ಮಧ್ಯಪ್ರದೇಶ: ಅನ್ಯ ಸಮುದಾಯದ ಮಹಿಳೆಯೊಂದಿಗೆ ಹೋಟೆಲ್‌ನಲ್ಲಿ ವ್ಯಕ್ತಿ ಪತ್ತೆ; ಹಲ್ಲೆ, ಮೆರವಣಿಗೆ

ಹೋಟೆಲ್‌ ಒಂದರಲ್ಲಿ ಬೇರೆ ಸಮುದಾಯದ ಮಹಿಳೆಯೊಂದಿಗೆ ವ್ಯಕ್ತಿಯೊಬ್ಬರು ಪತ್ತೆಯಾದ ನಂತರ ಬಲಪಂಥೀಯ ಸಂಘಟನೆಯ ಸದಸ್ಯರು ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ, ಸಗಣಿ ಬಳಿದು ಬೀದಿಯಲ್ಲಿ ಮೆರವಣಿಗೆ ಮಾಡಿರುವ ಘಟನೆ ಭೋಪಾಲ್‌ ನಲ್ಲಿ ವರದಿಯಾಗಿದೆ
File image
MP Police (file photo)online desk
Updated on

ಭೋಪಾಲ್: ಹೋಟೆಲ್‌ ಒಂದರಲ್ಲಿ ಬೇರೆ ಸಮುದಾಯದ ಮಹಿಳೆಯೊಂದಿಗೆ ವ್ಯಕ್ತಿಯೊಬ್ಬರು ಪತ್ತೆಯಾದ ನಂತರ ಬಲಪಂಥೀಯ ಸಂಘಟನೆಯ ಸದಸ್ಯರು ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ, ಸಗಣಿ ಬಳಿದು ಬೀದಿಯಲ್ಲಿ ಮೆರವಣಿಗೆ ಮಾಡಿರುವ ಘಟನೆ ಭೋಪಾಲ್‌ ನಲ್ಲಿ ವರದಿಯಾಗಿದೆ. ಘಟನೆ ಸಂಬಂಧ ಪೊಲೀಸರು ಮಂಗಳವಾರ ಪ್ರಕರಣ ದಾಖಲಿಸಿದ್ದಾರೆ.

ಬೇರೆ ಸಮುದಾಯದ ಮಹಿಳೆಯೊಂದಿಗೆ ವ್ಯಕ್ತಿಯೊಬ್ಬರು ಪತ್ತೆಯಾಗಿದ್ದಾರೆ ಎಂಬ ಆರೋಪದ ಗುಂಪೊಂದು ಹೋಟೆಲ್ ಕೋಣೆಗೆ ನುಗ್ಗಿ ವ್ಯಕ್ತಿಯನ್ನು ಥಳಿಸುತ್ತಿರುವ ವಿಡಿಯೋ ವೈರಲ್ ಆಗತೊಡಗಿದೆ. ನಂತರ ಗುಂಪಿನ ಸದಸ್ಯರು ಆ ವ್ಯಕ್ತಿಯ ಮುಖಕ್ಕೆ ಸಗಣಿ ಹಚ್ಚಿ ಭೋಪಾಲ್ ಬೀದಿಯಲ್ಲಿ ಮೆರವಣಿಗೆ ನಡೆಸಿದ್ದಾರೆ.

File image
ಮಧ್ಯಪ್ರದೇಶ: ವೇದ ಶಾಲೆಯ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ: ಶಿಕ್ಷಕನ ವಿರುದ್ಧ ಪ್ರಕರಣ ದಾಖಲು

ಮೇ 10 ರಂದು ನಡೆದ ಘಟನೆಗೆ ಸಂಬಂಧಿಸಿದಂತೆ ದೂರುಗಳು ಬಂದ ನಂತರ, ಬಿಎನ್‌ಎಸ್ ಸೆಕ್ಷನ್ 299 (ಯಾವುದೇ ವರ್ಗದ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು) ಅಡಿಯಲ್ಲಿ ಅನಾಮಿಕ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಗೋವಿಂದಪುರ ಪೊಲೀಸ್ ಠಾಣೆಯ ಉಸ್ತುವಾರಿ ಅವಧೇಶ್ ತೋಮರ್ ತಿಳಿಸಿದ್ದಾರೆ.

ಹೆಚ್ಚಿನ ತನಿಖೆ ನಡೆಯುತ್ತಿದ್ದು, ಘಟನೆಯಲ್ಲಿ ಭಾಗಿಯಾಗಿರುವವರನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ" ಎಂದು ಅವರು ಹೇಳಿದರು. ವಿಷಯವನ್ನು ಅತ್ಯಂತ ಗಂಭೀರವೆಂದು ಪರಿಗಣಿಸಿರುವ ಎಐಎಂಐಎಂ, ಆರೋಪಿಗಳ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಬೇಕೆಂದು ಒತ್ತಾಯಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com