'ಧುರಂಧರ್-2' ಸೇನಾ ರಹಸ್ಯ ಬಹಿರಂಗಪಡಿಸಿದೆಯೇ?: ಪರಿಶೀಲಿಸುವಂತೆ ಕೇಂದ್ರಕ್ಕೆ ದೆಹಲಿ ಹೈಕೋರ್ಟ್ ಸೂಚನೆ

'ಧುರಂಧರ್' ಸಿನಿಮಾ ಸಶಸ್ತ್ರ ಪಡೆಗಳ ಕಾರ್ಯಾಚರಣೆಯ ವಿವರಗಳನ್ನು ಬಹಿರಂಗಪಡಿಸಿದೆ ಮತ್ತು ದೇಶದ ಭದ್ರತೆ ಹಾಗೂ ಸಮಗ್ರತೆಗೆ ಅಪಾಯವನ್ನುಂಟುಮಾಡಬಹುದು ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.
Did Dhurandhar Out Details Of Army Ops?Delhi High Court Asks Centre To Check
ಧುರಂಧರ್ 2 ಚಿತ್ರದ ಪೋಸ್ಟರ್
Updated on

ನವದೆಹಲಿ: ಬಾಕ್ಸ್ ಆಫೀಸ್ ನಲ್ಲಿ ಅಬ್ಬರಿಸಿದ ಬಾಲಿವುಡ್ ನಟ ರಣವೀರ್ ಸಿಂಗ್ ಅಭಿನಯದ ಧುರಂಧರ್ 2 ಚಿತ್ರವು ಸೇನಾಪಡೆಗಳ ಕಾರ್ಯಾಚರಣೆಯ ವಿವರಗಳನ್ನು ಬಹಿರಂಗಪಡಿಸಿದೆ ಎಂಬ ಆರೋಪದ ಬಗ್ಗೆ ಪರಿಶೀಲಿಸುವಂತೆ ದೆಹಲಿ ಹೈಕೋರ್ಟ್ ಬುಧವಾರ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

ಸಶಸ್ತ್ರ ಸೀಮಾ ಬಲ್(ಎಸ್‌ಎಸ್‌ಬಿ)ನ ಹೆಡ್ ಕಾನ್‌ಸ್ಟೆಬಲ್ ದೀಪಕ್ ಕುಮಾರ್ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ಯ ವಿಚಾರಣೆ ನಡೆಸಿದ ಹೈಕೋರ್ಟ್, ಈ ಚಲನಚಿತ್ರವು ಕಾಲ್ಪನಿಕ ಕಥೆಯಾಗಿರಬಹುದು. ಆದರೆ ಭದ್ರತಾ ಪಡೆ ಸಿಬ್ಬಂದಿ ಎತ್ತಿರುವ ಕಳವಳಗಳನ್ನು ನಿರ್ಲಕ್ಷಿಸಲಾಗುವುದಿಲ್ಲ ಎಂದು ಹೇಳಿದೆ.

'ಧುರಂಧರ್' ಸಿನಿಮಾ ಸಶಸ್ತ್ರ ಪಡೆಗಳ ಕಾರ್ಯಾಚರಣೆಯ ವಿವರಗಳನ್ನು ಬಹಿರಂಗಪಡಿಸಿದೆ ಮತ್ತು ದೇಶದ ಭದ್ರತೆ ಹಾಗೂ ಸಮಗ್ರತೆಗೆ ಅಪಾಯವನ್ನುಂಟುಮಾಡಬಹುದು ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

Did Dhurandhar Out Details Of Army Ops?Delhi High Court Asks Centre To Check
ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿದ 'ಧುರಂಧರ್ 2': ವಿಶ್ವಾದ್ಯಂತ 1564 ಕೋಟಿ ರೂ ಕಲೆಕ್ಷನ್; ಭಾರತದಲ್ಲಿ 1000 ಕೋಟಿ ಕ್ಲಬ್‌'ನತ್ತ!

ಧುರಂಧರ್: ದಿ ರಿವೆಂಜ್ ಅಧಿಕೃತ ರಹಸ್ಯ ಕಾಯ್ದೆಯ ನಿಬಂಧನೆಗಳನ್ನು ಉಲ್ಲಂಘಿಸಿದೆ ಎಂಬ ಆರೋಪಗಳನ್ನು ಪರಿಶೀಲಿಸುವಂತೆ ನ್ಯಾಯಾಲಯವು ಕೇಂದ್ರ ಸರ್ಕಾರ ಮತ್ತು ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಗೆ(ಸಿಬಿಎಫ್‌ಸಿ) ನಿರ್ದೇಶಿಸಿದೆ.

ಮುಖ್ಯ ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಉಪಾಧ್ಯಾಯ ಮತ್ತು ನ್ಯಾಯಮೂರ್ತಿ ತೇಜಸ್ ಕರಿಯಾ ಅವರಿದ್ದ ವಿಭಾಗೀಯ ಪೀಠವು, ಈ ವಿಷಯವನ್ನು ಪರಿಗಣಿಸಿ, ದೀಪಕ್ ಕುಮಾರ್ ಅವರ ಮನವಿಯ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಂತೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯ(ಎಂಐಬಿ) ಮತ್ತು ಸಿಬಿಎಫ್‌ಸಿಗೆ ಸೂಚಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com