಂಚಿದ್ದ ತ್ರಿಶಾ ಸಂಭ್ರಮ, ಸಡಗರ ಭಾರೀ ಕುತೂಹಲ ಕ್ರಿಯೇಟ್ ಮಾಡಿತ್ತು. ಇದೀಗ ಹಾಕಿದ ಪೋಸ್ಟ್ ಮತ್ತೆ ಹಲವು ಅರ್ಥಗಳನ್ನು ಹುಟ್ಟುಹಾಕಿದೆ. ಪ್ರಮಾಣ ವಚನ ಕಾರ್ಯಕ್ರಮಕ್ಕೆ ತ್ರಿಷಾ ಅವರು ತಾಯಿ ಉಮಾ ಕೃಷ್ಣನ್ ಅವರೊಂದಿಗೆ ಆಗಮಿಸಿದ್ದರು. ನೀಲಿ ಬಣ್ಣದ ರೇಷ್ಮೆ ಸೀರೆ ಧರಿಸಿ, ಮಲ್ಲಿಗೆ ಮುಡಿದು ಸಾಂಪ್ರದಾಯಿಕ ಉಡುಪಿನಲ್ಲಿ ಕಂಗೊಳಿಸಿದ್ದರು.
ವಿಜಯ್‌ಗೆ ಶುಭಕೋರಿದ್ದ ತ್ರಿಶಾ, ಈ ಕ್ಷಣ ತುಂಬಾ ಹೆಮ್ಮೆ ಎನಿಸುತ್ತಿದೆ. ವಿಜಯ್ ಅವರಿಗೆ ಬೆಂಬಲಿಸಿದ ತಮಿಳುನಾಡಿನ ಜನತೆಗೂ ಅಭಿನಂದನೆ ಸಲ್ಲಿಸುತ್ತೇನೆʼ ಎಂದಿದ್ದರು. ವಿಜಯ್ ಹಾಗೂ ತ್ರಿಶಾ ಅವರು ಗಿಲ್ಲಿ, ತಿರುಪಾಚಿ, ಆತಿ, ಕುರುವಿ , ಲಿಯೋ ಚಿತ್ರಗಳಲ್ಲಿ ಒಟ್ಟಿಗೆ ನಟಿಸಿದ್ದರು.
Advertisement