ಪ್ರಶ್ನೆ ಪತ್ರಿಕೆ ಸೋರಿಕೆ: NEET UG 2026 ರದ್ದು, ಸಿಬಿಐ ತನಿಖೆಗೆ ಆದೇಶ; ದೆಹಲಿಯಲ್ಲಿ ಭುಗಿಲೆದ್ದ ಪ್ರತಿಭಟನೆ; Video

ಪರೀಕ್ಷೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡಲು ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಎನ್‌ಟಿಎ ತಿಳಿಸಿದೆ. ಶೀಘ್ರದಲ್ಲೇ ಹೊಸ ದಿನಾಂಕ ಪ್ರಕಟಿಸುವುದಾಗಿ ಹೇಳಿದೆ.
NEET UG 2026 cancelled amid paper leak allegations; CBI inquiry ordered; protests erupt in Delhi
ದೆಹಲಿಯಲ್ಲಿ ಭುಗಿಲೆದ್ದ ಪ್ರತಿಭಟನೆ
Updated on

ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಇತರ ಅಕ್ರಮಗಳ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ, ಮೇ 3 ರಂದು ನಡೆದಿದ್ದ NEET UG 2026 ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(NTA) ಮಂಗಳವಾರ ರದ್ದುಗೊಳಿಸಿದೆ ಮತ್ತು ಪರೀಕ್ಷೆಯನ್ನು ಮತ್ತೆ ನಡೆಸಲಾಗುವುದು ಎಂದು ಘೋಷಿಸಿದೆ.

ಪರೀಕ್ಷೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡಲು ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಎನ್‌ಟಿಎ ತಿಳಿಸಿದೆ. ಶೀಘ್ರದಲ್ಲೇ ಹೊಸ ದಿನಾಂಕ ಪ್ರಕಟಿಸುವುದಾಗಿ ಹೇಳಿದೆ.

ಈ ಮಧ್ಯೆ ಆರೋಪಗಳ ಬಗ್ಗೆ ಸಮಗ್ರ ತನಿಖೆಗಾಗಿ ಕೇಂದ್ರ ಸರ್ಕಾರ, ಸಿಬಿಐ ತನಿಖೆಗೆ ಆದೇಶಿಸಿದೆ.

ಈ ಬೆಳವಣಿಗೆಯು ಭಾರತ ಮತ್ತು ವಿದೇಶಗಳಲ್ಲಿನ 5432 ಕೇಂದ್ರಗಳಲ್ಲಿ ಪರೀಕ್ಷೆ ಬರೆದ 22 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪರಿಣಾಮ ಬೀರಿದೆ.

ಕೇಂದ್ರ ಸರ್ಕಾರ ಈಗ ಮಧ್ಯೆ ಪ್ರವೇಶಿಸಿ, ಸಿಬಿಐ ತನಿಖೆಗೆ ಆದೇಶಿಸಿದೆ ಮತ್ತು ವ್ಯವಸ್ಥೆಯಲ್ಲಿ ನಂಬಿಕೆಯನ್ನು ಪುನಃಸ್ಥಾಪಿಸಲು ಮರು ಪರೀಕ್ಷೆಯನ್ನು ಘೋಷಿಸಿದೆ.

ಕಳೆದ ಮೇ 3, 2026 ರಂದು ಭಾನುವಾರ ದೇಶಾದ್ಯಂತ ನೀಟ್ ಪರೀಕ್ಷೆ ನಡೆದಿತ್ತು. ಆದರೆ ರಾಜಸ್ಥಾನದಲ್ಲಿ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ವರದಿಗಳು ಹರಿದಾಡಿದ್ದವು. ಈ ಬಗ್ಗೆ ಮೇ 8 ರಂದು ಎನ್‌ಟಿಎ ಕೇಂದ್ರ ತನಿಖಾ ಸಂಸ್ಥೆಗಳಿಗೆ ಸ್ವತಂತ್ರ ಪರಿಶೀಲನೆ ನಡೆಸುವಂತೆ ಮನವಿ ಮಾಡಿತ್ತು.

ತನಿಖಾ ಸಂಸ್ಥೆಗಳು ಮತ್ತು ಕಾನೂನು ಜಾರಿ ಸಂಸ್ಥೆಗಳು ನೀಡಿದ ವರದಿಯನ್ನಾಧರಿಸಿ, ಕೇಂದ್ರ ಸರ್ಕಾರದ ಅನುಮೋದನೆಯೊಂದಿಗೆ ಪರೀಕ್ಷೆಯನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ.

ದೆಹಲಿಯಲ್ಲಿ ಭುಗಿಲೆದ್ದ ಪ್ರತಿಭಟನೆ

ಏತನ್ಮಧ್ಯೆ, ಕಾಂಗ್ರೆಸ್‌ನ ವಿದ್ಯಾರ್ಥಿ ವಿಭಾಗವಾದ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ(ಎನ್‌ಎಸ್‌ಯುಐ) ನವದೆಹಲಿಯ ಶಾಸ್ತ್ರಿ ಭವನದ ಹೊರಗೆ ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿತು.

ನೀಟ್ ಪರೀಕ್ಷೆಯಲ್ಲಿ "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ" "ಪತ್ರಿಕೆ ಸೋರಿಕೆ, ಮೋದಿ ಸರ್ಕಾರ ದುರ್ಬಲ" ಮತ್ತು "ವೈದ್ಯರ ಪದವಿ ಮಾರಾಟಕ್ಕಿದೆ" ಎಂದು ಬರೆದಿರುವ ಫಲಕಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು.

NEET UG 2026 cancelled amid paper leak allegations; CBI inquiry ordered; protests erupt in Delhi
ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3 ರಂದು ನಡೆದಿದ್ದ NEET ಪರೀಕ್ಷೆ ರದ್ದು; ಸಿಬಿಐ ತನಿಖೆಗೆ ಆದೇಶ!

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com