Sex Video ಪ್ರಕರಣ: ಸ್ವಯಂ ಘೋಷಿತ ದೇವಮಾನವ ಖರತ್‌ ಈಗ ED ವಶಕ್ಕೆ; 70 ಕೋಟಿ ರೂ ಅಕ್ರಮ ಹಣ ವರ್ಗಾವಣೆ ಆರೋಪ!

ಅತ್ಯಾಚಾರ ಮತ್ತು ವಂಚನೆ ಆರೋಪದ ನಂತರ ಇದೀಗ 70 ಕೋಟಿ ರೂ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅಶೋಕ್ ಖರತ್ ಅವರನ್ನು ಇಂದು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿದೆ.
Ashok Kharat
ಅಶೋಕ್ ಖರತ್‌
Updated on

ನಾಸಿಕ್: ನಾಸಿಕ್‌ನಲ್ಲಿ ಜ್ಯೋತಿಷ್ಯದ ಹೆಸರಿನಲ್ಲಿ 150ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ವಿಡಿಯೋ ಮಾಡಿ ಜೈಲು ಪಾಲಾಗಿರುವ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರನ್ನು ಮಂಗಳವಾರ ಜಾರಿ ನಿರ್ದೇಶನಾಲಯ ಬಂಧಿಸಿದೆ.

ಅತ್ಯಾಚಾರ ಮತ್ತು ವಂಚನೆ ಆರೋಪದ ನಂತರ ಇದೀಗ 70 ಕೋಟಿ ರೂ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅಶೋಕ್ ಖರತ್ ಅವರನ್ನು ಇಂದು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿದೆ.

ನ್ಯಾಯಾಂಗ ಬಂಧನದಲ್ಲಿರುವ ಖರತ್ ಅವರನ್ನು ನಾಸಿಕ್ ಜೈಲಿನಿಂದ ಪ್ರೊಡಕ್ಷನ್ ವಾರಂಟ್ ಮೇಲೆ ವಿಶೇಷ ಪಿಎಂಎಲ್ಎ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ನ್ಯಾಯಾಲಯ, ಆರೋಪಿಯನ್ನು ಇಡಿ ವಶಕ್ಕೆ ನೀಡಿದೆ.

ಕಡ್ಡಾಯ ವಿಧಿವಿಧಾನಗಳನ್ನು ಪೂರ್ಣಗೊಳಿಸಿದ ನಂತರ ಇಡಿ ಅವರನ್ನು ಔಪಚಾರಿಕವಾಗಿ ಬಂಧಿಸಿತು ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಬುಧವಾರ ಮತ್ತೆ ವಿಶೇಷ ಪಿಎಂಎಲ್‌ಎ ನ್ಯಾಯಾಲಯದ ಮುಂದೆ ಖರತ್ ಅವರನ್ನು ಹಾಜರುಪಡಿಸಲಾಗುವುದು. ಆಗ ಇಡಿ ಈ ವಿಷಯದ ಕುರಿತು ಹೆಚ್ಚಿನ ತನಿಖೆಗಾಗಿ ರಿಮಾಂಡ್ ಗೆ ಕೋರಲಿದೆ ಎಂದು ಅವರು ತಿಳಿಸಿದ್ದಾರೆ.

Ashok Kharat
TCS ಲವ್ ಜಿಹಾದ್ ಒಂದು ಪಿತೂರಿ; ಸ್ವಯಂ ಘೋಷಿತ 'ದೇವಮಾನವ' ಅಶೋಕ್ ಖರತ್ Sex Video ಕೇಸ್ ಗೆ ಲಿಂಕ್!

ವಿವಾದಾತ್ಮಕ ಸ್ವಯಂ ಘೋಷಿತ ದೇವಮಾನವನ ವಿರುದ್ಧ ಸುಲಿಗೆ, ಜ್ಯೋತಿಷ್ಯದ ಹೆಸರಿನಲ್ಲಿ ಮಹಿಳೆಯರಿಗೆ ವಂಚನೆ, ಮಾದಕವಸ್ತು ಬಳಕೆ ಸೇರಿದಂತೆ ಇತರ ಆರೋಪಗಳ ಮೇಲೆ ನಾಸಿಕ್ ಪೊಲೀಸರು ದಾಖಲಿಸಿದ ಎಫ್‌ಐಆರ್ ಅನ್ನು ಗಮನದಲ್ಲಿಟ್ಟುಕೊಂಡು, ಏಪ್ರಿಲ್ 6 ರಂದು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‌ಎ) ಅಡಿಯಲ್ಲಿ ಖರತ್ ವಿರುದ್ಧ ಇಡಿ ಕ್ರಿಮಿನಲ್ ಮೊಕದ್ದಮೆ ಸಹ ದಾಖಲಿಸಿದೆ.

ಹಲವು ವರ್ಷಗಳಿಂದ ಮಹಾರಾಷ್ಟ್ರದ ಹಲವಾರು ಪ್ರಮುಖ ರಾಜಕಾರಣಿಗಳು ಸೇರಿದಂತೆ ನೂರಾರು ಮಹಿಳೆಯರು ಖರತ್ ಅವರನ್ನು ಭೇಟಿ ಮಾಡಿದ್ದು, ಹಲವರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಮೂರು ವರ್ಷಗಳ ಕಾಲ ತನ್ನ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿದ ನಂತರ ಮಾರ್ಚ್ 18 ರಂದು ಅಶೋಕ್ ಖರತ್ ಅವರನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com