ನಿಶ್ಚಿತಾರ್ಥ ಮುಗಿಸಿ ವಾಪಸ್ ಬರುತ್ತಿದ್ದಾಗ ಟ್ರಕ್​ಗೆ ಟೆಂಪೋ ಡಿಕ್ಕಿ: 12 ಜನ ಸಾವು, 25 ಮಂದಿ ಸ್ಥಿತಿ ಗಂಭೀರ!

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಸೋಮವಾರ ನಿಶ್ಚಿತಾರ್ಥ ಕಾರ್ಯಕ್ರಮ ಮುಗಿಸಿ ಹೋಗುತ್ತಿದ್ದಾಗ ಟೆಂಪೋ ಮತ್ತು ಟ್ರಕ್‌ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 12 ಜನರು ಸಾವನ್ನಪ್ಪಿದ್ದಾರೆ.
ನಿಶ್ಚಿತಾರ್ಥ ಮುಗಿಸಿ ವಾಪಸ್ ಬರುತ್ತಿದ್ದಾಗ ಟ್ರಕ್​ಗೆ ಟೆಂಪೋ ಡಿಕ್ಕಿ: 12 ಜನ ಸಾವು, 25 ಮಂದಿ ಸ್ಥಿತಿ ಗಂಭೀರ!
Updated on

ಪಾಲ್ಘರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಸೋಮವಾರ ನಿಶ್ಚಿತಾರ್ಥ ಕಾರ್ಯಕ್ರಮ ಮುಗಿಸಿ ಹೋಗುತ್ತಿದ್ದಾಗ ಟೆಂಪೋ ಮತ್ತು ಟ್ರಕ್‌ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 12 ಜನರು ಸಾವನ್ನಪ್ಪಿದ್ದು, 25 ಜನರು ಗಾಯಗೊಂಡಿದ್ದಾರೆ. ಹಲವರ ಸ್ಥಿತಿ ಗಂಭೀರವಾಗಿದೆ. ಮೃತರು ಮತ್ತು ಗಾಯಗೊಂಡವರಲ್ಲಿ ಮಹಿಳೆಯರು ಮತ್ತು ಚಿಕ್ಕ ಮಕ್ಕಳು ಸೇರಿದ್ದಾರೆ.

ದಹನು ತಾಲೂಕಿನ ಧನಿವಾರಿ ಗ್ರಾಮದ ಬಳಿ ಸಂಜೆ 4 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. 50ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತ ಟೆಂಪೋ ಬಾಪುಗಾಂವ್ ಖಡ್ಕಿಪದ ಗ್ರಾಮದ ನಿವಾಸಿ ಬಲರಾಮ್ ಜೈರಾಮ್ ದಂಡೇಕರ್ ಅವರ ನಿಶ್ಚಿತಾರ್ಥ ಸಮಾರಂಭ ಮುಗಿಸಿಕೊಂಡು ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ನಿಶ್ಚಿತಾರ್ಥ ಮುಗಿಸಿ ವಾಪಸ್ ಬರುತ್ತಿದ್ದಾಗ ಟ್ರಕ್​ಗೆ ಟೆಂಪೋ ಡಿಕ್ಕಿ: 12 ಜನ ಸಾವು, 25 ಮಂದಿ ಸ್ಥಿತಿ ಗಂಭೀರ!
ಮ್ಯಾಜಿಕ್ ವ್ಯಾನ್-ಟ್ರಕ್ ಮುಖಾಮುಖಿ ಡಿಕ್ಕಿ: ಭೀಕರ ಅಪಘಾತದಲ್ಲಿ 10 ಮಂದಿ ಸಾವು; ಪರಿಹಾರ ಘೋಷಿಸಿದ ಪ್ರಧಾನಿ

ಈ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ 12 ಜನರು ಸಾವನ್ನಪ್ಪಿದ್ದರು. 25ಕ್ಕೂ ಹೆಚ್ಚು ಜನರು ಗಾಯಗೊಂಡರು. ಗಾಯಾಳುಗಳನ್ನು ಚಿಕಿತ್ಸೆಗಾಗಿ ಕಾಸಾ ಉಪ-ಜಿಲ್ಲಾ ಆಸ್ಪತ್ರೆ ಮತ್ತು ಹತ್ತಿರದ ಇತರ ವೈದ್ಯಕೀಯ ಕೇಂದ್ರಗಳಿಗೆ ಕರೆದೊಯ್ಯಲಾಯಿತು ಎಂದು ಕಾಸಾ ಪೊಲೀಸ್ ಠಾಣೆಯ ಸೀನಿಯರ್ ಇನ್ಸ್‌ಪೆಕ್ಟರ್ ಅಮರ್ ಪಾಟೀಲ್ ಹೇಳಿದರು.

ಟೆಂಪೋ ತನ್ನ ಸಾಮರ್ಥ್ಯಕ್ಕಿಂತ ಹೆಚ್ಚಿನ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿತ್ತು ಎಂದು ಪ್ರಾಥಮಿಕ ತನಿಖೆಗಳು ಸೂಚಿಸುತ್ತವೆ. ಅತಿವೇಗ, ಕಿರಿದಾದ ರಸ್ತೆ ಮತ್ತು ಟೆಂಪೋ ಚಾಲಕನ ನಿಯಂತ್ರಣ ತಪ್ಪಿರುವುದು ಅಪಘಾತಕ್ಕೆ ಪ್ರಮುಖ ಕಾರಣಗಳೆಂದು ನಂಬಲಾಗಿದೆ. ಗಾಯಗೊಂಡ ಹಲವಾರು ಪ್ರಯಾಣಿಕರ ಸ್ಥಿತಿ ಇನ್ನೂ ಗಂಭೀರವಾಗಿರುವುದರಿಂದ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com