ಮ್ಯಾಜಿಕ್ ವ್ಯಾನ್-ಟ್ರಕ್ ಮುಖಾಮುಖಿ ಡಿಕ್ಕಿ: ಭೀಕರ ಅಪಘಾತದಲ್ಲಿ 10 ಮಂದಿ ಸಾವು; ಪರಿಹಾರ ಘೋಷಿಸಿದ ಪ್ರಧಾನಿ

ಪೊಲೀಸ್ ಮೂಲಗಳ ಪ್ರಕಾರ, ಬಲಿಯಾದವರೆಲ್ಲರೂ ಟಾಟಾ ಮ್ಯಾಜಿಕ್ ವಾಹನದಲ್ಲಿ ಪ್ರಯಾಣಿಸುತ್ತಿದ್ದರು. ಒಂಬತ್ತು ಜನ ಸ್ಥಳದಲ್ಲೇ ಸಾವನ್ನಪ್ಪಿದರೆ, ಒಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
10 killed in van-truck collision in UP’s Lakhimpur Kheri; PM Modi announces ex gratia for injured, deceased
ಮ್ಯಾಜಿಕ್ ವ್ಯಾನ್-ಟ್ರಕ್ ಮುಖಾಮುಖಿ ಡಿಕ್ಕಿ
Updated on

ಲಖನೌ: ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ ವ್ಯಾನ್ ಹಾಗೂ ಟ್ರಕ್‌ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಕನಿಷ್ಠ 10 ಜನ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ಬಲಿಯಾದವರೆಲ್ಲರೂ ಟಾಟಾ ಮ್ಯಾಜಿಕ್ ವಾಹನದಲ್ಲಿ ಪ್ರಯಾಣಿಸುತ್ತಿದ್ದರು. ಒಂಬತ್ತು ಜನ ಸ್ಥಳದಲ್ಲೇ ಸಾವನ್ನಪ್ಪಿದರೆ, ಒಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ಜಿಲ್ಲಾ ಕೇಂದ್ರದಿಂದ ಸುಮಾರು 40 ಕಿ.ಮೀ ದೂರದಲ್ಲಿರುವ ಪಿಲಿಭಿತ್-ಬಸ್ತಿ ಹೆದ್ದಾರಿಯಲ್ಲಿರುವ ಅಡ್ಲಿಸ್‌ಪುರ್ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ.

ಲಖಿಂಪುರ ಖೇರಿಯಿಂದ ಸಿಸೈಯಾಗೆ ಪ್ರಯಾಣಿಸುತ್ತಿದ್ದ ಟಾಟಾ ಮ್ಯಾಜಿಕ್ ವಾಹನವು ಬಹ್ರೈಚ್‌ನಿಂದ ವೇಗವಾಗಿ ಬರುತ್ತಿದ್ದ ಟ್ರಕ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ ಎಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ. ಅಪಘಾತದ ನಂತರ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

10 killed in van-truck collision in UP’s Lakhimpur Kheri; PM Modi announces ex gratia for injured, deceased
ನಿಶ್ಚಿತಾರ್ಥ ಮುಗಿಸಿ ವಾಪಸ್ ಬರುತ್ತಿದ್ದಾಗ ಟ್ರಕ್​ಗೆ ಟೆಂಪೋ ಡಿಕ್ಕಿ: 12 ಜನ ಸಾವು, 25 ಮಂದಿ ಸ್ಥಿತಿ ಗಂಭೀರ!

ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರ ಘೋಷಿಸಿದ್ದಾರೆ.

"ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ನಡೆದ ಅಪಘಾತದ ಬಗ್ಗೆ ಕೇಳಿ ತೀವ್ರ ದುಃಖವಾಯಿತು. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಾಳುಗಳು ಆದಷ್ಟು ಬೇಗ ಗುಣಮುಖರಾಗಲಿ. ಮೃತರ ಕುಟುಂಬಕ್ಕೆ ಪಿಎಂಎನ್‌ಆರ್‌ಎಫ್‌ನಿಂದ ತಲಾ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರ ನೀಡಲಾಗುವುದು" ಎಂದು ಪ್ರಧಾನಿ ಮೋದಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com