

ತಿರುವನಂತಪುರಂ: ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಅವರು ಸೋಮವಾರ ಪ್ರಮಾಣವಚನ ಸ್ವೀಕರಿಸಿದ್ದು, ಇವರ ಜೊತೆಗೆ 20 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ತಿರುವನಂತಪುರಂನ ಸೆಂಟ್ರಲ್ ಸ್ಟೇಡಿಯಂನಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ವಿಡಿ ಸತೀಶನ್ ಹಾಗೂ 20 ಮಂದಿ ಸಚಿವರಿಗ ರಾಜ್ಯಪಾಲ ಆರ್.ವಿ. ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ಪ್ರಮಾಣ ವಚನ ಬೋಧಿಸಿದರು.
ಸಮಾರಂಭದಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ, ಡಿಕೆ.ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ರೇವಂತ್ ರೆಡ್ಡಿ, ಕೆಸಿ.ವೇಣುಗೋಪಾಲ್, ರಾಜೀವ್ ಚಂದ್ರಶೇಖರ್, ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು.
ಸತೀಶನ್ ಜೊತೆಗೆ 20 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಕಾಂಗ್ರೆಸ್ನಿಂದ 11 ಮಂದಿ, ಮುಸ್ಲಿಂ ಲೀಗ್ನ ಐವರು ಹಾಗೂ ಮಾನ್ಸ್ ಜೋಸೆಫ್ (ಕೇರಳ ಕಾಂಗ್ರೆಸ್-ಜೋಸೆಫ್), ಶಿಬು ಬೇಬಿ ಜಾನ್ (ಕ್ರಾಂತಿಕಾರಿ ಸಮಾಜವಾದಿ ಪಕ್ಷ), ಅನೂಪ್ ಜಾಕೋಬ್ (ಕೇರಳ ಕಾಂಗ್ರೆಸ್-ಜಾಕೋಬ್), ಮತ್ತು ಸಿಪಿ ಜಾನ್ (ಕಮ್ಯುನಿಸ್ಟ್ ಮಾರ್ಕ್ಸ್ವಾದಿ ಪಕ್ಷ) ಅವರು ಪ್ರಮಾಣವಚನ ಸ್ವೀರಿಸಿದ್ದಾರೆ.
ಮುಖ್ಯಮಂತ್ರಿ ಹುದ್ದೆಯೊಂದಿಗೆ 11 ಮಂದಿ ಕಾಂಗ್ರೆಸ್ ಶಾಸಕರು ಕೇರಳ ನೂತನ ಸಂಪುಟದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಇದರೊಂದಿಗೆ ಭಾರತೀಯ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ನ ಐವರು, ಕೇರಳ ಕಾಂಗ್ರೆಸ್ (ಜೋಸೆಫ್), ಕ್ರಾಂತಿಕಾರಿ ಸಮಾಜವಾದಿ ಪಕ್ಷ (ಆರ್‌ಎಸ್‌ಪಿ), ಕೇರಳ ಕಾಂಗ್ರೆಸ್ (ಜಾಕೋಬ್) ಮತ್ತು ಕಮ್ಯುನಿಸ್ಟ್ ಮಾರ್ಕ್ಸ್ವಾದಿ ಪಕ್ಷ (ಸಿಎಂಪಿ) ಗಳು ತಲಾ ಒಂದು ಸ್ಥಾನ ಪಡೆದಿವೆ.
Advertisement