ಮುಲಾಯಂ ಸಿಂಗ್ ಯಾದವ್ ಪುತ್ರ ಪ್ರತೀಕ್ ನಿಧನ: 38 ವರ್ಷಕ್ಕೆ ಇಹಲೋಕ ತ್ಯಜಿಸಿದ BJP ನಾಯಕಿ ಅಪರ್ಣಾ ಪತಿ!

ಫಿಟ್ನೆಸ್ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದ ಪ್ರತೀಕ್‌, ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದರು. ಅವರ ಪತ್ನಿ ಅಪರ್ಣಾ ಯಾದವ್ ಬಿಜೆಪಿ ನಾಯಕಿಯಾಗಿದ್ದಾರೆ.
Aparna And prateek yadav
ಅಪರ್ಣಾ ಮತ್ತು ಪ್ರತೀಕ್ ಯಾದವ್
Updated on

ಲಕ್ನೋ: ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ಪುತ್ರ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್‌ ಯಾದವ್‌ ಅವರ ಮಲಸಹೋದರ ಪ್ರತೀಕ್ ಯಾದವ್(38) ಲಖ್ನೋದ ಸಿವಿಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಫಿಟ್ನೆಸ್ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದ ಪ್ರತೀಕ್‌, ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದರು. ಅವರ ಪತ್ನಿ ಅಪರ್ಣಾ ಯಾದವ್ ಬಿಜೆಪಿ ನಾಯಕಿಯಾಗಿದ್ದಾರೆ.

ಪ್ರತೀಕ್‌ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಸಮಾಜವಾದಿ ಪಕ್ಷ, ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದೆ. ಪ್ರತೀಕ್ ಯಾದವ್ ಅವರ ನಿಧನವು ತೀವ್ರ ದುಃಖ ತಂದಿದೆ. ಭಗವಂತನು ಅಗಲಿದ ಆತ್ಮಕ್ಕೆ ಶಾಂತಿ ನೀಡಲಿ ಎಂದು ಬರೆದುಕೊಂಡಿದೆ.

ಪ್ರತೀಕ್ ಯಾದವ್ ಅವರ ಸಾವಿಗೆ ನಿಖರವಾದ ಕಾರಣ ಮರಣೋತ್ತರ ಪರೀಕ್ಷೆಯ ವರದಿ ಬಿಡುಗಡೆಯಾದ ನಂತರವೇ ತಿಳಿದುಬರಲಿದೆ. ಆದಾಗ್ಯೂ, ಪ್ರಕರಣವು ಅತ್ಯಂತ ಅನುಮಾನಾಸ್ಪದವಾಗಿದೆ. ವೈದ್ಯರ ತಂಡವು ಪ್ರತೀಕ್ ಯಾದವ್ ಅವರ ಆರಂಭಿಕ ಮರಣೋತ್ತರ ಪರೀಕ್ಷೆಯನ್ನು ನಡೆಸುತ್ತಿದೆ.

Aparna And prateek yadav
Dilip Raj Passes Away: ಸ್ಯಾಂಡಲ್ ವುಡ್ ನಟ, ನಿರ್ಮಾಪಕ ದಿಲೀಪ್ ರಾಜ್​ ನಿಧನ

ಮರಣೋತ್ತರ ಪರೀಕ್ಷೆಯನ್ನು ವೀಡಿಯೊ ಚಿತ್ರೀಕರಣ ಮಾಡಲಾಗುತ್ತಿದೆ. ಬುಧವಾರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಅವರ ಮನೆಯ ಅಡುಗೆಮನೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪ್ರತೀಕ್ ಯಾದವ್ ಪತ್ತೆಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅವರ ದೇಹದ ಮೇಲೆ ಕೆಲವು ಗಾಯಗಳು ಸಹ ಕಂಡುಬಂದಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com