Cockroach Janta Partyಯ 'x' ಖಾತೆಗೆ ನಿರ್ಬಂಧ; ಇನ್‌ಸ್ಟಾಗ್ರಾಂಗೂ ಬ್ರೇಕ್?

ನಿರೀಕ್ಷೆಯಂತೆ ಭಾರತದಲ್ಲಿ ಕಾಕ್ರೋಚ್ ಜನತಾ ಪಕ್ಷದ 'x' ಖಾತೆಯನ್ನು ತಡೆಹಿಡಿಯಲಾಗಿದೆ ಎಂದು ಅಭಿಜೀತ್ ದೀಪ್ಕೆ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
Representation purpose only
ಸಂಗ್ರಹ ಚಿತ್ರ
Updated on

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರ ಹೇಳಿಕೆಗೆ ವಿರೋಧವಾಗಿ ಆರಂಭವಾದ ಕಾಕ್ರೋಚ್ ಜನತಾ ಪಾರ್ಟಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದ್ದು, ಇದಕ್ಕೆ ಬ್ರೇಕ್ ಹಾಕಲು ಭಾರತದಲ್ಲಿ ಕಾಕ್ರೋಚ್ ಜನತಾ ಪಕ್ಷದ X ಖಾತೆಯನ್ನು ತಡೆಹಿಡಿಯಲಾಗಿದೆ ಎಂದು ಅದರ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ಹೇಳಿದ್ದಾರೆ.

ಕಳೆದ ವಾರ ಆರಂಭವಾದ ವಿಡಂಬನಾತ್ಮಕ ಕಾಕ್ರೋಚ್ ಜನತಾ ಪಕ್ಷ(CJP)ದ X ಖಾತೆಯನ್ನು ತಡೆಹಿಡಿಯುವವರೆಗೆ 6 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್‌ಗಳನ್ನು ಹೊಂದಿದ್ದು, ಭಾರತದ ರಾಜಕೀಯ ವಲಯ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ.

ನಿರೀಕ್ಷೆಯಂತೆ ಭಾರತದಲ್ಲಿ ಕಾಕ್ರೋಚ್ ಜನತಾ ಪಕ್ಷದ 'x' ಖಾತೆಯನ್ನು ತಡೆಹಿಡಿಯಲಾಗಿದೆ ಮತ್ತು ಇನ್‌ಸ್ಟಾಗ್ರಾಂ ಅನ್ನು ಹ್ಯಾಕ್ ಮಾಡಲು ಯತ್ನಿಸಲಾಗುತ್ತಿದೆ ಎಂದು ಅಭಿಜೀತ್ ದೀಪ್ಕೆ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

Representation purpose only
'ಸುಪ್ರೀಂ' ಸಿಜೆಐ ಹೇಳಿಕೆಗೆ ಟಕ್ಕರ್: Cockroach Janta Party ಕಟ್ಟಿದ ಜೆನ್‌ ಝೀಗಳು; 40,000ಕ್ಕೂ ಹೆಚ್ಚು ಯುವಕರ ಸೇರ್ಪಡೆ; ಸಂಚಲನ!

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಯುವ ನಿರುದ್ಯೋಗಿ ಯುವಕರು 'ಜಿರಳೆಗಳಂತೆ' ಎಂದು ಟೀಕಿಸಿದ್ದರು. ಅವರಲ್ಲಿ ಕೆಲವರು ಮಾಧ್ಯಮಗಳಲ್ಲಿ, ಇನ್ನು ಕೆಲವರು ಸಾಮಾಜಿಕ ಮಾಧ್ಯಮದಲ್ಲಿದ್ದರೆ, ಇನ್ನು ಕೆಲವರು ಆರ್‌ಟಿಐ ಕಾರ್ಯಕರ್ತರಾಗಿದ್ದಾರೆ’ ಎಂದು ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್‌ ಶುಕ್ರವಾರ ಕಿಡಿಕಾರಿದ್ದರು. ಅವರ ಹೇಳಿಕೆ ಖಂಡಿಸಿ ವಿಭಿನ್ನ ಹೆಸರಿನಲ್ಲಿ ಆರಂಭಿಸಿದ ಕಾಕ್ರೋಚ್ ಜನತಾ ಪಕ್ಷ ಸೋಷಿಯಲ್ ಮೀಡಿಯಾದಲ್ಲಿ ಬಿರುಗಾಳಿ ಎಬ್ಬಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com